ಆದರ್ಶ ನಗರ ಪೊಲೀಸರ ಕಾರ್ಯಾಚರಣೆ- ಸರಗಳ್ಳನ ಬಂಧನ- ರೂ. 4.25 ಲಕ್ಷ ಮೌಲ್ಯದ ಸರಗಳ ವಶ

ವಿಜಯಪುರ: ವಿಜಯಪುರ ನಗರದ ಗೋಳಗುಮ್ಮಟ ಪೊಲೀಸ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇತ್ತೀಚೆಗೆ ವಿಜಯಪುರ ನಗರದ ಜನತೆಗೆ ತಲೆನೋವಾಗಿದ್ದ ಸರಗಳ್ಳತನ ಪ್ರಕರಣ ಭೇದಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ವಿಜಯಪುರ ಎಸ್ಪಿ ಎಚ್. ಎಸ್. ಆನಂದ ಕುಮಾರ, ವಿಜಯಪುರ ನಗರದಲ್ಲಿ ಇತ್ತಿಚಿಗೆ ನಡೆದ ಸರಗಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಎಎಸ್ಪಿ ಡಾ. ರಾಮ ಲಕ್ಷ್ಣಣ ಅರಸಿದ್ಧಿ ಅವರ ಉಸ್ತುವಾರಿಯಲ್ಲಿ ವಿಜಯಪುರ ಡಿವೈಎಸ್ಪಿ ಲಕ್ಷ್ಮೀನಾರಾಯಣ, ಗೋಳಗುಮ್ಮಟ ಸಿಪಿಐ ರಮೇಶ ಅವಜಿ ಅವರ ನೇತೃತ್ವದಲ್ಲಿ ತನಿಖಾ ತಂಡ […]

ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಿ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆಯ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಮೂಲಭೂತವಾಗಿ ಅತೀ ಅಗತ್ಯವಾಗಿರುವ ವಸತಿ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.  ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಲೆಮಾರಿ, ಅರೆ ಅಲೆಮಾರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಿರ್ದಿಷ್ಟ ನೆಲೆ ಇಲ್ಲದೇ ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ವಲಸೆ ಹೋಗುವ ಕಾರಣ ಈ ಜನಾಂಗ […]

ಇಂಗಳೇಶ್ವರ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡುವಂತೆ ರೈತರಿಂದ ಆರೋಗ್ಯ ಸಚಿವರಿಗೆ ಮನವಿ

ವಿಜಯಪುರ: ವಿಶ್ವಗುರು ಬಸವಣ್ಣನವರ ಜನ್ಮ ಸ್ಥಳವಾದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ ಅವರಿಗೆ ಇಂಗಳೇಶ್ವರ ಗ್ರಾಮಸ್ಥರು ಮನವಿ ಪತ್ರ ಸಲ್ಲಿಸಿದರು. ಬೆಂಗಳೂರಿನಲ್ಲಿ ಅಖಂಡ ಕರ್ನಾಟಕ ರೈತ ಸಂಘದ ಮುಖಂಡ ಅರವಿಂದ ಕೃಷ್ಣಾಜಿ ಕುಲಕರ್ಣಿ ನೇತೃತ್ವದಲ್ಲಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅರವಿಂದ ಕೃಷ್ಣಾಜಿ ಕುಲಕರ್ಣಿ, ಇಂಗಳೇಶ್ವರ ಗ್ರಾಮವು ಐತಿಹಾಸಿಕ ಮತ್ತು […]