ವಿಜಯಪುರ ಜಿಲ್ಲಾಧಿಕಾರಿ ಮಾದರಿ ನಡೆ- ಉಕ್ರೇನಿನಿಂದ ಮರಳಿದ ವಿದ್ಯಾರ್ಥಿಗಳು, ಪೋಷಕರೊಂದಿಗೆ ಸಭೆ- ಹಿತ ಕಾಯಲು ಜಿಲ್ಲಾಡಳಿತ ಬದ್ಧ ಎಂದ ಡಿಸಿ
ವಿಜಯಪುರ: ವಿಜಯಪುರ(Vijayapura) ಜಿಲ್ಲಾಧಿಕಾರಿ(Deputy Commissioner) ಪಿ. ಸುನೀಲ ಕುಮಾರ(P Sunil Kumar) ಮಾದರಿ ಕೆಲಸ(Model work) ಮಾಡಿದ್ದಾರೆ. ಯುದ್ಧ ಪೀಡಿತ(War Hit) ಉಕ್ರೇನಿನಿಂದ(Ukrine) ಮರಳಿದ(Return) ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳು(Students) ಮತ್ತು ಪೋಷಕರೊಂದಿಗೆ(Parents) ಸಭೆ(Meeting) ನಡೆಸಿ ಧೈರ್ಯ ತುಂಬಿದ್ದಾರೆ. ವಿಜಯಪುರ ಜಿಲ್ಲೆಯ 16 ಜನ ವಿದ್ಯಾರ್ಥಿಗಳು ಉಕ್ರೇನಿನಲ್ಲಿ ಎಂ ಬಿ ಬಿ ಎಸ್ ಓದುತ್ತಿದ್ದಾರೆ. ರಷ್ಯಾ ಉಕ್ರೇನಿನ ಮೇಲೆ ಯುದ್ಧ ಸಾರಿದ್ದರಿಂದ ಅತಂತ್ರರಾಗಿದ್ದ ಎಲ್ಲ ವಿದ್ಯಾರ್ಥಿಗಳು ಈಗ ಬಸವ ನಾಡಿಗೆ ಸುರಕ್ಷಿತವಾಗಿ ಪಾವಸ್ಸಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳು […]
ಐದು ರಾಜ್ಯಗಳ ಚುನಾವಣಾ ಫಲಿತಾಂಶ: ರಾಜ್ಯದ ಮೇಲೆ ಸಕಾರಾತ್ಮಕ ಪರಿಣಾಮ- ಸಿಎಂ ಬೊಮ್ಮಾಯಿ
ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಸಕಾರಾತ್ಮಕವಾದ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಅವ್ಉ ಮಾತನಾಡುತ್ತಿದ್ದರು. ಈ ಫಲಿತಾಂಶ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಿ ಮುನ್ನಡೆಯಲು ನೆರವಾಗಲಿದೆ. ನಮ್ಮ ಸರಕಾರ ಬಜೆಟ್ ನಲ್ಲಿ ಈಗಾಗಲೇ ನೀಡಿರುವ ಉತ್ತಮ ಕಾರ್ಯಕ್ರಮಗಳನ್ನು ಒಂದು ಅನುಷ್ಠಾನ ಮಾಡುವ ಮೂಲಕ ಸುಭಿಕ್ಷ, ಸುಭದ್ರವಾದ, ನವ ಕರ್ನಾಟಕವನ್ನು ನಿರ್ಮಿಸಲಾಗುವುದು. ಯೋಜನೆಗಳನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸಿ ಜನರ ವಿಶ್ವಾಸವನ್ನು […]
ಮುಂಬರುವ ದಿನಗಳಲ್ಲಿ ನಿರ್ಮಾಣೋದ್ಯಮ ಗ್ರಾಮೀಣ ಭಾಗಕ್ಕೂ ವಿಸ್ತರಿಸಲಿದೆ- ಡಾ. ಅತುಲ ಆಯಿರೆ
ವಿಜಯಪುರ: ಮುಂಬರುವ ದಿನಗಳಲ್ಲಿ ದೇಶಾದ್ಯಂತ ನಗರ ಮತ್ತು ಗ್ರಾಮೀಣ ಎರಡೂ ಭಾಗಗಳಲ್ಲಿ ನಿರ್ಮಾಣೋದ್ಯಮ ವೇಗವಾಗಿ ಬೆಳವಣಿಗೆಯಾಗಲಿದೆ ಎಂದು ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ.ಅತುಲ್ ಆಯಿರೆ ಹೇಳಿದ್ದಾರೆ. ಅಟಲ್ ಯೋಜನೆಯಡಿ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (ಎಐಸಿಟಿಇ) ಹಾಗೂ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನ ಸಹಯೋಗದಲ್ಲಿ ಸಿವಿಲ್ […]
ಗ್ರಾ. ಪಂ. ಸದಸ್ಯರ ಗೌರವ ಧನ ಹೆಚ್ಚಳ ವಿಚಾರ- ಸಿಎಂ ಭೇಟಿಯಾಗಿ ಒತ್ತಾಯಿಸಿದ ಸುನೀಲಗೌಡ ಪಾಟೀಲ
ವಿಜಯಪುರ: ಗ್ರಾಮ ಪಂಚಾಯಿತಿ ಸದಸ್ಯರಿಗೆ ಕನಿಷ್ಠ ರೂ. 10 ಸಾವಿರ ಮಾಸಿಕ ಗೌರವ ಧನ ನೀಡಬೇಕು ಎಂದು ಆಗ್ರಹಿಸಿ ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ವಿನಂತಿಸಿದರು. ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಸದಸ್ಯರುಗಳಿಗೆ ವಿಶೇಷವಾಗಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ನೀಡುವ ಗೌರವ ಧನವನ್ನು ಹೆಚ್ಚಿಸಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಈ ಕುರಿತು ನಾನು ಸತತವಾಗಿ ಸಂಬಂಧಿಸಿದ ಸಚಿವರಿಗೆ ಮನವಿ ಮಾಡುತ್ತಾ […]
ಇಂದು ವಿಶ್ವ ಕಿಡ್ನಿ ದಿನ- ಮೂತ್ರಪಿಂಡದ ಕಾಳಜಿ ಹೇಗೆ? ಖ್ಯಾತ ವೈದ್ಯರಾದ ಡಾ. ಸಂದೀಪ ಹುಯಿಲಗೋಳ ನೀಡಿದ ಸಲಹೆಗಳನ್ನು ತಪ್ಪದೇ ಓದಿ
ಕಿಡ್ನಿ ಫೇಲ್ ಕುರಿತು ಜನರು ಭಯಪಡುವ ಅಗತ್ಯವಿಲ್ಲ, ಇದಕ್ಕೆ ಸೂಕ್ತವಾದ ಚಿಕಿತ್ಸೆಯಿದೆ ಎಂದು ಮೂತ್ರಪಿಂಡ ತಜ್ಞರಾದ ಡಾ. ಸಂದೀಪ ಹುಯಿಲಗೋಳ ಹೇಳಿದ್ದಾರೆ. ಇವರು ಬಾಗಲಕೋಟೆಯ ಜನಪ್ರಿಯ ವೈದ್ಯರು ಮತ್ತು Prepare Edutech ಎಂಬ ದೇಶದ ಮೊದಲ ಪ್ಯಾರಾಮೆಡಿಕಲ್ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಲಿಕಾ ತಾಣವಾದ preped.in ನ ಸಿಇಒ ಮತ್ತು ಸಹ-ಸ್ಥಾಪಕರು. ವಿಶ್ವ ಮೂತ್ರಪಿಂಡ ದಿನಾಚರಣೆ ಪ್ರಯುಕ್ತ (World Kidney Day ) ನಮ್ಮ ವೆಬ್ ತಾಣದ ಓದುಗರಿಗೆ ಅಮೂಲ್ಯ ಸಲಹೆಗಳನ್ನು ನೀಡಿದ್ದಾರೆ. ಜೊತೆಗೆ, ಕಿಡ್ನಿ ತೊಂದರೆಗಳ […]