ಡಿಸಿ ನಡೆ ಹಳ್ಳಿಗಳ ಕಡೆ- ಈ ಬಾರಿ ಉಪ್ಪಲದಿನ್ನಿ ಗ್ರಾಮದಲ್ಲಿ ಕಾರ್ಯಕ್ರಮ- ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾಧಿಕಾರಿ

ವಿಜಯಪುರ: ಜಿಲ್ಲಾಧಿಕಾರಿಗಳ(Deputy Commissioner) ನಡೆ ಹಳ್ಳಿಗಳ ಕಡೆ(Nadige Halligala Kadege) ಕಾರ್ಯಕ್ರಮ(Programme) ಮಾ. 19 ರಂದು ವಿಜಯಪುರ(Vijayapura) ಜಿಲ್ಲೆಯ ಬಬಲೇಶ್ವರ(Babaleshwar) ತಾಲೂಕಿನ ಉಪ್ಪಲದಿನ್ನಿಯಲ್ಲಿ(Uppaladinni) ನಡೆಯಲಿದ್ದು, ಈ ಕಾರ್ಯಕ್ರಮದ ಪೂರ್ವಭಾವಿ ಸಭೆ ವಿಜಯಪುರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಉಪ್ಪಲದಿನ್ನಿ ಗ್ರಾಮದ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆ, ಸಾರ್ವಜನಿಕ ಸ್ಮಶಾನ ಭೂಮಿ ಸಮಸ್ಯೆ, ಪಿಂಚಣಿ, ವೈಯಕ್ತಿಕ ಮತ್ತು ಸಮುದಾಯ ಶೌಚಾಲಯ ಸಮಸ್ಯೆ, ರಸ್ತೆ ಸಮಸ್ಯೆ, ಆಶ್ರಯ ಯೋಜನೆಗಳಡಿಯ ಮನೆಗಳ ಸಮಸ್ಯೆ ಸೇರಿದಂತೆ ಇನ್ನೀತರ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ಗ್ರಾಮದ ಪ್ರತಿಯೊಬ್ಬರಿಗೂ ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಕಾರ್ಡ್ ಒದಗಿಸುವಂತಾಗಬೇಕು.  ಪ್ರತಿಯೊಬ್ಬರಿಗೂ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ಒದಗಿಸುವುದು ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ.  ಇದಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳ ಪರಿಣಾಮ ಕಾರಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಪ್ಪಲದಿನ್ನಿ ಗ್ರಾಮದ ಪರಿಶಿಷ್ಠರ ಕಾಲನಿಯಲ್ಲಿ ಚರಂಡಿ ಸಮಸ್ಯೆ ಗಂಭೀರವಾಗಿರುವುದು ಗಮನಕ್ಕೆ ಬಂದಿದೆ.  ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಅಲ್ಲಿಗೆ ತಾವೇ ಖುದ್ದಾಗಿ ಭೇಟಿ ನೀಡಿ, ಅಲ್ಲಿನ ಜನರೊಂದಿಗೆ ಚರ್ಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಗ್ರಾಮದ ರೈತರೊಂದಿಗೂ ಸಂವಾದ ಸಭೆ ನಡೆಸಲಾಗುವುದು.  ರೈತರೊಂದಿಗೆ ಚರ್ಚಿಸಿ ಅಲ್ಲಿನ ಕಾಲುದಾರಿ, ಮಮದಾಪೂರ ಕೆರೆಯ ಸಮಸ್ಯೆಯನ್ನೂ ಪರಿಹರಿಸಲು ಪ್ರಯತ್ನಿಸಲಾಗುವುದು.  ಸರಕಾರ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೈಗೊಂಡಿರುವ ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆಯ ಹಿನ್ನೆಲೆಯಲ್ಲಿ ಅಂದೂ ಕೂಡ ಗ್ರಾಮದ ಕೆಲವು ಜನರಿಗೆ ತಾವೂ ಖುದ್ದಾಗಿ ದಾಖಲೆಗಳನ್ನು ವಿತರಿಸುವುದಾಗಿ ಅವರು ತಿಳಿಸಿದರು.

ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೋಂಡಿದ್ದ ಅಧಿಕಾರಿಗಳು

ಸಭೆಯಲ್ಲಿ ಮಾತನಾಡಿದ ಜಿ. ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ, ಉಪ್ಪಲದಿನ್ನಿ ಗ್ರಾಮದಲ್ಲಿ ಕಣ್ಣಿನ ಸಮಸ್ಯೆ ಇರುವ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಬಬಲೇಶ್ವರ ತಹಸೀಲ್ದಾರ ಸಂತೋಷ ಮ್ಯಾಗೇರಿ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌