ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ: ಸಿಂದಗಿ ತಾಲೂಕಿನ ಮಲಘಾಣದಲ್ಲಿ ಕಾರ್ಯಕ್ರಮ ಆರಂಭ

ವಿಜಯಪುರ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ವಿಜಯಪುರ(Vijayapura District) ಜಿಲ್ಲೆಯ ಸಿಂದಗಿ(Sindagi) ತಾಲೂಕಿನ ಮಲಘಾಣ(Malaghan) ಗ್ರಾಮದಲ್ಲಿ(Village) ಆರಂಭವಾಗಿದೆ.

ಮಲಘಾಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದ ಆರಂಭವಾದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಿಂದ ಸ್ವೀಕರಿಸಿದ ಅರ್ಜಿಗಳು ಮತ್ತು ಕೈಗೊಂಡ ಕ್ರಮಗಳ ಕುರಿತು ಇಂಡಿ ಉಪವಿಭಾಗ ಅಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲಾಧಿಕಾರಿಗಳು ಕಾರ್ಯಕ್ರಮ ಉದ್ದೇಶ ಕುರಿತು ಮಾಹಿತಿ ನೀಡಿದರು. ಜಿ. ಪಂ. ಮುಖ್ಯ ಕಾರ್ಯ ನಿರ್ವಣಾಧಿಕಾರಿ ರಾಹುಲ ಶಿಂಧೆ ಮಾತನಾಡಿ, ಸರಕಾರದ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿ, ಇಂಡಿ ಪ್ರಭಾರಿ ಉಪವಿಭಾಗಾಧಿಕಾರಿ ಎಂ. ಎನ್. ಚೋರಗಸ್ತಿ, ಮಲಘಾಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ, ನಾನಾ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಜಿ. ಪಂ. ಸಿಇಒ ರಾಹುಲ ಶಿಂಧೆ ಇಡೀ ದಿನ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದು, ಗ್ರಾಮಸ್ಥರ ಅಹವಾಲು ಸ್ವೀಕರಿಸಲಿದ್ದಾರೆ.

ಅಲ್ಲದೇ, ಕೃಷಿ ತೋಟಗಾರಿಕೆ ಹಾಗೂ ಪಶು ಸಂಗೋಪನೆ ಇಲಾಖೆ ತಜ್ಞರ ಸಮ್ಮುಖದಲ್ಲಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಐತಿಹಾಸಿಕ ಬಾವಿ ಮತ್ತು ದೇವಾಯಲಗಳಿಗೆ ಭೇಟಿ ನೀಡಲಿದ್ದಾರೆ. ಬಳಿಕ ಗ್ರಾಮದಲ್ಲಿ ನಾನಾ ಸ್ಥಳಗಳಿಗೆ ತೆರಳಿ ಗ್ರಾಮಸ್ಥರೊಂದಿಗೆ ಸಂವಾದ ನಡೆಸಲಿದ್ದಾರೆ.

hi

ಈ ಕಾರ್ಯಕ್ರಮಗಳ ನಂತರ ಸರಕಾರಿ ಉರ್ದು ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಪರೀಕ್ಷೆ ಕುರಿತು ಸಂವಾದ ನಡೆಸಲಿದ್ದಾರೆ.

Leave a Reply

ಹೊಸ ಪೋಸ್ಟ್‌