ಬೆಂಗಳೂರು: ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಅನುದಾನ ರಹಿತ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟ ಬೆಂಗಳೂರಿನಲ್ಲಿ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದೆ. 1995 ರ ನಂತರ ಆರಂಭವಾದ ಕನ್ನಡ ಮಾದ್ಯಮ ಅನುದಾನ ರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಈ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.
ಸತ್ಯಾಗ್ರಹ ಸ್ಥಳಕ್ಕೆ ತೆರಳಿದ ವಿಧಾನ ಪರಿಷತ ಸದಸ್ಯ ಅರುಣ ಶಹಾಪುರ ಹೋರಾಟ ನಿತರತರನ್ನು ಭೇಟಿ ಮಾಡಿದರು. ಅಲ್ಲದೇ, ಸತ್ಯಾಗ್ರಹ ನಿರತರ ಪರವಾಗಿ ಸರಕಾರದದಲ್ಲಿ ಧ್ವನಿ ಎತ್ತುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಆಗಮಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ ಮಾತನಾಡಿ, ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ತಿನ ಸದಸ್ಯರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೋರಾಟಗಾರರ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಶಶೀಲ ಜಿ. ನಮೋಶಿ, ಎಸ್. ವಿ. ಸಂಕನೂರ ಮುಂತಾದವರು ಉಪಸ್ಥಿತರಿದ್ದರು.