ಬೆಂಗಳೂರು: ಖಾಸಗಿ(Private) ಅನುದಾನ ರಹಿತ(Un Granted) ಶಿಕ್ಷಣ ಸಂಸ್ಥೆಗಳ(Education Institutions) ಮಾನ್ಯತೆ(Accreditation) ನವೀಕರಣವನ್ನು(Renewal) ಪ್ರತಿವರ್ಷ ಮಾಡಬಾರದು. ಪ್ರತಿ 10 ವರ್ಷಗಳಿಗೊಮ್ಮೆ(Every 10 Years) ಮಾನ್ಯತೆ ನವೀಕರಿಸುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಕುರಿತು ಶಿಕ್ಷಣ ಇಲಾಖೆ ಕೂಡಲೇ ಸುತ್ತೋಲೆ ಹೊರಡಿಸುವಂತೆ ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ಸರಕಾರವನ್ನು ಒತ್ತಾಯಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಶೂನ್ಯವೇಲೆಯಲ್ಲಿ ಅರುಣ ಶಹಾಪುರ ಈ ಒತ್ತಾಯ ಮಾಡಿದರು. ಈ ಕುರಿತು ಪ್ರತಿಕ್ರಿಯೆ ನೀಡಿದ ವಿಧಾನ ಪರಿಷತ ಆಡಳಿತ ಪಕ್ಷದ ನಾಯಕ ಮತ್ತು ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಂದ ಉತ್ತರ ಪಡೆದು ಸದನದಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು.
ಹಳೆ ಪಿಂಚಣಿ ವ್ಯವಸ್ಥೆ ಮರುಜಾರಿಗೆ ಒತ್ತಾಯ
ಇದೇ ವೇಳೆ, ಅರುಣ ಶಹಾಪುರ ಅವರು, ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದು ಪಡಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸುವಂತೆ ಮುಖ್ಯಮಂತ್ರಿಯನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಉತ್ತರ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಕುರಿತು ಬೇರೆ ರಾಜ್ಯಗಳು ಕೈಗೊಂಡಿರುವ ನಿರ್ಧಾರ ಮತ್ತು ಹೊರಡಿಸಿರುವ ಆದೇಶವನ್ನು ಪರಿಶೀಲಿಸಿ ರಾಜ್ಯದಲ್ಲಿಯೂ ಜಾರಿ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಂಡ ನಂತರ ಸಂಪೂರ್ಣ ಮಾಹಿತಿ ನೀಡುವುದಾಗಿ ಉತ್ತರಿಸಿದರು.