ಬೆಂಗಳೂರಿನಲ್ಲಿ ಹೋರಾಟ ನಿರತರನ್ನು ಭೇಟಿ ಮಾಡಿದ ಎಂ ಎಲ್ ಸಿ ಅರುಣ ಶಹಾಪುರ, ಸಚಿವ ಬಿ. ಸಿ. ನಾಗೇಶ
ಬೆಂಗಳೂರು: ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟ ಬೆಂಗಳೂರಿನಲ್ಲಿ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದೆ. 1995 ರ ನಂತರ ಆರಂಭವಾದ ಕನ್ನಡ ಮಾದ್ಯಮ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಈ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಸತ್ಯಾಗ್ರಹ ಸ್ಥಳಕ್ಕೆ ತೆರಳಿದ ವಿಧಾನ ಪರಿಷತ ಸದಸ್ಯ ಅರುಣ ಶಹಾಪುರ ಹೋರಾಟ […]
ಬಂಜಾರ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರಲು ಅಗತ್ಯ ನೆರವು ನೀಡಲಾಗುವುದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಬಂಜಾರ ಸಮುದಾಯ ಒಗ್ಗಟ್ಟಿನಿಂದ ಸಮಾಜದ ಮುಖ್ಯವಾಹಿನಿಗೆ ಬರಲು ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಂತ ಸೇವಾಲಾಲರ ಜಯಂತಿಯ ಅಂಗವಾಗಿ ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಸಂತ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಸಿಎಂ ಮಾತನಾಡಿದರು. ಸಂತ ಸೇವಾಲಾಲರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ಆಶಯ ನಮ್ಮದು. ಲಂಬಾಣಿ, ಬಂಜಾರ ಸಮುದಾಯಕ್ಕೆ ದೊಡ್ಡ ಪರಂಪರೆ ಇದೆ. ಅವರದೇ ಆದ ವೈಶಿಷ್ಟ್ಯವನ್ನು ಹೊಂದಿರುವ ಸಮಾಜವಾಗಿದೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಇರುವ ಕೆಲವೇ ಕೆಲವು ಸಮುದಾಯಗಳಲ್ಲಿ […]
ಫೆ. 16 ಬುಧವಾರ ಮಹಾರಾಷ್ಟ್ರದ ಗುಡ್ಡಾಪುರ ದಾನಮ್ಮ ದೇವಿ ದೇವಸ್ಥಾನದಲ್ಲಿ ಕರ್ನಾಟಕ ಸರಕಾರದಿಂದ ರೂ. 5 ಕೋ. ವೆಚ್ಚದ ಕರ್ನಾಟಕ ಭವನಕ್ಕೆ ಅಡಿಗಲ್ಲು ಸಮಾರಂಭ
ವಿಜಯಪುರ: ಉತ್ತರ ಕರ್ನಾಟಕದ ಆರಾಧ್ಯ ದೈವ ಮಹಾರಾಷ್ಟ್ರದ ಗುಡ್ಡಾಪುರ ದಾನಮ್ಮ ದೇವಿ ಆವರಣದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಫೆ. 16 ರಂದು ಬುಧವಾರ ಅಡಿಗಲ್ಲು ಹಾಕಲಿದ್ದಾರೆ.ರೆ. ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜತ್ ತಾಲೂಕಿನಲ್ಲಿ ಗುಡ್ಡಾಪುರದಲ್ಲಿ ಕರ್ನಾಟಕ ಸರಕಾರದ ವತಿಯಿಂದ ಕರ್ನಾಟಕ ಭವನ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಗುಡ್ಡಾಪುರಕ್ಕೆ ಕರ್ನಾಟಕದಿಂದ ಅಗಮಿಸುವ ಭಕ್ತಾದಿಗಳಿಗೆ ಸುಸಜ್ಜಿತ ಮೂಲಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈಗಾಗಲೇ ಶ್ರೀ ಕ್ಷೇತ್ರ ಗುಡ್ಡಾಪುರದಲ್ಲಿ ಶ್ರೀ ದೇವಾಲಯದ […]
ಮೆಕ್ ಡೊನಾಲ್ಡ್ಸ್‌ನಲ್ಲಿ ಮಕ್ಕಳಿಗೆ ಓದಲು ಸಿಗಲಿದೆ ಪುಸ್ತಕ
ಬೆಂಗಳೂರು: ಮೆಕ್ ಡೋನಾಲ್ಡ್ ಭಾರತಕ್ಕೆ ಕಾಲಿಟ್ಟು 25 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ವಿಶಿಷ್ಠ ಯೋಜನೆಯೊಂದನ್ನು ರೂಪಿಸಿದೆ. ಮೆಕ್‌ಡೊನಾಲ್ಡ್ಸ್‌ನಲ್ಲಿ ಈವರೆಗೆ ಕೇವಲ ತಿಂಡಿ ಖರೀದಿಸಲು ಮಾತ್ರ ಅವಕಾಶವಿತ್ತು. ಆದರೆ, ಇನ್ನು ಮುಂದೆ ಆಹಾರ ಸೇವನೆ ಜೊತೆಗೆ ಓದಲು ಪುಸ್ತಕವನ್ನೂ ಉಚಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರಿನಲ್ಲಿ ಮೆಕ್‌ಡೊನಾಲ್ಡ್ಸ್ ದಕ್ಷಿಣ ಮತ್ತು ಪಶ್ಚಿಮ ಭಾಗದಲ್ಲಿ ಹ್ಯಾಪಿ ಮೀಲ್ ರೀಡರ್ಸ್ ಕಾರ್ಯಕ್ರಮವನ್ನು ಪರಿಚಯಿಸುಲಾಗಿದ್ದು, ಈ ಹ್ಯಾಪಿ ಮೀಲ್ ರೀಡರ್ಸ್‌ನಲ್ಲಿ ಮಕ್ಕಳಿಗಾಗಿ ಓದಲು ಪುಸ್ತಕವನ್ನೂ ನೀಡಲಾಗುತ್ತಿದೆ. ಇದೇ ಮೊದಲ ಬಾರಿಗೆ ವಿಭಿನ್ನ ರೀತಿಯಲ್ಲಿ ಮೆಕ್‌ಡೊನಾಲ್ಡ್ಸ್ […]
ರಾಜೀವ ಗಾಂಧಿ ವಿವಿ ಪರೀಕ್ಷೆ- ಬಾಗಲಕೋಟೆ ಬಿವಿವಿ ಹೋಮಿಯೋಪಥಿ ವಿದ್ಯಾರ್ಥಿಗಳ ಉತ್ತಮ ಸಾಧನೆ
ಬಾಗಲಕೋಟೆ: ಬಾಗಲಕೋಟೆಯ ಬಿವಿವಿಎಸ್ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಜನೇವರಿಯಲ್ಲಿ ನಡೆದ ಪ್ರಥಮ ಮತ್ತು ದ್ವಿತೀಯ ಬಿ ಎಚ್ ಎಂ ಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಈ ಕಾಲೇಜಿನ ಪ್ರಥಮ ವರ್ಷದ ಎಲ್ಲ ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ. 100 ಫಲಿತಾಂಶ ಸಾಧನೆ ಮಾಡಿದ್ದಾರೆ. ದ್ವಿತೀಯ ವರ್ಷದಲ್ಲಿ ಶೇ. 99 ರಷ್ಟು ಫಲಿತಾಂಶ ಬಂದಿದೆ. ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ದಕ್ಷತಾ ಹೊರಟ್ಟಿ, ಪ್ರಿಯಾಂಕಾ ಹವಾಲ್ದಾರ, ದಿರಿಸಲಾ ಸಿರಿ ಹಾಗೂ ಚಾಯಾ […]