ಪೊಲೀಸರು, ಅವರ ಕುಟುಂಬದವರ ಕಲ್ಯಾಣಕ್ಕಾಗಿ ಇನ್ನೂ ಹೆಚ್ಚಿನ ಯೋಜನೆಗಳನ್ನು ರೂಪಿಸಬೇಕಿದೆ- ನಿವೃತ್ತ ಪೊಲೀಸ್ ಅಧಿಕಾರಿ ಎನ್. ಬಿ. ಜಾಧವ

ವಿಜಯಪುರ: ಕೊರೊನಾ(Corona) ಸಂದರ್ಭದಲ್ಲಿ ಜೀವದ ಹಂಗು ತೊರೆದು ವಾರಿಯರ್ಸಗಳಾಗಿ(Worriers) ಗಣನೀಯ ಸೇವೆ(Valuable Service) ಸಲ್ಲಿಸಿದ ಪೊಲೀಸj(Police) ಕಾರ್ಯ(Service) ಶ್ಲಾಘನೀಯವಾಗಿದೆ.  ಸೇವಾನಿರತ ಹಾಗೂ ನಿವೃತ್ತ ಪೊಲೀಸರು ಮತ್ತು ಅವರ ಕುಟುಂಬದವರ ಕಲ್ಯಾಣಕ್ಕಾಗಿ ಮತ್ತಷ್ಟು ಯೋಜನೆಗಳನ್ನು ರೂಪಿಸಬೇಕಾದ ಅವಶ್ಯಕತೆ ಇದೆ ಎಂದು ನಿವೃತ್ತ ಪೊಲೀಸ್ ಅಧೀಕ್ಷಕ ಎನ್. ಬಿ ಜಾಧವ ಹೇಳಿದ್ದಾರೆ. 

ವಿಜಯಪುರ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ಈ ದಿನವು ಪೊಲೀಸರ ಧೈರ್ಯ, ಶೌರ್ಯ ಹಾಗೂ ಸಮರ್ಪಣಾ ಮನೋಭಾವವನ್ನು ಸ್ಮರಿಸುವ ದಿನವಾಗಿದೆ.  ಪೊಲೀಸರು ಇನ್ನಷ್ಟು ಶ್ರದ್ಧೆ ಮತ್ತು ನಿಷ್ಠೆಯಿಂದ ರಚನಾತ್ಮಕ ಕಾರ್ಯದಲ್ಲಿ ತೊಡಗಲು ಸಂಕಲ್ಪ ಮಾಡುವ ದಿನ ಇದಾಗಿದೆ ಎಂದು ಹೇಳಿದರು.

ಪೊಲೀಸ್ ಕಲ್ಯಾಣ, ಧ್ವಜ ದಿನಾಚರಣೆ ಅಂಗವಾಗಿ ನಾನಾ ಪದಾತಿ ದಳ ವೀಕ್ಷಿಸಿದ ಎನ್. ಬಿ. ಜಾಧವ

ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು, ಸರಕಾರ ಜಾರಿಗೊಳಿಸಿರುವ ಆರೋಗ್ಯ ಭಾಗ್ಯ ಯೋಜನೆಯನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಬೇಕು.  ಪೊಲೀಸರ ಕಲ್ಯಾಣ ನಿಧಿಯನ್ನು ಸಂಗ್ರಹಿಸಿ, ಅದನ್ನು ಪೊಲೀಸರ ಮಕ್ಕಳ ಶಿಕ್ಷಣ ಹಾಗೂ ವೈದ್ಯಕೀಯ ಸೇವೆಗೆ ಬಳಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು.

ಎಸ್ಪಿ ಎಚ್. ಡಿ. ಆನಂದಕುಮಾರ ಮಾತನಾಡಿ, ಈ ದಿನ ಸೇವೆಯಲ್ಲಿರುವ ಪೊಲೀಸ್ ಅಧಿಕಾರಿಗಳ ಸಂಕಲ್ಪ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಗಳ ಸೇವೆ ಸ್ಮರಣೆಯ ದಿನವಾಗಿದೆ.  ಪೊಲೀಸರು ಸಾರ್ವಜನಿಕ ಜೀವನದಲ್ಲಿ ದಕ್ಷತೆಯಿಂದ ಕೆಲಸ ಮಾಡಬೇಕು.  ಪೊಲೀಸ್ ಕಲ್ಯಾಣ ಹಾಗೂ ಜೀವನಮಟ್ಟವನ್ನು ಹೆಚ್ಚಿಸುವುದು ಬಹಳ ಅವಶ್ಯಕವಾಗಿದ್ದುದೆ.  ಈ ನಿಟ್ಟಿನಲ್ಲಿ ಈಗಾಗಲೇ ಅನೇಕ ಕಲ್ಯಾಣಕಾರಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ.  ಪೊಲೀಸ್ ಕಲ್ಯಾಣಕ್ಕಾಗಿ ವಂತಿಕೆ ನಿಧಿ ಸಂಗ್ರಹಿಸಿ, ಅದನ್ನು ಸದ್ಭಳಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯ ಪೊಲೀಸರ ಕಲ್ಯಾಣಕ್ಕಾಗಿ ಸುವಿಧಾ ಗ್ಯಾಸ್ ಏಜೆನ್ಸಿ, ವ್ಯಾಯಾಮ ಶಾಲೆ, ಗ್ರಂಥಾಲಯ, ಬಯಲು ಚಿತ್ರಮಂದಿರ, ಟೆನ್ನಿಸ್ ಕೋರ್ಟ್ ನಂತಹ ಇನ್ನೂ ಅನೇಕ ವ್ಯವಸ್ಥೆಗಳನ್ನೂ ಮಾಡಲಾಗಿದೆ.  ಪೊಲೀಸ್ ಸಮುದಾಯ ಭವನ ನಿರ್ಮಾಣಕ್ಕೂ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಪೊಲೀಸರ ಕಲ್ಯಾಣ ನಿಧಿಯಲ್ಲಿ ಸಂಗ್ರಹವಾದ ಹಣವನ್ನು ಪೊಲೀಸರ ಮಕ್ಕಳ ಶಿಕ್ಷಣ ಹಾಗೂ ವೈದ್ಯಕೀಯ ಸೇವೆಗೆ ಬಳಸಲಾಗುತ್ತಿದೆ.  ಅಲ್ಲದೇ, ಪೊಲೀಸರ ಮರಣೋತ್ತರವಾಗಿಯೂ ಧನ ಸಹಾಯ ಕೂಡ ಮಾಡಲಾಗಿದೆ.  ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಪೋಲಿಸರ ಕಲ್ಯಾಣಕ್ಕಾಗಿ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ ಎಸ್ಪಿ ಎಚ್. ಡಿ. ಆನಂದಕುಮಾರ, ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪದಕ ಪಡೆದ ಜಿಲ್ಲೆಯ ಮೂರು ಜನ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.

ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಅವರು ಮಾತನಾಡಿ, ಇಂದಿನ ದಿನಗಳಲ್ಲಿ ಸಾರ್ವಜನಿಕರಿಗೂ ಪೊಲೀಸ್ ಇಲಾಖೆಯ ಕಾರ್ಯ ವೈಖರಿಯ ಬಗ್ಗೆ ಸ್ಪಷ್ಟ ಅರಿವು ಉಂಟಾಗುತ್ತಿದೆ.  ಪೊಲೀಸರ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೂ ಪಾತ್ರವಾಗಿದೆ.  ಇಂತಹ ಕಾರ್ಯಕ್ರಮಗಳಲ್ಲಿ ಪೊಲೀಸರ ತ್ಯಾಗ, ಕಠಿಣ ಪರಿಶ್ರಮಗಳನ್ನು ಸ್ಮರಿಸಿ, ಶ್ಲಾಘಿಸುತ್ತಿರುವುದು ಸೂಕ್ತವಾಗಿದೆ.  ಸಾರ್ವಜನಿಕರಿಗೂ ಪೊಲೀಸ್‍ರ ಕಾರ್ಯಗಳ ಬಗ್ಗೆ ಅರಿವು ಉಂಟಾದಾಗ ಅದಕ್ಕೆ ಹೆಚ್ಚಿನ ಬೆಲೆ ಬರುತ್ತದೆ.  ಇಲಾಖೆಯಲ್ಲಿ ಯಾವ ಅಧಿಕಾರಿಯೂ ಹೆಚ್ಚಲ್ಲ,  ಕಡಿಮೆಯಲ್ಲ,  ಪೊಲೀಸ್ ಪೇದೆ ಸೇರಿದಂತೆ ಇಲಾಖೆಯ ಎಲ್ಲ ಹಿರಿಯ ಹಾಗೂ ಕಿರಿಯ ಅಧಿಕಾರಿಗಳ ಸಹಕಾರ ಹಾಗೂ ಸಮನ್ವಯತೆಯಿಂದಲೇ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಬೇರೆ ಬೇರೆ ಇಲಾಖೆಗಳಲ್ಲಿ ಸಮಸ್ಯೆಗಳು ಎದುರಾದಾಗ ಪೊಲೀಸರು ಅಗತ್ಯ ಸಹಕಾರ ನೀಡಿ ಸಹಕರಿಸುತ್ತಿರುವುದು ಶ್ಲಾಘನೀಯ.  ಕೋವಿಡ್ ಸಂದರ್ಭದಲ್ಲಿ ಪೊಲೀಸರು ತೋರಿದ ಸೇವಾಮನೋಭಾವವನ್ನು ಯಾರೂ ಕೂಡ ಮರೆಯುವಂತಿಲ್ಲ.  ಚೆಕ್‍ಪೋಸ್ಟ್ ಸೇರಿದಂತೆ ಇನ್ನೀತರ ಕೋವಿಡ್ ಕಾರ್ಯಗಳಲ್ಲಿ ಪೊಲೀಸರ ಸಹಕಾರವೂ ಅತ್ಯಂತ ಪ್ರಮುಖವಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹೇಳೀದರು.

ಈ ಸಂದರ್ಭದಲ್ಲಿ ವೇಳೆ ಪೊಲೀಸ್ ಧ್ವಜ ದಿನಾಚರಣೆಯ ಸ್ಟೀಕರ್‍ನ್ನು ಬಿಡುಗಡೆ ಮಾಡಲಾಯಿತು.  ಆಕರ್ಷಕ ಪಥ ಸಂಚಲನವೂ ನಡೆಯಿತು.

ಈ ಕಾರ್ಯಕ್ರಮದಲ್ಲಿ ವಿಜಯಪುರ ಜಿ. ಪಂ  ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ ಶಿಂಧೆ, ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಸಿದ್ಧಿ, ವಿಜಯಪುರ ಡಿವೈಎಸ್ಪಿ ಲಕ್ಷ್ಮೀ ನಾರಾಯಣ ಸೇರಿದಂತೆ ಜಿಲ್ಲೆಯ ನಾನಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌