ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಡಾ. ಬಾಬು ಜಗಜೀವನರಾಮ ಜಯಂತಿ ಆಚರಣೆ

ವಿಜಯಪುರ: ಡಾ.ಬಾಬು ಜಗಜೀವನರಾಮ(Babu Jagajivanaram) ಅವರ ಬದುಕು(Life) ಮತ್ತು ಹೋರಾಟ(Fight) ಇಂದಿನ(Today) ಪೀಳಿಗೆಗೆ(Generation) ತಿಳಿಸಿಕೊಡಬೇಕಾದ ಅಗತ್ಯವಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಉಪಕುಲಸಚಿವ  ಡಾ.ಎ.ವೆಂಕಟೇಶ್ ಹೇಳಿದರು.

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ವತಿಯಿಂದ ಮಂಗಳವಾರ ಡಾ.ಬಾಬು ಜಗಜೀವನರಾಮ್ ಅವರ ೧೧೫ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಾ.ಬಾಬು ಜಗಜೀವನರಾಮ್ ಅವರ ಧೀಮಂತ ವ್ಯಕ್ತಿತ್ವವನ್ನು ಯುವಜನಾಂಗಕ್ಕೆ ಪರಿಚಯಿಸುವ ಮೂಲಕ ಅವರ ಉದಾತ್ತ ಆಲೋಚನೆಗಳಿಗೆ ಮರು ಜನ್ಮ ನೀಡಬೇಕಿದೆ ಎಂದು ಹೇಳಿದರು.

ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಡಾ. ಬಾಬು ಜಗಜೀವನರಾಮ ಜಯಂತಿ ಕಾರ್ಯಕ್ರಮ ನಡೆಯಿತು

ಕುಲಸಚಿವ ಎಂ.ಎನ್.ಚೋರಗಸ್ತಿ ಅವರು ಮಾತನಾಡಿ, ಡಾ.ಬಾಬು ಜಗಜೀವನರಾಮ್ ಅವರ ಜೀವನದ ಮೌಲ್ಯಗಳು ಇಂದಿನ ಯುವಪೀಳಿಗೆಗೆ ಅವಶ್ಯಕ ಎಂದು ಹೇಳಿದರು.

 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ. ಬಿ. ಕೆ. ತುಳಸಿಮಾಲ ಮಾತನಾಡಿ, ಹಸಿರು ಕ್ರಾಂತಿಯ ಹರಿಕಾರರಾಗಿದ್ದ ಡಾ. ಬಾಬು ಜಗಜೀವನರಾಮ ಅವರು ದೇಶದಲ್ಲಿ ಸುಸ್ಥಿರ ಕೃಷಿಗೆ ಬಹುದೊಡ್ಡ ಮತ್ತು ದೂರದೃಷ್ಟಿಯುಳ್ಳ ಕೊಡುಗೆ ನೀಡಿದ್ದಾರೆ. ಅವರು ಭಾರತೀಯ ಕೃಷಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ  ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಅಧ್ಯಾಪಕರುಗಳು, ಸಂಶೋಧನ ವಿದ್ಯಾರ್ಥಿನಿಯರು ಹಾಗೂ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಅಂಬೇಡ್ಕರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ವೆಂಕೋಬ ನಾರಾಯಣಪ್ಪ ಅವರು ಸ್ವಾಗತಿಸಿದರು. ಸಹಾಯಕ ನಿರ್ದೇಶಕ ಡಾ.ಸುರೇಶ ಕೆ.ಪಿ. ವಂದಿಸಿದರು. ಶ್ರೀದೇವಿ ಸಿಂಗೆ ಅತಿಥಿಗಳನ್ನು ಪರಿಚಯಿಸಿದರು.  ಡಾ. ಕಲಾವತಿ ಕಾಂಬ್ಳೆ ಕಾರ್ಯಕ್ರಮ ನಿರೂಪಿಸಿದರು.

Leave a Reply

ಹೊಸ ಪೋಸ್ಟ್‌