ಬೆಂಗಳೂರು: ಸರಕಾರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಪ್ರಸಕ್ತ ಸಾಲಿನ 3 ಮತ್ತು 4ನೇ ಕಂತಿನ ರೂ. 731 ಕೋ. ಅನುದಾನ ಬಿಡುಗಡೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಮತ್ತು ಕಲಬುರಗಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಧನ್ಯವಾದ ಅರ್ಪಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಸಚಿವ ಗೋವಿಂದ ಕಾರಜೋಳ, ಹಾಲಪ್ಪ ಆಚಾರ, ಶಾಸಕರಾದ ದೊಡ್ಡನಗೌಡ ಪಾಟೀಲ ಉಪಸ್ಥಿತರಿದ್ದರು.