ಸರಕಾರಿ ಶಾಲೆಗಳ ದುರಸ್ಥಿ, ಹೊಸ ಕೊಠಡಿಗಳು, ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡುವವರೆಗೆ ಧ್ವನಿ ಎತ್ತುತ್ತೇನೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಪಕ್ಷ ಕಾಂಗ್ರೆಸ್. ಈ ಪಕ್ಷವನ್ನು ಬಲಪಡಿಸಲು ಎಲ್ಲರೂ ಕಂಕಣಬದ್ಧರಾಗಿರೋಣ ಎಂದು ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ. 

ವಿಜಯಪುರದಲ್ಲಿಕಾಂಗ್ರೆಸ್ ಸದಸ್ಯತ್ವದಅಭಿಯಾನ ಅಂಗವಾಗಿ ಡಿಜಿಟಲ್ ಸದಸ್ಯತ್ವ ನೋಂದಣಿ ಮತ್ತುಕಾರ್ಯಾಗಾರಕ್ಕೆ ಚಾಲನೆ ನೀಡಿಮಾತನಾಡಿದಅವರು, ಐತಿಹಾಸಿಕ ಹಿನ್ನೆಲೆ ಹೊಂದಿರುವಕಾಂಗ್ರೆಸ್ ಪಕ್ಷಕ್ಕೆ ಹೆಚ್ಚೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಿ, ಪಕ್ಷವನ್ನು ಬಲಪಡಿಸಿ, ಮುಂಬರುವಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ತರಲು ಎಲ್ಲರೂ ಕಾರ್ಯೋನ್ಮುಖರಾಗೋಣ ಎಂದು ಕರೆ ನೀಡಿದರು.

ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಎಂ ಎಲ್ ಸಿ ಸುನೀಲಗೌಡ ಪಾಟೀಲ ಚಾಲನೆ ನೀಡಿದರು

ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಮತ್ತು ಉಚಿತ ಬಸ್ ಪಾಸ್ ಸೌಲಭ್ಯ ನೀಡುವಂತೆ ಹೋರಾಟ ನಡೆಸುತ್ತಿದ್ದೇನೆ. ಇದರ ಜೊತೆ ಸರಕಾರಿ ಶಾಲೆಗಳ ದುರಸ್ಥಿ, ಹೊಸ ಕೋಠಡಿಗಳ ನಿರ್ಮಾಣ ಹಾಗೂ ಶೌಚಾಲಯಗಳ ನಿರ್ಮಿಸಲು ಆಗ್ರಹಿಸಿ, ಸರ್ಕಾರದ ಮೇಲೆ ಒತ್ತಡತರುತ್ತೇನೆ. ಈ ಬೇಡಿಕೆಗಳು ಈಡೇರುವವರೆಗೆ ವಿರಮಿಸುವುದಿಲ್ಲ ಎಂದು ಅವರ ಹೇಳಿದರು.

ಕಳೆದ ಮೂರು ವರ್ಷಗಳಲ್ಲಿ ಸರಕಾರ ಬಡವರಿಗೆಒಂದೇ-ಒಂದು ಮನೆ ನೀಡಿಲ್ಲ. ಒಂದೂ ಸಮುದಾಯ ಭವನ ನಿರ್ಮಿಸಿಲ್ಲ. ಸರಕಾರಿ ಶಾಲೆಗಳ ದುಸ್ಥಿತಿ ಕುರಿತು ಗಮನ ಸೆಳೆದರೆ ತಪ್ಪು ಉತ್ತರ ನೀಡಿದೆ.ಪ್ರತಿಬಾರಿ ಪ್ರಧಾನಿ ನರೇಂದ್ರ ಮೋದಿ ಭಾರತ ಸಾಕಷ್ಟು ಅಭಿವೃದ್ಧಿ ಆಗಿದೆ.  ಈ ವಿಷಯದಲ್ಲಿ ಅಮೇರಿಕಾ ಮತ್ತು ಚೀನಾ ಸೇರಿದಂತೆ ಮೊದಲ ಹತ್ತು ರಾಷ್ಟ್ರಗಳ ಪಟ್ಟಿಯಲ್ಲಿ ನಾವಿದ್ದೇವೆ ಎಂದು ಹೇಳುತ್ತಾರೆ.  ಆದರೆ ಇಲ್ಲಿನ ಶಾಲೆಗಳನ್ನು ನೋಡಿದರೆ ಇಥಿಯೋಪಿಯಾ ದೇಶಕ್ಕಿಂತಲೂ ನಮ್ಮ ದೇಶದ ಪರಿಸ್ಥಿತಿ ಕೆಟ್ಟದಾಗಿದೆ.  ಹೀಗಿದ್ದಾಗ ಮೇಲ್ಚಾವಣೆ ಇಲ್ಲದ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹೇಗೆ ಓದಬೇಕು? ವಿಜಯಪುರ ಜಿಲ್ಲೆಯ ಸರಕಾರಿ ಶಾಲೆಗಳ ದುಸ್ಥಿತಿಗಳ ಕುರಿತು 1400 ಚಿತ್ರಗಳನ್ನು ಸಂಗ್ರಹಿಸಿದ್ದೇನೆ.  ಈ ಕುರಿತು ನಾನು ಕೇಳಿದ ಪ್ರಶ್ನೆಗೆ ಸರ್ಕಾರತಪ್ಪುಉತ್ತರ ನೀಡಿದೆ.  ಎಲ್ಲ ಶಾಲೆಗಳಲ್ಲಿ ಶೌಚಾಲಯ ಸೌಲಭ್ಯಗಳಿವೆ ಎಂದು ಉತ್ತರ ನೀಡಿದ್ದಾರೆ. ಆದರೆ ಯಾವ ಶಾಲೆಯಲ್ಲಿ ಈ ಸೌಲಭ್ಯಗಳಿವೆ ಎಂಬುದು ಗೊತ್ತಿಲ್ಲ.  ಈ ಕುರಿತು ಮತ್ತೆ ಸರಕಾರದ ಗಮನ ಸೇಳೆಯುತ್ತೇನೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಉದ್ಘಾಟಿಸಿ ಎಂ ಎಲ್ ಸಿ ಸುನೀಲಗೌಡ ಪಾಟೀಲ ಮಾತನಾಡಿದರು

ಸರಕಾರ ಈಗ ಪ್ರತಿ ಗ್ರಾಮ ಪಂಚಾಯಿತಿಗೆ 40 ರಿಂದ 50 ಮನೆಗಳನ್ನು ಮಾತ್ರ ನೀಡುತ್ತಿದೆ.  ಚುನಾವಣೆ ಹತ್ತಿರ ಬಂದಿರುವಾಗ ತಮ್ಮ ವೈಫಲ್ಯ ಮುಚ್ಚಿ ಹಾಕಲು ಈಗ ಮನೆಗಳನ್ನು ನೀಡಲು ಮುಂದಾಗಿದೆ ಎಂದು ಸುನೀಲಗೌಡ ಪಾಟೀಲ ಹೇಳಿದರು.

ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಮಾತನಾಡಿ, ಮಾಜಿ ಸಚಿವ ಎಂ. ಬಿ. ಪಾಟೀಲ ಅವರನ್ನು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದರಿಂದ ಪಕ್ಷಕ್ಕೆ ಶುಕ್ರದೆಸೆ ಆರಂಭವಾಗಿದೆ.  ಎಂ. ಬಿ. ಪಾಟೀಲ ಅವರು ಸಿದ್ದರಾಮಯ್ಯ ಅವರ ಸರಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ, ಎಐಸಿಸಿ ಅವರಿಗೆ ಹೆಚ್ಚಿನಜವಾಬ್ದಾರಿ ನೀಡಿದೆ.  ಪ್ರತಿಯೊಬ್ಬರು ತಮ್ಮಊರು, ಮತಕ್ಷೇತ್ರಗಳ ಜೊತೆ ಪಕ್ಕದ ಜಿಲ್ಲೆಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕಾಂಗ್ರೆಸ್ ಸದಸ್ಯರನ್ನಾಗಿ ಮಾಡಬೇಕು.  ಈ ಮೂಲಕ 2023 ಚುನಾವಣೆಯಲ್ಲಿ ಕಾಂಗ್ರೆಸ್‍ನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸೋಣ ಎಂದು ಹೇಳಿದರು.

ಕಾಂಗ್ರೆಸ್ ನಾಯಕಿ ಕಾಂತಾ ನಾಯಕ ಮಾತನಾಡಿ, ಸದಸ್ಯತ್ವ ನೋಂದಣಿ ಅಭಿಯಾನದ ಅಂಗವಾಗಿ ಪ್ರತಿ ಗ್ರಾಮದ ಬೂತ್ ಮಟ್ಟದಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಸಾಧನೆ ತಿಳಿಸುವ ಮೂಲಕ ಸದಸ್ಯರನ್ನಾಗಿ ಮಾಡಲಾಗುತ್ತಿದೆ.  ಅಲ್ಲದೇ, ಜನಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ, ಪರಿಹಾ ಒದಗಿಸಲು ಶ್ರಮಿಸಲಾಗುತ್ತಿದೆ.  ಅಲ್ಲದೇ, ಕಾಂಗ್ರೆಸ್ ಸದಸ್ಯತ್ವ ಪಡೆಯುವದರಿಂದ ಪಕ್ಷದ ಪದಾಧಿಕಾರಿಗಳ ಆಯ್ಕೆಗೆ ಹೇಗೆ ಸಹಕಾರಿಯಾಗಲಿದೆ ಎಂಬುದನ್ನು ಮನವರಿಕೆ ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಡಿಇ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾದ ಕೆ. ಬಿ. ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿ. ಪಂ. ಮಾಜಿ ಅಧ್ಯಕ್ಷರಾದ ಬಸವರಾಜ ದೇಸಾಯಿ, ಅರ್ಜುನ ರಾಠೋಡ, ಸೋಮನಾಥ ಬಾಗಲಕೋಟ, ವಿ. ಎಸ್. ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿದ್ದು ಗೌಡನ್ನವರ, ಈರಗೊಂಡ ಬಿರಾದಾರ, ಎಪಿಎಂಸಿ ಮಾಜಿ ನಿರ್ದೇಶಕ ಸಿದ್ದಣ್ಣ ಸಕ್ರಿ, ಜಿ. ಪಂ. ಮಾಜಿ ಸದಸ್ಯರಾದ ಬಾಪುಗೌಡ ಪಾಟೀಲ ಶೇಗುಣಸಿ, ಪ್ರತಿಭಾ ಪಾಟೀಲ, ತಾ. ಪಂ. ಮಾಜಿ ಅಧ್ಯಕ್ಷೆ ಪ್ರಭಾವತಿ ನಾಟಿಕಾರ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಮುಖಂಡರಾದ ವೆಂಕಣ್ಣ ಕೋರಡ್ಡಿ, ಮಧು ಸಾಹುಕಾರ, ಯಾಕೂಬ ಜತ್ತಿ, ಆರ್. ಜಿ. ಯರನಾಳ, ಅಶೋಕ ದಳವಾಯಿ, ಡಿ. ಎಲ್. ಚವ್ಹಾಣ, ಪೀರಪಟೇಲ್ ಪಾಟೀಲ, ಎಂ. ಎಸ್. ಲೋಣಿ, ಪ್ರಶಾಂತ ಜಂಡೆ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌