ಉಪ್ಪಲದಿನ್ನಿ ಗ್ರಾಮದ ಜ್ವಲಂತ ಸಮಸ್ಯೆಗಳಿಗೆ ಸ್ಪಂದನೆ- ಡಿಸಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆ(Vijayapura District) ಬಬಲೇಶ್ವರ(Babaleshwar)ತಾಲೂಕಿನ ಉಪ್ಪಲದಿನ್ನಿ(Uppaladinni) ಗ್ರಾಮದ ಜ್ವಲಂತ ಸಮಸ್ಯೆಗಳನ್ನು(Problems) ಪರಿಹರಿಸಲು ಪ್ರಾಮಾಣಿಕ(Honest) ಪ್ರಯತ್ನ ಮಾಡಲಾಗುವುದು. ಅದಕ್ಕೆ ಇಲ್ಲಿನ ಗ್ರಾಮಸ್ಥರ ಸಹಕಾರ(Cooperation) ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ಅವರು ಹೇಳಿದ್ದಾರೆ.

ಉಪ್ಪಲದಿನ್ನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಉಪ್ಪಲದಿನ್ನಿ ಗ್ರಾಮದ ಗಂಭೀರ ಸಮಸ್ಯೆಗಳಲ್ಲೊಂದಾದ ಸ್ಮಶಾನ ಭೂಮಿ ಒತ್ತುವರಿಗೆ ಸೂಕ್ತ ಕೈಗೊಳ್ಳಲಾಗುವುದು. ನರೇಗಾ ಯೋಜನೆಯಡಿ ಕಾಂಪೌಂಡ್ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ನಡಿಗೆ ಹಳ್ಳಿಗಳ ಕಡೆಗೆ ಕಾರ್ಯಕ್ರಮ ಉಪ್ಪಲದಿನ್ನಿಯಲ್ಲಿ ನಡೆಯಿತು

ಕಾಲುದಾರಿ ಹಾಗೂ ದೊಡ್ಡ ದಾರಿಗೆ ಸಂಬಂಧಿಸಿದಂತೆ 16 ಅಡಿ ಕಾಲುದಾರಿಯ ಸಮಸ್ಯೆಯನ್ನು ಪರಿಹರಿಸಲಾಗುವುದು. ಇಲ್ಲಿನ ಕಾಲುದಾರಿ ಸಮಸ್ಯೆಯನ್ನು ಗ್ರಾಮಸ್ಥರು ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಪರಸ್ಪರ ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಬಹುದು. ಈ ನಿಟ್ಟಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ದೊಡ್ಡ ದಾರಿಯ ಸಮಸ್ಯೆಯನ್ನು ಶಾಸಕರ ಅನುದಾನದಡಿ ಕ್ರಮ ಕೈಗೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಪರಿಶಿಷ್ಟ ಕಾಲೋನಿಯ ಚರಂಡಿ ಸಮಸ್ಯೆಯನ್ನು 15ನೇ ಹಣಕಾಸು ಯೋಜನೆಯ ಅಂದಾಜು ವೆಚ್ಚದಲ್ಲಿ ಸರಿಪಡಿಸಲಾಗುವುದು. ಗ್ರಾಮದ ಪ್ರತಿ ಮನೆ ಮನೆಗೂ ಜಲಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ‌ಬಸ್ಸು ನಿಲ್ದಾಣಕ್ಕೆ, ಮನೆಗಳ ಮೇಲಿನ ಕಂಬದ ತಂತಿ ಸಮಸ್ಯೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಈಗಾಗಲೇ ಗ್ರಾಮದ ಕೆಲವು ಪಾನ್ ಶಾಪಗಳಲ್ಲಿಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಅಂಥ ಅಂಗಡಿಗಳನ್ನು ಸೀಜ ಮಾಡಲಾಗಿದೆ. ಗ್ರಾಮದಲ್ಲಿ ಸಾರಾಯಿ ಅಂಗಡಿ ಬೇಡ ಎಂಬ ಮಹಿಳೆಯರ ಒತ್ತಾಯಕ್ಕೆ ಸೂಕ್ತವಾಗಿ ಸ್ಪಂದಿಸಲಾಗುವುದು. ಇದಕ್ಕೆ ಪುರುಷರ ಇಚ್ಛಾಶಕ್ತಿಯು ಮುಖ್ಯ ಎಂದು ಪಿ. ಸುನೀಲಕುಮಾರ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ ಮಾತನಾಡಿ, ಉಪ್ಪಲದಿನ್ನಿ ಗ್ರಾಮದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ತಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಗ್ರಾಮಸ್ಥರಿಗೆ ಭರವಸೆ ನೀಡಿದರು.

ಈ ಕಾರ್ಯಕ್ರಮದಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಡಿವೈಎಸ್ಪಿ ಲಕ್ಷ್ಮೀನಾರಾಯಣ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಂಗೂಬಾಯಿ ಸಿಂದೆ, ತಹಸೀಲ್ದಾರ ಸಂತೋಷ ಮ್ಯಾಗೇರಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ. ಎಸ್. ಪಠಾಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದೇ ವೇಳೆ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಊಟದ ಕೊಠಡಿ ಸೇರಿದಂತೆ ಇನ್ನಿತರ ವ್ಯವಸ್ಥೆಗಳ ಬಗ್ಗೆ ಡಿಸಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕೆಲವು ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಜಿಲ್ಲಾಧಿಕಾರಿಗಳು ಪರಿಹಾರ ಒದಗಿಸಿದರು.

ಇಲ್ಲಿಯವರೆಗೂ ಕಂದಾಯ ಸೇರಿದಂತೆ ನಾನಾ ಇಲಾಖೆಗಳಿಗೆ ಸಂಬಂಧಿಸಿದ ಒಟ್ಟು ಒಂದು 128 ಅರ್ಜಿಗಳು ಸಲ್ಲಿಕೆಯಾಗಿದ್ದು ಎಲ್ಲಾ ಅರ್ಜಿಗಳಿಗೆ ಪರಿಹಾರ ಒದಗಿಸಲಾಗಿದೆ ಎಂದು ಪಿ. ಸುನೀಲ ಕುಮಾರ ತಿಳಿಸಿದರು.

Leave a Reply

ಹೊಸ ಪೋಸ್ಟ್‌