ಸೋಮವಾರದಿಂದ ಶಾಲೆಗಳು ಆರಂಭ ಹಿನ್ನೆಲೆ- ಶಾಂತಿ, ಸುವ್ಯವಸ್ಥೆ ಕಾಪಾಡುವಂತೆ ವಿಜಯಪುರ ಡಿಸಿ ಮನವಿ
ವಿಜಯಪುರ: ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಮವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಎಲ್ಲ ಪೋಷಕರು, ಸಾರ್ವಜನಿಕರು, ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಸೋಮವಾರದಿಂದ ಶಾಲೆಗಳು ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಕಾರಣ ಯಾವುದೇ […]
ಮೂರು ತಿಂಗಳೊಳಗೆ ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಸಂಚಾರಕ್ಕೆ ಮುಕ್ತ- ಜಲನಗರ ಸಂತೋಷಿಮಾತಾ ರಸ್ತೆಯಲ್ಲಿ ರೇಲ್ವೆ ಅಂಡರಬ್ರಿಡ್ಜ್ ನಿರ್ಮಿಸಲಾಗುವುದು- ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿರುವೆ ಎಂದು ಕೇಂದ್ರ ಮಾಜಿ ಸಚಿವ ಮತ್ತು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಇಬ್ರಾಹಿಂಪೂರ ರೇಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಈ ಭಾಗದ ಜನರ ಸಮಸ್ಯೆಗಳ ಅರಿವು ತಮಗಿದೆ. ಈ ಕಾಮಗಾರಿ ನಡೆಯುತ್ತಿರುವುದರಿಂದ ವಿಜಯಪುರ ನಗರದ ಇಬ್ರಾಹಿಂಪೂರ, ಗಣೇಶ ನಗರ, ಗುರುಪಾದೇಶ್ವರ ನಗರ ಮುಂತಾದ ಬಡಾವಣೆ ನಿವಾಸಿಗಳಿಗೆ ಸಂಚಾರಕ್ಕೆ ಅಡ್ಡಿಯಾಗಿದೆ. ಅಲ್ಲದೇ, ವಿಜಯಪುರದಿಂದ […]
ಸಿಎಂ ಬದಲಾವಣೆ ಬೇಡ- ಬಾಯಿಗೆ ಬಂದಂತೆ ಮಾತನಾಡುವವರನ್ನು ನಿಯಂತ್ರಿಸಲು ಹೇಳಿದ್ದೇನೆ- ಸಂಸದ ರಮೇಶ ಜಿಗಜಿಣಗಿ
ವಿಜಯಪುರ: ಸಿಎಂ ಬದಲಾವಣೆ ಬೇಡ ಎಂದು ಸ್ಪಷ್ಟವಾಗಿ ಹೇಳಿದ್ದೇನೆ ಎಂದು ವಿಜಯಪುರ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಬೇಡ ಎಂಬುದು ನನ್ನ ವೈಯಕ್ತಿಕ ಮತ್ತು ಸ್ಪಷ್ಟವಾದ ನಿಲುವಾಗಿದೆ. ಇದನ್ನೇ ಎಲ್ಲರಿಗೂ ಹೇಳಿದ್ದೇನೆ. ಈ ವಿಚಾರದಲ್ಲಿ ಕೆಲವರು ಉಹಾಪೋಹ ಮಾಡುವುದು ಸರಿಯಲ್ಲ ಎಂದು ಹೇಳಿದರು. ಮಂತ್ರಿ ಮಂಡಲ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿದೆ. ಕೆಲವರಯ ಬಾಯಿಗೆ ಬಂದಂತೆ ಏನು ಬೇಕಾದರೂ ಮಾತನಾಡುತ್ತಾರೆ. ಅದನ್ನು ಬಂದ್ ಮಾಡಿಸಿ ಎಂದು ಹೇಳಿದ್ದೇನೆ. […]
ತಿಡಗುಂದಿ, ಹೊರ್ತಿ ಗ್ರಾ. ಪಂ. ಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವಿಜಯಪುರ ಜಿ.ಪಂ. ಸಿಇಓ ರಾಹುಲ ಶಿಂಧೆ
ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯ ನಿರ್ವಾಹಣಾಕಾರಿ ರಾಹುಲ ಶಿಂಧೆ ಅವರು ವಿಜಯಪುರ ತಾಲೂಕಿನ ತಿಡಗುಂದಿ ಮತ್ತು ಇಂಡಿ ತಾಲೂಕಿನ ಹೊರ್ತಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಕಾರ್ಡಗಳನ್ನು ಗ್ರಾಮ ಪಂಚಾಯಿತಿಗಳು ಬಾಪೂಜಿ ಸೇವಾ ಕೇಂದ್ರದ ಮೂಲಕ ಮರುಚಾಲನೆ ನೀಡುವ ಮೂಲಕ ವಿತರಿಸಲು ಸೂಚಿಸಿದರು. ಈ ಕೆಲಸವನ್ನು ಅಭಿಯಾನದ ರೀತಿ ಕೈಗೊಳ್ಳುವಂತೆ ಹಾಗೂ ಗ್ರಾಮ ಪಂಚಾಯಿತಿ ಮತ್ತು ಆಶಾ, ಅಂಗನವಾಡಿ ಕಾರ್ಯಕರ್ತರು ಗ್ರಾಮಗಳಲ್ಲಿ ಪ್ರತಿ […]