ಬೆಂಗಳೂರು: ರಾಯಚೂರು ಘಟನೆಯನ್ನು ಖಂಡಿಸಿ ನಾಬಾ ಸಂಘಟಬೆಗಳ ಸಾವಿರಾರು ಕಾರ್ಯಕರ್ತರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಜ. 26 ರಂದು ಬಾಬಾಸಾಹೆಬರ ಭಾವಚಿತ್ರಕ್ಕೆ ಅವಮಾನಿಸಲಾಗಿದೆ. ಇದಕ್ಕೆ ಕಾರಣರಾದ ನ್ಯಾಯಾಧೀಶರ ವಿರುದ್ಧ ಸರಕಾರ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ವಿಧಾನಸೌಧ – ಹೈಕೋರ್ಟ್ ಚಲೊ ಜಾಥಾ ಸಂಗವಾಗಿ ಈ ಪ್ರತಿಭಟನಾ ಮೆರವಣಿಗೆ ನಡೆಸಲಾತಿತು. ಬೆಂಗಳೂರಿನ ಕೆಂಪೇಗೌಡ ರೇಲ್ವೆ ನಿಲ್ದಾಣದಿಂದ ಆರಂಭವಾದ ಬೃಹತ್ ಪ್ರತಿಭಟನೆಲಾ ಮೆರವಣಿಗೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ ಸಾವಿರಾರು ಜನರು ಕೈಯಲ್ಲಿ ನೀಲಿ ಬಾವುಟ ಮತ್ತು ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಭಾವಚಿತ್ರ ಹಿಡಿದುಕೊಂಡು ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ನಾನಾ ಸಂಘಟನೆಗಳ ಪ್ರಮುಖರು ಹಾಗೂ ಪ್ರತಿನಿಧಿಗಳು ಉಪಸ್ಥಿತರಿದ್ದು ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ವಿಜಯಪುರ ಜಿಲ್ಲೆಯಿಂದ ಕೂಡ ಸುಮಾರು ಒಂದು ಸಾವಿರ ಜನ ಈ ಜಾಥಾದಲ್ಲಿ ಪಾಲ್ಗೊಂಡಿದ್ದರು ಎಂದು ಮುಖಂಡ ಶ್ರೀನಾಥ ಪೂಜಾರಿ ತಿಳಿಸಿದ್ದಾರೆ.