ನವದೆಹಲಿ: ಮೂರು ದಿನಗಳ ಕಾಲ ಹೈಸ್ಕೂಲು ಮತ್ತು ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಜೆ ಘೋಷಿಸಿದ್ದಾರೆ.
ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಆದೇಶ ಹೊರಡಿಸಿದ್ದು, ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ.
— Basavaraj S Bommai (@BSBommai) February 8, 2022
ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿರುವ ಸಿಎಂ ಬೊಮ್ಮಾಯಿ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಮನವಿ ಮಾಡಿದ್ದಾರೆ.
ಸಂಬಂಧಿಸಿದ ಎಲ್ಲರೂ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಹೆಚ್ಚಾಗಿ ಕೆಲವು ಕಡೆ ಉದ್ವಿಗ್ನ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮುಖ್ಯಮಂತ್ರಿಬ ಸವರಾಜ ಬೊಮ್ನಾಯಿ ಈ ಘೋಷಣೆ ಮಾಡಿದ್ದಾರೆ.
9 ಮತ್ತು 10ನೇ ತರಗತಿ, ಮೊದಲ, ದ್ವಿತೀಯ ಪಿಯುಸಿ, ಪದವಿ ಕಾಲೇಜುಗಳು, ವಿಶ್ವವಿದ್ಯಾಲಯಗಳು, ತಾಂತ್ರಿಕ ಶಿಕ್ಷಣ ವ್ಯಾಪ್ತಿಗೊಳಪಡುವ ಕಾಲೇಜುಗಳು ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ಮಾತ್ರ ರಜೆ ನೀಡಲಾಗಿದೆ.