ರಾಯಚೂರು ಘಟನೆ ಖಂಡಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಬೆಂಗಳೂರು: ರಾಯಚೂರು ಘಟನೆಯನ್ನು ಖಂಡಿಸಿ ನಾಬಾ ಸಂಘಟಬೆಗಳ ಸಾವಿರಾರು ಕಾರ್ಯಕರ್ತರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಜ. 26 ರಂದು ಬಾಬಾಸಾಹೆಬರ ಭಾವಚಿತ್ರಕ್ಕೆ ಅವಮಾನಿಸಲಾಗಿದೆ. ಇದಕ್ಕೆ ಕಾರಣರಾದ ನ್ಯಾಯಾಧೀಶರ ವಿರುದ್ಧ ಸರಕಾರ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ವಿಧಾನಸೌಧ – ಹೈಕೋರ್ಟ್ ಚಲೊ ಜಾಥಾ ಸಂಗವಾಗಿ ಈ ಪ್ರತಿಭಟನಾ ಮೆರವಣಿಗೆ ನಡೆಸಲಾತಿತು. ಬೆಂಗಳೂರಿನ ಕೆಂಪೇಗೌಡ ರೇಲ್ವೆ ನಿಲ್ದಾಣದಿಂದ ಆರಂಭವಾದ ಬೃಹತ್ ಪ್ರತಿಭಟನೆಲಾ ಮೆರವಣಿಗೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ […]

ತುಂಗಾಭದ್ರಾ ಆರತಿಯಿಂದ – ಹರಿಹರದ ಗತವೈಭವ ಮರಳಿ ಪಡೆಯುವ ಗುರಿ: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ

ಬೆಂಗಳೂರು: ತುಂಗಾಭದ್ರಾ ಆರತಿಯ ಪ್ರಾರಂಭದ ಮೂಲಕ ದಕ್ಷಿಣ ಕಾಶಿ ಎಂದೇ ಪ್ರಸಿದ್ದ ಹರಕ್ಷೇತ್ರ ಹರಿಹರದ ಗತವೈಭವವನ್ನು ಮರಳಿ ಪಡೆಯುವ ಹಾಗೂ ದೇಶದಲ್ಲೇ ಹಿಂದುಗಳ ಪ್ರಮುಖ ಯಾತ್ರಾಸ್ಥಳವನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು. ಬೆಂಗಳೂರಿನ ಶ್ವಾಸಯೋಗ ಕೇಂದ್ರದಲ್ಲಿ ಫೆಬ್ರವರಿ 20, 2022 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಿಂದ ನಡೆಯಲಿರುವ 108 ತುಂಗಾಭದ್ರಾ ಆರತಿ ಮಂಟಪಗಳ ಶಿಲಾನ್ಯಾಸ ಕಾರ್ಯಕ್ರಮದ ಮಾಹಿತಿ ಹಾಗೂ ಕಾನ್ಸೆಪ್ಟ್‌ ವಿಡಿಯೋವನ್ನು […]

ವಿಜಯಪುರ ಜಿಲ್ಲಾಡಳಿತದಿಂದ ಛತ್ರಪತಿ ಶಿವಾಜಿ ಜಯಂತಿ ಆಚರಣೆ

ವಿಜಯಪುರ: ವಿಜಯಪುರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಛತ್ರಪತಿ ಶಿವಾಜಿ ಜಯಂತಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಶ್ರೀ ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಪೂಜೆಯನ್ನು ನೆರವೇರಿಸಿ, ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ […]

ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಜನರ ಅನುಕೂಲಕ್ಕೆ ಮೂರು ಎಕರೆ ಜಾಗ ನೀಡಲು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಬೆಂಗಳೂರು: ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕನಿಷ್ಠ ಮೂರು ಎಕರೆ ಜಾಗ ನೀಡುವುದಾಗಿ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.  ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮೇಟಿ ನೇತೃತ್ವದಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ಸಿಎಂ ಈ ಭರವಸೆ ನೀಡಿದರು. ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಜನರ ಅನುಕೂಲಕ್ಕೆ […]

ಛತ್ರಪತಿ ಶಿವಾಜಿ ವೇಷದಲ್ಲಿ ಗಮನ ಸೆಳೆದ ಗುಮ್ಮಟ ನಗರಿಯ ಮಕ್ಕಳು

ವಿಜಯಪುರ: ಭಾರತದಲ್ಲಿ ಪುರಾತನ ಕಾಲದಿಂದಲೂ ಸಾವಿರಾರು ವೀರರು, ಯೋಧರು, ಸಾಹಸಿಗಳು ಗಮನ ಸೆಳೆದಿದ್ದಾರೆ. ಶಿಷ್ಠರ ರಕ್ಷಣೆಗಾಗಿ ಯುದ್ಧಗಳನ್ನೂ ಮಾಡಿದ್ದಾರೆ. ಖಡ್ಗ ಝಳಪಿಸಿ ವಿಜಯಶಾಲಿಯೂ ಆಗಿದ್ದಾರೆ. ಹಲವರು ಹುತಾತ್ಮರೂ ಆಗಿದ್ದಾರೆ. ಇಂಥ ಹೋರಾಟಗಾರರಲ್ಲಿ ಇಂದಿಗೂ ಜನಜನಿತರಾಗಿರುವವರು ಛತ್ರಪತಿ ಶಿವಾಜಿ. ಕರ್ನಾಟಕ ಮಹಾರಾಷ್ಟ್ರ ಸೇರಿದಂತೆ ನಾನಾ ಕಡೆಗಳಲ್ಲಿ ತಮ್ಮ ಕಾಲದಲ್ಲಿ ತಮ್ಮ ವೀರಗುಣಗಳಿಂದ ಗಮನ ಸೆಳೆದವರು ಛತ್ರಪತಿ ಶಿವಾಜಿ ಮಹಾರಾಜರು. ತಾಯ್ನಾಡಿನ ರಕ್ಷಣೆಗಾಗಿ ಮೊಘಲರೊಂದಿಗೆ ಇವರು ನಡೆಸಿದ ಹೋರಾಟ ಇಂದಿಗೂ ಸ್ಮರಣೀಯವಾಗಿದೆ. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು […]

ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ: ಸಿಂದಗಿ ತಾಲೂಕಿನ ಮಲಘಾಣದಲ್ಲಿ ಕಾರ್ಯಕ್ರಮ ಆರಂಭ

ವಿಜಯಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ವಿಜಯಪುರ(Vijayapura District) ಜಿಲ್ಲೆಯ ಸಿಂದಗಿ(Sindagi) ತಾಲೂಕಿನ ಮಲಘಾಣ(Malaghan) ಗ್ರಾಮದಲ್ಲಿ(Village) ಆರಂಭವಾಗಿದೆ. ಮಲಘಾಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಆರಂಭವಾದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಸ್ವೀಕರಿಸಿದ ಅರ್ಜಿಗಳು ಮತ್ತು ಕೈಗೊಂಡ ಕ್ರಮಗಳ ಕುರಿತು ಇಂಡಿ ಉಪವಿಭಾಗ ಅಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲಾಧಿಕಾರಿಗಳು ಕಾರ್ಯಕ್ರಮ ಉದ್ದೇಶ ಕುರಿತು ಮಾಹಿತಿ ನೀಡಿದರು. ಜಿ. ಪಂ. ಮುಖ್ಯ ಕಾರ್ಯ ನಿರ್ವಣಾಧಿಕಾರಿ ರಾಹುಲ ಶಿಂಧೆ ಮಾತನಾಡಿ, […]