ಎಸ್ಕಾಂ ಗಳಿಗೆ ಸಾಲ: ಷರತ್ತುಗಳನ್ನು ಕೈಬಿಡಲು ಕೇಂದ್ರಕ್ಕೆ ಮನವಿ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ: ಎಸ್ಕಾಂ ಗಳಿಗೆ ಸಾಲ ಪಡೆಯಲು ವಿಧಿಸಿರುವ ಕೆಲವು ಷರತ್ತುಗಳನ್ನು ಕೈಬಿಡುವಂತೆ ಕೇಂದ್ರ ಇಂಧನ ಸಚಿವ ಆರ್. ಕೆ. ಸಿಂಗ್ ಅವರಲ್ಲಿ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  ನವದೆಹಲಿಯಲ್ಲಿ ರಾಜ್ಯದ ಸಂಸದರ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಎಸ್ಕಾಂ ಗಳಿಗೆ ಸಹಾಯಧನ, ಅಂತರ ಇಲಾಖಾ ಬಿಲ್ ಗಳನ್ನು ಕೊಡಬೇಕೆನ್ನುವ ಷರತ್ತುಗಳನ್ನು ವಿಧಿಸಲಾಗಿದೆ. ಒಂದೇ ವರ್ಷಕ್ಕೆ ಇಷ್ಟು ಷರತ್ತುಗಳನ್ನು ಹಾಕದಿರುವಂತೆ ಮನವಿ ಮಾಡಲಾಗಿದೆ.  ಅವುಗಳನ್ನು ಮನ್ನಾ ಮಾಡಿದರೆ ಎಸ್ಕಾಂ ಗಳಿಗೆ ಬ್ಯಾಂಕ್ […]

15 ರಿಂದ 17 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಪಡೆದುಕೊಳ್ಳಲು ಪ್ರೇರೇಪಿಸಿ ಕೋವಿಡ್ ರೋಗದಿಂದ ಮಕ್ಕಳನ್ನು ರಕ್ಷಿಸಿ- ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಜ. 16 ರಿಂದ 15 ರಿಂದ 17 ವರ್ಷದ ಮಕ್ಕಳಿಗೆ ಕೊರೊನಾ ಲಸಿಕಾಕರಣ ಆರಂಭವಾಗಿದ್ದು, ಈಗಾಗಲೇ ಮೊದಲನೇಯ ಹಾಗೂ ಎರಡನೇಯ ಡೋಸ್‍ನ ಶೇ. 100 ರಷ್ಟು ಸಾಧನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಡೋಸ್ ಶೇ. 100 ರಷ್ಚು ಸಾಧನೆ ಮಾಡಿದ ಎರಡನೇ ಜಿಲ್ಲೆ ಎಂಬ ಕೀರ್ತಿ ವಿಜಯಪುರಕ್ಕೆ ಲಭಿಸಿದೆ.  ಅದೇ ರೀತಿ 15 ರಿಂದ 17 ವರ್ಷದ 123437 ಮಕ್ಕಳಿಗೆ ಲಸಿಕೆ […]

ಕಲ್ಯಾಣ ಕರ್ನಾಟಕಕ್ಕೆ ರೂ. 5030 ಕೋ. ಅನುದಾನಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನಗೆ ಸಿಎಂ ಮನವಿ

ನವದೆಹಲಿ: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳಡಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ 5030 ಕೋಟಿ ರೂ. ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು. ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ ಅವರನ್ನು ಭೇಟಿ ಮಾಡಿದ ಅವರು ಈ ಮನವಿ ಮಾಡಿದರು. ಇತ್ತೀಚೆಗೆ ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಚರ್ಚಿಸಿದಂತೆ, ಆಂಧ್ರ ಪ್ರದೇಶ ರಾಜ್ಯವು […]

ಗೃಹ ಖಾತೆ ಕೊಟ್ಟರೆ ಹಿಜಾಬ್, ಕೇಸರಿ ಶಾಲ್ ಸಮಸ್ಯೆ ಬಗೆಹರಿಸುತ್ತೇನೆ- ಶಾಸಕ ಯತ್ನಾಳ

ವಿಜಯಪುರ: ಗೃಹ ಖಾತೆ ನೀಡಿದರೆ ಹಿಜಾಬ್ ಮತ್ತು ಕೇಸರಿ ಶಾಲು ಸಮಸ್ಯೆ ಬಗೆಹರಿಸುತ್ತೇನೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಹಿಜಾಬ್ ಮತ್ತು ಕೇಸರಿ ಶಾಲ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ದೇಶ ತಮಗೆ ವಾಸಿಸಲು ಯೋಗ್ಯ ಇಲ್ಲ ಎನ್ನುವವರು ಜನ್ನತ್ ಗಾದರೂ ಹೋಗಲಿ, ಪಾಕಿಸ್ತಾನ ಕಾದರೂ ಹೋಗಲಿ ಎಂದು ವಾಗ್ದಾಳಿ ನಡೆಸಿದರು. ಈ ದೇಶದ ಅನ್ನ ತಿಂದು ದೇಶ ವಿರೋಧಿ ಚಟುವಟಿಕೆ ಮಾಡುವವರಿಗೆ ಎರಡು […]

ವಿಜಯಪುರ ಜಿ. ಪಂ. ನೂತನ ಸಿಇಒ ಆಗಿ ರಾಹುಲ್ ಶಿಂಧೆ ಅಧಿಕಾರ ಸ್ವೀಕಾರ

ವಿಜಯಪುರ : ವಿಜಯಪುರ ಜಿಲ್ಲಾ ಪಂಚಾಯಿತಿಯ ನೂತನ ಸಿಇಒ ಆಗಿ ರಾಹುಲ್ ಶಿಂಧೆ ಅಧಿಕಾರಿ ಸ್ವೀಕರಿಸಿದ್ದಾರೆ. ಬೀದರ ಮೂಲದ ರಾಹುಲ ಶಿಂಧೆ ಐಐಟಿ ಬಾಂಬೆಯಿಂದ ಬಿ. ಟೆಕ್. ಪದವಿ ಪಡೆದಿದ್ದಾರೆ. 2018ರ ಐಎಎಸ್ ಬ್ಯಾಚ್‍ನ ರಾಹುಲ್ ಶಿಂಧೆ ಅವರು ಮಂಗಳೂರಿನಲ್ಲಿ ಪ್ರೊಬೇಷನರಿ ಅವಧಿ ಪೂರೈಸಿದ್ದಾರೆ. ಬಳಿಕ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಹಶೀಲ್ದಾರ್ ಆಗಿ ಕೆಲಸ ಮಾಡಿದ್ದಾರೆ. ವಿಜಯಪುರ ಜಿ. ಪಂ. ಸಿ. ಇಓ ಆಗುವುದಕ್ಕಿಂತಲೂ ಮುಂಚೆ ನಂತರ ವಿಜಯಪುರ ಜಿಲ್ಲೆಯ ಇಂಡಿ ಉಪವಿಭಾಗಾಧಿಕಾರಿಯಾಗಿ ಸೇವೆ […]

ನದಿ ಜೋಡಣೆ ವಿಚಾರ: ಕರ್ನಾಟಕಕ್ಕೆ ಸಮರ್ಪಕ ಪಾಲು ದೊರೆಯಬೇಕು- ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ನದಿ ಜೋಡಣೆ ವಿಚಾರದಲ್ಲಿ ಕರ್ನಾಟಕಕ್ಕೆ ಸಮರ್ಪಕ ಪಾಲು ದೊರೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ನದಿ ಪಾತ್ರದಲ್ಲಿ ಉತ್ಪಾದನೆಯಾಗುವ ನೀರು, ನಮ್ಮ ಅಗತ್ಯ ಹಾಗೂ ಈಕ್ವಿಟಿ ಆಧರಿಸಿ ಪಾಲು ನಿರ್ಧಾರವಾಗಬೇಕೆನ್ನುವುದು ನಮ್ಮ ನಿಲುವಾಗಿದೆ ಎಂದು ಸ್ಪಷ್ಟಪಡಿಸಿದರು. ಡಿಪಿಆರ್ ಅಂತಿಮಗೊಳಿಸುವ ಮುನ್ನ ಎಲ್ಲಾ ರಾಜ್ಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕೂಡ ತಿಳಿಸಿದ್ದೇವೆ. ಕರ್ನಾಟಕಕ್ಕೆ ನ್ಯಾಯಸಮ್ಮತವಾದ ಪಾಲನ್ನು ಪಡೆದುಕೊಳ್ಳಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಜೀವನದಿಗಳಾಗಿರುವ ಕೃಷ್ಣ ಮತ್ತು ಕಾವೇರಿ […]