ವಿಜಯಪುರ: ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಜಯಪುರ ಜಿಲ್ಲೆಗೆ ಅನುದಾನ ಬಿಡುಗಡೆಯಾಗಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಜಯಪುರ ಜಿಲ್ಲೆಯಲ್ಲಿ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ಹಲವಾರು ರಸ್ತೆಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ, ಅದರಂತೆ ಈಗ ಇಂಡಿ ತಾಲೂಕಿನ ಸೊನಕನಹಳ್ಳಿಯಿಂದ ಭಾರತಿ ನಗರ ಎಲ್. ಟಿ. ವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ.
ಸಂಸದರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ಸೊನಕನಹಳ್ಳಿ-ಭಾರತಿ ಎಲ್. ಟಿ. ಯವರೆಗಿನ ರಸ್ತೆಗೆ ರೂ. 2 ಕೋ. ಅನುದಾನ ಬಿಡುಗಡೆಯಾಗಿದೆ ಎಂದು ರಮೇಶ ಜಿಗಜಿಣಗಿ ತಿಳಿಸಿದ್ದಾರೆ.