ವಿಜಯಪುರ:ವಿಜಯಪುರ(Vijayapura) ನಗರದ ಡೋಬಳಿ ಗಲ್ಲಿಯಲ್ಲಿರುವ ಮರಾಠ(Maratha) ಸಂಸ್ಕೃತಿ ಭವನದಲ್ಲಿ(Cultural Bhavan) ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ(National Pulse Polio Programme) ನಡೆಯಿತು.
ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Yatnal) ಮಗುವಿಗೆ ಪಲ್ಸ್ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಭಾರತ ಈಗಾಗಲೇ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದು, ಅದನ್ನು ಮುಂದುವರೆಸಿಕೊಂಡು ಹೋಗಬೇಕಾದ ಅವಶ್ಯಕತೆ ಇದೆ. ಕೋವಿಡ್ ಲಸಿಕಾಕರಣದಲ್ಲಿ ನಮ್ಮ ಜಿಲ್ಲೆ ರಾಜ್ಯದಲ್ಲಿಯೇ ಎರಡನೇ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿರುವ ಐದು ವರ್ಷದೊಳಗಿರುವ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ದರ್ಗಾ ನಗರ ಆರೋಗ್ಯ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ, ಆರೋಗ್ಯ ಇಲಾಖೆಯ ಉಪನಿರ್ದೇಶಕಿ ಡಾ. ಲಕ್ಷ್ಮಿ, ಜಿಲ್ಲಾ ಆರೋಗ್ಯಾಧಿಕಾರಿ ರಾಜಕುಮಾರ ಯರಗಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಸ್ ಎಲ್. ಲಕ್ಕಣ್ಣವರ, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಡಾ. ಮುಕುಂದ ಗಲಗಲಿ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿ ಡಾ: ಕೆ. ಡಿ. ಗುಂಡಬಾವಡಿ, ಡಾ. ಸಂಪತ ಗುಣಾರಿ, ಡಾ. ಜೈಬುನ್ನಿಸಾ ಮುಂತಾದವರು ಉಪಸ್ಥಿತರಿದ್ದರು.