ವಿಜಯಪುರ: ಮಗಳಾಗಿ,(Daughter) ಪತ್ನಿಯಾಗಿ(Wife), ತಾಯಿಯಾಗಿ(Mother), ಸ್ನೇಹಿತೆಯಾಗಿ(Friend) ಎಲ್ಲ ಪಾತ್ರಗಳನ್ನು ನಿಭಾಯಿಸುವ ಮಹಿಳೆಯ(Women) ಪಾತ್ರ(Role) ದೊಡ್ಡದು ಎಂದು ಅಕ್ಕಮಹಾದೇವಿ ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯ ಉಪಕುಲಪತಿಯವರು ಡಾ. ಬಿ.ಕೆ.ತುಳಸಿಮಾಲಾ ಹೇಳಿದರು.
ಬಿ ಎಲ್ ಡಿ ಇ ಸಂಸ್ಥೆಯ ಸಂಗನ ಬಸವ ಮಹಾಸ್ವಾಮೀಜಿ ಫಾರ್ಮಸಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬದುಕಿನ ಎಲ್ಲ ಸವಾಲುಗಳನ್ನು ಎದುರಿಸಿ ನಿಲ್ಲುವವಳೆ ಗಟ್ಟಿಗಿತ್ತಿ ಮಹಿಳೆ. ಹೆಣ್ಣು ಸಮಾಜದ ಕಣ್ಣು ಎಂದು ಹೇಳಿದರು.
ಬಿ ಎಲ್ ಡಿ ಇ ಡೀಮ್ಡ್ ವಿವಿ ಉಪಕುಲಪತಿ ಡಾ. ಆರ್. ಎಸ್. ಮುಧೋಳ ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದೆ. ಸರಕಾರ ಈ ನಿಟ್ಟಿನಲ್ಲಿ ಭ್ರೂಣ ಹತ್ಯೆ ಮತ್ತು ಲಿಂಗಪತ್ತೆ ಮಾಡದಂತೆ ಕಠಿಣ ಕ್ರಮಗಳನ್ನು ಜಾರಿಗೆ ತರಬೇಕು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಆರ್. ಬಿ. ಕೊಟ್ನಾಳ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಮಹಿಳಾ ಸಬಲೀಕರಣ ಸಂಸ್ಥೆ ನಿರ್ದೇಶಕಿ ಸುನಂದಾ ನಂದಿಕೋಲು ಹಾಗೂ ತೃಪ್ತಿ ಹೂನ್ನೂರ ಸೇರಿದಂತೆ ಬೋಧಕ ಸಿಬ್ಬಂದಿ ಉಪಸ್ಥಿತರಿದ್ದರು.