ವಿಜಯಪುರ: ಯುಗಾದಿ(Ugadi) ಅಂಗವಾಗಿ ಉತ್ತರ ಕರ್ನಾಟಕದ(North Karnataka) ಅದರಲ್ಲೂ ವಿಜಯಪುರ ಜಿಲ್ಲೆಯಿಂದ(Vijayapura District) ಸಾವಿರಾರು ಭಕ್ತರು(Devotees) ನೆರೆ ರಾಜ್ಯದ ಶ್ರೀಶೈಲ ಮಲ್ಲಯ್ಯನ ದರ್ಶನಕ್ಕೆ(Shrishail Mallayya Darshana) ತೆರಳುತ್ತಾರೆ. ಪಾದಯಾತ್ರೆಯ(Padayatre) ಮೂಲಕವೂ ಭಕ್ತರು ದೇವರ ದರ್ಶನಕ್ಕೆ ತೆರಳುತ್ತಾರೆ. ಶ್ರೀಶೈಲದಲ್ಲಿ ಮಾ. 25 ರಿಂದ ಏ. 4ರ ವರೆಗೆ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಜಾತ್ರೆ(Festival) ನಡೆಯುತ್ತೆದೆ. ಈ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ತೆ ಯಾತ್ರಾರ್ಥಿಗಳಿಗಾಗಿ ವಿಶೇಷ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ ಎಂದು ವಿಜಯಪುರ ವಿಭಾಗದ ಕಕರಸಾ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಪುಲೆಕರ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಶ್ರೀಶೈಲ ಮಲ್ಲಯ್ಯನ ಭಕ್ತರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ವಿಜಯಪುರ ವಿಭಾಗದ ಕಕರಸಾ ನಿಗಮದಿಂದ ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟೆ, ಬಸವನ ಬಾಗೇವಾಡಿ ಬಸ್ ನಿಲ್ದಾಣಗಳಿಂದ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಯಾಣಿಕರಿಗೆ ವಿಜಯಪುರ ಕೇಂದ್ರ ಬಸ್ ನಿಲ್ದಾಣ ಹಾಗೂ ಆಯಾ ಬಸ್ ನಿಲ್ದಾಣಗಳಲ್ಲಿ ಮುಂಗಡ ಟಿಕೇಟ ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದೇ ಗುಂಪಿನಿಂದ ಪ್ರಯಾಣಿಸಲು ಕನಿಷ್ಟ 45 ರಿಂದ 55 ಜನ ಪ್ರಯಾಣಿಕರು ಲಭ್ಯವಾದರೆ ದಾರಿ ಮಧ್ಯ ಬರುವ ಯಾತ್ರಾ ಸ್ಥಳಗಳ ದರ್ಶನ ಮಾಡಿಸಲಾಗುವುದು. ಉಚಿತ ಅನ್ನ ಸಂತರ್ಪಣೆ ಸೌಲಭ್ಯವಿರುವ ಸ್ಥಳಗಳಲ್ಲಿ ಊಟಕ್ಕಾಗಿ ಕಾಲಾವಕಾಶ ಕೊಡಲಾಗುವುದು. ಘಟಕ ಕೇಂದ್ರ ಸ್ಥಾನದಿಂದ ಹೆಚ್ಚುವರಿ ಬಸ್ಸುಗಳಲ್ಲದೆ, ಪ್ರಯಾಣಿಕರು ಇಚ್ಛಿಸಿದಲ್ಲಿ ಅವರ ಸ್ವಗ್ರಾಮಗಳಿಂದ ನೇರವಾಗಿ ಶ್ರೀಶೈಲಕ್ಕೆ ಸಾರಿಗೆ ವ್ಯವಸ್ಥೆ ಒದಗಿಸಲಾಗುವದು ಎಂದು ಅವರು ತಿಳಿಸಿದ್ದಾರೆ.
ಪ್ರಯಾಣಿಕರು, ಮಂತ್ರಾಲಯ ಹಾಗೂ ಮಹಾನಂದಿ ದರ್ಶನ ಮಾಡಲು ಇಷ್ಟಪಟ್ಟರೆ ಈ ಸ್ಥಳಗಳಿಗೆ ತಗಲುವ ಪ್ರಯಾಣ ದರವನ್ನು ಪಾವತಿಸಿದಲ್ಲಿ ಮಂತ್ರಾಲಯ ಹಾಗೂ ಮಹಾನಂದಿಗೆ ಬಸ್ ಬಿಡಲಾಗುವುದು. ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಕರಸಾ ಸಂಸ್ಥೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಚಂದ್ರಕಾಂತ ಪುಲೆಕರ ಮಾಹಿತಿ ನೀಡಿದ್ದಾರೆ.
ಸಂಪರ್ಕಿಸಬಹುದಾದ ಅಧಿಕಾರಿಗಳು ಮತ್ತು ಮೊಬೈಲ್ ನಂಬರ್.
- ವಿಭಾಗೀಯ ತಾಂತ್ರಿಕ ಶಿಲ್ಪಿ ವಿಜಯಪುರ -7760992251,
- ವಿಜಯಪುರ ಡಿಪೊ-1 ಡಿಪೊ ಮ್ಯಾನೇಜರ್- 7760992263,
- ಡಿಪೊ ಮ್ಯಾನೇಜರ್, ಘಟಕ-2, 7760992264,
- ವಿಜಯಪುರ ಕೇಂದ್ರ ಬಸ್ ನಿಲ್ದಾಣಾಧಿಕಾರಿ- 7760992258, 08352-251344
- ಡಿಪೊ ಮ್ಯಾನೇಜರ್, ಇಂಡಿ-7760992265
- ಡಿಪೊ ಮ್ಯಾನೇಜರ್, ಸಿಂದಗಿ-7760992266,
- ಡಿಪೊ ಮ್ಯಾನೇಜರ್,ಮುದ್ದೇಬಿಹಾಳ-7760992267,
- ಘಟಕ ವ್ಯವಸ್ಥಾಪಕರು, ತಾಳಿಕೋಟ-7760992268,
- ಡಿಪೊ ಮ್ಯಾನೇಜರ್, ಬಸವನ ಬಾಗೇವಾಡಿ -7760998869.
ಹೆಚ್ಚಿನ ಮಾಹಿತಿಗಾಗಿ ವಿಭಾಗೀಯ ಸಾರಿಗೆ ಅಧಿಕಾರಿ ವಿಜಯಪುರ ದೂರವಾಣಿ ಸಂಖ್ಯೆ- 7760992252 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಚಂದ್ರಕಾಂತ ಪುಲೆಕರ ತಿಳಿಸಿದ್ದಾರೆ. ತಿಳಿಸಿದ್ದಾರೆ.