ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಓಬವ್ವ ಆತ್ಮರಕ್ಷಣಾ ಕಲೆ ತರಬೇತಿ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಓಬವ್ವ ಆತ್ಮ ರಕ್ಷಣಾ ಕಲೆ  ತರಬೇತಿ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಉದ್ಘಾಟಿಸಿದರು.

 

ವಿಧಾನಸೌಧದ ಮಹಾ ಮೆಟ್ಟಿಲುಗಳ ಮೇಲೆ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ನೀರೆರೆಯುವ ಮೂಲಕ ಸಿಎಂ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಆತ್ಮ ರಕ್ಷಗೆ ಕಲಿತ ವಿದ್ಯೆಯನ್ನು ಪ್ರದರ್ಶಿಸಿದರು.  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವ ಹಾಲಪ್ಪ ಆಚಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಎನ್. ರವಿಕುಮಾರ, ಮುನಿರಾಜುಗೌಡ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

Leave a Reply

ಹೊಸ ಪೋಸ್ಟ್‌