ರಾಜ್ಯ ಬಜೆಟ್ ನಿರಾಶಾದಾಯಕ- ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ ಎಂದು ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಆರೋಪಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, 2023 ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಬಿತ್ತಿಪತ್ರದಂತೆ ಈ ಬಜೆಟ್ ಭಾಸವಾಗುತ್ತಿದೆ.  40 ಪರ್ಸೆಂಟೇಜ್ ಸರಕಾರ ಎನ್ನುವ ಅಪಕೀರ್ತಿ ಪಡೆದಿರುವ ಈ ಸರಕಾರದ  ಮುಖ್ಯಮಂತ್ರಿಯಿಂದ ಬಜೆಟ್ ನಿಂದ ಜನರು ನಿರೀಕ್ಷಿಸುವುದಾದರೂ ಏನಿದೆ? ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಕೇವಲ ರೂ. 5000 ಕೋ. ಮೀಸಲಿಟ್ಟಿರುವುದು ನಿರಾಸೆ ಮೂಡಿಸಿದೆ.  ಶಿಕ್ಷಕರು ಮತ್ತು ಶಿಕ್ಷಣ ಕ್ಷೇತ್ರದ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ ಎಂದು ಟೀಕಿಸಿದ್ದಾರೆ.

ರೈತರ ಕಣ್ಣೀರು ಒರೆಸುವಲ್ಲಿಯೂ ಮುಖ್ಯಮಂತ್ರಿಗಳು ವಿಫಲರಾಗಿದ್ದಾರೆ.  ರಾಜ್ಯದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಕಳಪೆ ಮಟ್ಟದ ಬಜೆಟ್ ಇದಾಗಿದೆ ಎಂದು ಸಂಗಮೇಶ ಬಬಲೇಶ್ವರ ಹೇಳಿದ್ದಾರೆ ಬಜೆಟ್ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Leave a Reply

ಹೊಸ ಪೋಸ್ಟ್‌