ಬೆಂಗಳೂರು: ಬಂಜಾರ ಸಮುದಾಯ ಒಗ್ಗಟ್ಟಿನಿಂದ ಸಮಾಜದ ಮುಖ್ಯವಾಹಿನಿಗೆ ಬರಲು ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಂತ ಸೇವಾಲಾಲರ ಜಯಂತಿಯ ಅಂಗವಾಗಿ ಬೆಂಗಳೂರಿನಲ್ಲಿ ತಮ್ಮ ನಿವಾಸದಲ್ಲಿ ಸಂತ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಸಿಎಂ ಮಾತನಾಡಿದರು.
ಸಂತ ಸೇವಾಲಾಲರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂಬ ಆಶಯ ನಮ್ಮದು. ಲಂಬಾಣಿ, ಬಂಜಾರ ಸಮುದಾಯಕ್ಕೆ ದೊಡ್ಡ ಪರಂಪರೆ ಇದೆ. ಅವರದೇ ಆದ ವೈಶಿಷ್ಟ್ಯವನ್ನು ಹೊಂದಿರುವ ಸಮಾಜವಾಗಿದೆ. ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಇರುವ ಕೆಲವೇ ಕೆಲವು ಸಮುದಾಯಗಳಲ್ಲಿ ಬಂಜಾರ ಸಮುದಾಯವೂ ಒಂದಾಗಿದೆ. ಸಮುದಾಯದ ಯುವಕರು ವಿದ್ಯಾವಂತರು ಹಾಗೂ ಬುದ್ಧಿವಂತರು ಆಗಲು ಹಾಗೂ ಸಮುದಾಯದ ಸಮಗ್ರ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ಮತ್ತು ನಮ್ಮ ನಾಯಕ ಬಿ. ಎಸ್. ಯಡಿಯೂರಪ್ಪ ಅವರು ತಾಂಡಾ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದಾರೆ. ತಾಂಡಾದವರಿಗೆ ಆರ್ಥಿಕ ನೆರವು ನೀಡಲು ನಾನಾ ಯೋಜನೆಗಳಿಗೆ ಈ ಬಾರಿಯ ಬಜೆಟ್ ನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.
ಶ್ರಮ ಜೀವಿಗಳು
ಬಂಜಾರ ಸಮುದಾಯದವರು ಬಹಳ ಶ್ರಮಜೀವಿಗಳು ಕರ್ನಾಟಕದ ಪ್ರಗತಿ ಯಲ್ಲಿ ದೊಡ್ಡ ಪಾತ್ರವನ್ನು ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಮುದಾಯಕ್ಕೆ ಅಗತ್ಯ ನೆರವನ್ನು ನೀಡಲು ಕ್ರಮ ಕೈಗೊಳ್ಳಾಗುವುದು ಎಂದು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವ ಗೋವಿಂದ ಎಂ. ಕಾರಜೋಳ, ಶಾಸಕ ಪಿ. ರಾಜೀವ, ವಿಧಾನ ಪರಿಷತ ಸದಸ್ಯ ಪ್ರಕಾಶ ರಾಠೋಡ ಮುಂತಾದವರು ಉಪಸ್ಥಿತರಿದ್ದರು.