ವಿಜಯಪುರ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ವಿಜಯಪುರ ಜಿಲ್ಲೆಯ ತೊರವಿ ನಳಿಬಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಯ ಹಾಗೂ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾಕೇಂದ್ರದ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ವಿವಿ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ ಈ ಶಿಬಿರವನ್ನು ಉದ್ಘಾಟಿಸಿದರು. ಕುಲಸಚಿವ ಪ್ರೊ. ಎಂ. ಎನ್. ಚೋರಗಸ್ತಿ, ಹಾಗೂ ವಿಶ್ವವಿದ್ಯಾಲಯದ ನಾನಾ ವಿಭಾಗಗಳ ಪ್ರಾಧ್ಯಾಪಕರು, ಸಂಶೋಧನೆ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಶಿಬಿರದಲ್ಲಿ ಪಾಲ್ಗೊಂಡು, ಆರೋಗ್ಯ ತಪಾಸಣೆ ಮಾಡಿಕೊಂಡರು.
ಈ ಶಿಬಿರದಲ್ಲಿ ಒಟ್ಟು 450 ವಿದ್ಯಾರ್ಥಿನಿಯರು ತಮ್ಮ ಆರೋಗ್ಯ ತಪಾಸಣೆ ಮಾಡಿಕೊಂಡರು.