ಬೆಂಗಳೂರು: ಬಿಜೆಪಿ(BJP) ಶಿಕ್ಷಕ(Teacher) ಮತ್ತು ಪದವೀಧರ(Graduate) ಕ್ಷೇತ್ರದ ವಿಧಾನ ಪರಿಷತ್ತಿನ(MLC) ಸದಸ್ಯರು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommayi) ಅವರನ್ನು ಭೇಟಿ ಮಾಡಿ ನಾನಾ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದ್ದಾರೆ.
ಎಂಎಲ್‌ಸಿ ಅರುಣ ಶಹಾಪುರ(Arun Shahapur) ಮತ್ತು ಇತರ ಎಂಎಲ್‌ಸಿ ಗಳು ಸಿಎಂ ಭೇಟಿ ಮಾಡಿದರು. ಅಲ್ಲದೇ, ಈ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂಬರುವ ಬಜೆಟ್ ನಲ್ಲಿ ಅನುದಾನ ಮೀಸಲಿಡುವಂತೆ ಅವರು ಆಗ್ರಹಿಸಿದರು.
ಬಿಜೆಪಿ ಎಂಎಲ್‌ಸಿಗಳು ಸಿಎಂ ಜೊತೆ ಸಭೆಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿದ ಪ್ರಮುಖ ಅಂಶಗಳು
ಸರಕಾರಿ ಶಾಲಾ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅಗತ್ಯ ಅನುದಾನ ಮೀಸಲಿಡಬೇಕು. 1995 ರ ನಂತರ ಆರಂಭವಾದ ಶಾಲೆ-ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಕಾಲ್ಪನಿಕ ವೇತನ ಬಡ್ತಿ ಸಮಸ್ಯೆ ಬಗೆಹರಿಸಬೇಕು. ಅನುದಾನ ಸಿಬ್ಬಂದಿಗಳಿಗೆ ಪಿಂಚಣಿ ಸೌಲಭ್ಯ ಒದಗಿಸಬೇಕು. ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಅಲ್ಲದೇ, ಅನುದಾನ ರಹಿತ ಐಟಿಐ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು. 1987-95ರ ಮದ್ಯ ಆರಂಭವಾದ ಸಾಮಾನ್ಯ ಆಡಳಿತ ಮಂಡಳಿಯ ಅನುದಾನ ರಹಿತ ಪದವಿ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಬೇಕು. ಅನುದಾನಿತ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವೈದ್ಯಕೀಯ ವೆಚ್ಚ ಪಾವತಿ ಮಾಡಬೇಕು. ಆರ್ಥಿಕ ಮಿತವ್ಯಯದ ಆದೇಶವನ್ನು ಸಂಪೂರ್ಣವಾಗಿ ಹಿಂಪಡೆಯುವ ಕುರಿತು ಸಿಎಂ ಜೊತೆ ನಡೆದ ಸಭೆಯಲ್ಲಿ ಎಂಎಲ್‌ಸಿಗಳು ಆಗ್ರಹಿಸಿದರು.
ಈ ಶಾಸಕರ ಬೇಡಿಕೆಗಳಿಗೆ ಸಕಾರಾತ್ಮಗವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಸ್ಯೆಗಳನ್ಮು ಬಗೆಹರಿಸುವ ಭರವಸೆ ನೀಡಿದರು.