ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ- ಪರಿಣಾಮಕಾರಿ ಆಯೋಜಿಸಲು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ

ವಿಜಯಪುರ: ವಿಜಯಪುರ{(Vijayapura) ಜಿಲ್ಲಾದ್ಯಂತ ಫೆ.27 ರಿಂದ ಮಾ. 2ರ ವರೆಗೆ ಪಲ್ಸ್ ಪೋಲಿಯೋ(Pulse) Polio) ಲಸಿಕಾ(Vaccination) ಕಾರ್ಯಕ್ರಮವನ್ನು(Programme) ಪರಿಣಾಮಕಾರಿ ಹಾಗೂ ಯಶಸ್ವಿಯಾಗಿ ಆಯೋಜಿಸುವ ಮೂಲಕ ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿಸಲು ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ(DC) ಪಿ. ಸುನೀಲ ಕುಮಾರ(Similar Kumar) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಜಯಪುರದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಾನಾ ಇಲಾಖೆಗಳ ಅಧಿಕಾರಿಗಳೊಂದಿಗೆ ಪಲ್ಸ್ ಪೋಲಿಯೋ, ಇಂದ್ರಧನುಷ್ ಐಎಮ್ಐ 4.0 ಲಸಿಕಾ ಕಾರ್ಯಕ್ರಮದ ಜಿಲ್ಲಾ ಟಾಸ್ಕ್ ಫೋರ್ಸ್ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಪಲ್ಸ್ ಪೋಲಿಯೋ ನಿರ್ಮೂಲನೆಯಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾಗಿದೆ. ನಾನಾ ಇಲಾಖೆಗಳ ಅಧಿಕಾರಿಗಳ ಸಹಕಾರವೂ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಿದರು.

ಪೊಲೀಯೋ ಅಭಿಯಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಉಂಟುಮಾಡಲು ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮ, ಪೊಲೀಯೋ ಕುರಿತು ಕರಪತ್ರಗಳನ್ನು ವಿತರಿಸುವುದು ಹಾಗೂ ಅಂಟಿಸುವುದು ಸೇರಿದಂತೆ ಬ್ಯಾನರ್ಗಳನ್ನು ಅಳವಡಿಸಲು ಕ್ರಮಕೈಗೊಳ್ಳುವಂತೆ ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರ ಪ್ರದೇಶದ ಎಲ್ಲ ಖಾಸಗಿ ಹಾಗೂ ಕಾಪೋರೇಟ್ ಆಸ್ಪತ್ರೆಗಳು, ಕ್ಲಿನಿಕ್ಗಳು ಮತ್ತು ವೈದ್ಯಕೀಯ ಸಂಸ್ಥೆಗಳ ಸಹಕಾರದೊಂದಿಗೆ ಇಲಾಖೆಗಳು ಲಸಿಕಾ ಬೂತ್ಗಳನ್ನು ತೆರೆದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಫೆ. 23 ರಿಂದ ಮಾ. 2ರ ವರೆಗೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ವಿದ್ಯುತ್ ನಿರಂತರವಾಗಿ ಸರಬರಾಜು ಆಗುವಂತೆ ಕೆ ಪಿ ಟಿ ಸಿ ಎಲ್ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮಾತನಾಡಿ, ಗ್ರಾ. ಪಂ. ಗಳ ವ್ಯಾಪ್ತಿಯಲ್ಲಿ ಪೊಲೀಯೋ ಅಭಿಯಾನದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಡಂಗುರ ಸಾರುವುದು, ಕರಪತ್ರಗಳನ್ನು ಹಂಚುವುದು, ಬ್ಯಾನರ್ ಅಳವಡಿಸಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮತ್ತು ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಕರಪತ್ರ ಮತ್ತು ಬ್ಯಾನರ್ಗಳನ್ನು ಬಿಡುಗಡೆ ಮಾಡಿದರು.

ಈ ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಕುಮಾರ ಯರಗಲ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಡಬ್ಲ್ಯೂಎಚ್ಒ ಪ್ರತಿನಿಧಿ ಡಾ. ಮುಕುಂದ ಗಲಗಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ. ಕೆ. ಚವ್ಹಾಣ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಕೆ. ಡಿ. ಗುಂಡಬಾವಡಿ, ಡಾ. ಸಂಪತ ಗುಣಾರೆ, ತಾಲೂಕಾ ಆರೋಗ್ಯಾಧಿಕಾರಿಗಳು, ಪ್ರೋಗ್ರಾಮ್ ಅನುಷ್ಠಾನ ಅಧಿಕಾರಿಗಳು ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌