ಬೆಂಗಳೂರು: ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಸರಕಾರ ಸ್ನಾತಕೋತ್ತರ, ಪದವಿ ಮತ್ತು ಪಿಯು ಕಾಲೇಜುಗಳಿಗೆ ಫೆ. 16ರ ವರೆಗೆ ರಜೆ ಮುಂದುವರಿಸಿ ಆದೇಶ ಹೊರಡಿಸಿದೆ.
ಈ ಕುರಿತು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ವಿಶ್ವವಿದ್ಯಾಲಯಗಳು, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರಕಾರಿ, ಅನುದಾನಿತ, ಅನುದಾನ ರಹಿತ ಪದವಿ ಕಾಲೇಜುಗಳು ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
ಆದರೆ, ಈ ದಿನಗಳಲ್ಲಿ ಪರೀಕ್ಷೆಗಳು ನಿಗದಿಯಾಗಿದ್ದರೆ ಆ ಪರೀಕ್ಷೆಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ, ಆನಲೈನ್ ಮೂಲಕ ವ್ಯಾಸಂಗ ಮುಂದುವರೆಸಲು ಸೂಚನೆ ನೀಡಿದೆ.