ವಿಜಯಪುರ: ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಮವಸ್ತ್ರ ಸಂಹಿತೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಎಲ್ಲ ಪೋಷಕರು, ಸಾರ್ವಜನಿಕರು, ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಸೋಮವಾರದಿಂದ ಶಾಲೆಗಳು ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಕಾರಣ ಯಾವುದೇ ಉಹಾಪೋಹಗಳಿಗೆ ಕಿವಿಗೊಡದೆ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಹೋಗಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕೆಂದು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮನವಿ ಮಾಡಿದ್ದಾರೆ.