15 ರಿಂದ 17 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಪಡೆದುಕೊಳ್ಳಲು ಪ್ರೇರೇಪಿಸಿ ಕೋವಿಡ್ ರೋಗದಿಂದ ಮಕ್ಕಳನ್ನು ರಕ್ಷಿಸಿ- ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಜ. 16 ರಿಂದ 15 ರಿಂದ 17 ವರ್ಷದ ಮಕ್ಕಳಿಗೆ ಕೊರೊನಾ ಲಸಿಕಾಕರಣ ಆರಂಭವಾಗಿದ್ದು, ಈಗಾಗಲೇ ಮೊದಲನೇಯ ಹಾಗೂ ಎರಡನೇಯ ಡೋಸ್‍ನ ಶೇ. 100 ರಷ್ಟು ಸಾಧನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಡೋಸ್ ಶೇ. 100 ರಷ್ಚು ಸಾಧನೆ ಮಾಡಿದ ಎರಡನೇ ಜಿಲ್ಲೆ ಎಂಬ ಕೀರ್ತಿ ವಿಜಯಪುರಕ್ಕೆ ಲಭಿಸಿದೆ.  ಅದೇ ರೀತಿ 15 ರಿಂದ 17 ವರ್ಷದ 123437 ಮಕ್ಕಳಿಗೆ ಲಸಿಕೆ ನೀಡುವ ಗುರಿಯಿದ್ದು, ಈಗಾಗಲೇ 90716 ಮಕ್ಕಳಿಗೆ ಮೊದಲನೇಯ ಡೋಸ್ ಲಸಿಕೆ ನೀಡಲಾಗಿದೆ.  ಆರೋಗ್ಯ ಸಿಬ್ಬಂದಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ ಮಕ್ಕಳಿಗೆ ಲಸಿಕೆ ಪಡೆದುಕೊಳ್ಳಲು ಪ್ರೇರೆಪಿಸಬೇಕು.  ಅಲ್ಲದೇ, ಶಾಲೆಗೆ ಬರದೆ ಮನೆಯಲ್ಲಿರುವ ಮಕ್ಕಳನ್ನು ಗುರುತಿಸಿ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ಲಸಿಕೆ ನೀಡಬೇಕು.  ಪಾಲಕರು ಮತ್ತು ಪೋಷಕರು ಕೂಡ ಈ ವಯೋಮಾನದ ಮಕ್ಕಳಿಗೆ ಕೊರೊನಾ ಲಸಿಕೆ ಪಡೆಯಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.

Leave a Reply

ಹೊಸ ಪೋಸ್ಟ್‌