ವಿಜಯಪುರ: ವಿಜಯಪುರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಛತ್ರಪತಿ ಶಿವಾಜಿ ಜಯಂತಿಯನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಶ್ರೀ ಛತ್ರಪತಿ ಶಿವಾಜಿ ಅವರ ಭಾವಚಿತ್ರಕ್ಕೆ ಪೂಜೆಯನ್ನು ನೆರವೇರಿಸಿ, ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಲಾಯಿತು.
ಈ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೋಳ್ಳಿ, ಮುಖಂಡರಾದ ಅಡಿವೆಪ್ಪ ಸಾಲಗಲ, ಸಿದ್ಧು ರಾಯಣ್ಣನವರ, ಪರಶುರಾಮ ರಜಪೂತ, ರಾಹುಲ್ ಜಾಧವ, ವಿಜಯ ಚವ್ಹಾಣ, ಪ್ರಭಾಕರ್ ಬೋಸ್ಲೆ, ತುಳಸಿರಾಮ ಸೂರ್ಯವಂಶಿ, ಭೀಮರಾಯ ಜಿಗಜಿಣಗಿ, ದೇವೇಂದ್ರ ಮಿರೇಕರ, ಶರಣು ಸಬರದ, ದಾನೇಶ ಅವಟಿ, ರಾಜು ತೊರವಿ, ಗಿರೀಶ ಕುಲಕರ್ಣಿ ಸೇರಿದಂತೆ ಸಮಾಜ ಭಾಂದವರು ಹಾಗೂ ನಾನಾ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಬೆಳಿಗ್ಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಅವರು ವಿಜಯಪುರ ನಗರದ ಛತ್ರಪತಿ ಶಿವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ, ಎಸ್ಪಿ ಎಚ್. ಡಿ. ಆನಂದ ಕುಮಾರ, ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಉಪ ಆಯುಕ್ತ ಮಹಾವೀರ ಬೊರಣ್ಣನವರ ಹಾಗೂ ಸಮಾಜ ಮುಖಂಡರು ಉಪಸ್ಥಿತರಿದ್ದರು.