ಕೋವಿಡ್ ಮಾರ್ಗಸೂಚಿಯನ್ವಯ ಅರ್ಥಪೂರ್ಣವಾಗಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆಗೆ ನಿರ್ಧಾರ

ವಿಜಯಪುರ: ಏ. 14 ರಂದು ವಿಜಯಪುರ(Vijayapura) ಜಿಲ್ಲಾಡಳಿತದ(District Administration) ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ(Bharat Ratna) ಡಾ. ಬಾಬಾಸಾಹೇಬ ಅಂಬೇಡ್ಕರ(Dr. Babasaheb Ambedkar) ಅವರ ಜಯಂತಿಯನ್ನು(Birth Anniversary) ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.

ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರ ಅಧ್ಯಕ್ಷತೆಯಲ್ಲಿ ಡಿಸಿ ಕಚೇರಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳು ಮತ್ತು ಮುಖಂಡರು, ಗಣ್ಯರೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಯಿತು

ಈ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಏ. 14 ರಂದು ಬೆ. 9ಕ್ಕೆ ವಿಜಯಪುರ ನಗರದ ಡಾ. ಬಿ. ಆರ್. ಅಂಬೇಡ್ಕರ ಕ್ರೀಡಾಂಗಣದ ಬಳಿ ಇರುವ ಡಾ. ಬಾಬಾಸಾಹೇಬ ಅಂಬೇಡ್ಕರ ಮೂರ್ತಿಗೆ ನಾನಾ ಗಣ್ಯರಿಂದ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಗುವುದು.  ನಂತರ ಕಂದಗಲ ಹನುಮಂತರಾಯ ರಂಗಮಂದಿರದಲ್ಲಿ ಅಥವಾ ಸೂಕ್ತ ಸ್ಥಳದಲ್ಲಿ ಕೋವಿಡ್ ನಿಯಮಾವಳಿಗಳ ಅನ್ವಯ ಜಯಂತಿ ಆಚರಿಸಲು ಮತ್ತು ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು.

ಕೋವಿಡ್ ಹಿನ್ನಲೆಯಲ್ಲಿ ಈ ಜಯಂತಿಯಲ್ಲಿ ಮೆರವಣಿಗೆ ಮತ್ತು ಜಾಥಾಗೆ ಅವಕಾಶ ಇರುವುದಿಲ್ಲ.  ಈ ಕುರಿತಂತೆ ನಿಯಮಾವಳಿಗಳಲ್ಲಿ ವಿನಾಯಿತಿ ಅಥವಾ ಅವಕಾಶದ ಬಗ್ಗೆ ಸರಕಾರದ ಗಮನಕ್ಕೆ ತರಲು ಸಭೆಯಲ್ಲಿ ನಿರ್ಧರಿಸಲಾಯಿತು.  ಅಲ್ಲದೇ, ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು ನಿರ್ಧರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೋಂಡ ನಾನಾ ಗಣ್ಯರು

ಮಹಾನಗರ ಪಾಲಿಕೆಯಿಂದ ವೃತ್ತಗಳ, ಪುತ್ಥಳಿಗಳ, ಸ್ವಚ್ಛತೆ, ದೀಪಾಲಂಕಾರ ಮಾಡಬೇಕು. ಡಾ. ಬಿ. ಆರ್. ಅಂಬೇಡ್ಕರ್ ಅವರ ವೃತ್ತ ನಿರ್ಮಾಣ ಮತ್ತು ಅವರ ಮೂರ್ತಿ ಅನಾವರಣದ ಬಗ್ಗೆ ತಮ್ಮ ಸಲಹೆ ಪಡೆದಿದ್ದು, ಅವಶ್ಯಕ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಪಿ ಸುನೀಲ ಕುಮಾರ ಸಭೆಗೆ ಮಾಹಿತಿ ನೀಡಿದರು.

ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕಅಧಿಕಾರಿ ರಾಹುಲ ಶಿಂಧೆ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಹೆಚ್ಚುವರಿ  ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ ರಾಮ ಅರಸಿದ್ದಿ, ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ, ಕನ್ನಡ ಮತ್ತು ಸಂಸ್ಕೃತಿ ಸೇರಿದಂತೆ  ಸಮಾಜದ ಮುಖಂಡರಾದ ಅಡಿವೆಪ್ಪ ಸಾಲಗಲ, ಸಿದ್ಧು ರಾಯಣ್ಣನವರ, ಅಭಿಷೇಕ್ ಚಕ್ರವರ್ತಿ, ಅರವಿಂದ ಸಾಲವಾಡಗಿ, ಭೀಮರಾಯ ಜಿಗಜಿಣಗಿ, ಪೀರಪ್ಪ ನಡುವಿನಮನಿ, ವಿನಾಯಕ ಗುಣಸಾಗರ, ಮಳಸಿದ್ಧ ನಾಯ್ಕೋಡಿ, ಸೋಮನಗೌಡ ಕಲ್ಲೂರ, ದೇವೇಂದ್ರ ಮಿರೇಕರ್, ಗೀರಿಶ ಕುಲಕರ್ಣಿ, ವಿದ್ಯಾವತಿ ಅಂಕಲಗಿ,   ಸೇರಿದಂತೆ  ನಾನಾ ಅಧಿಕಾರಿಗಳು ಹಾಗೂ ನಾನಾ ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌