ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರಿದ ನಾನಾ ಸ್ವಾಮೀಜಿಗಳು

ವಿಜಯಪುರ: 11 ಜನ ಸ್ವಾಮೀಜಿಗಳು(11 Swamijis) ರಕ್ತದಾನ(Blood Donated) ಮಾಡುವ ಮೂಲಕ ಮನುಕುಲಕ್ಕೆ(Mankind) ಒಳಿತಾಗುವ(Help) ಉತ್ತಮ ಸಂದೇಶ(Good Message) ನೀಡಿದ್ದಾರೆ. 

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 11 ಜನ ಸ್ವಾಮೀಜಿಗಳು ಮತ್ತು 76 ಜನ ಸಾರ್ವಜನಿಕರು ಕೂಡ ರಕ್ತದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಾನಾ ಸ್ವಾಮೀಜಿಗಳು ರಕ್ತದಾನ ಮಾಡಿದರು

ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ, ವಿಜಯಪುರದ ಅಖಿಲ ಭಾರತ ವೀರಶೈವ ಮಹಾಸಭೆ ಮತ್ತು ಸಿಂದಗಿಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ಹಾಗೂ ವಿಜಯಪುರದ ಬಿ ಎಲ್ ಡಿ ಇ ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು ಮತ್ತು ಸಂಶೋಧನೆ ಕೇಂದ್ರದ ಸಂಯುಕ್ತಾಶ್ರಯದಲ್ಲಿ ರಕ್ತದಾನ ಶಿಬಿರ ನಡೆಸಲಾಯಿತು.  ಈ ಶಿಬಿರವನ್ನು ಅಖಿಲ ಭಾರತ ವೀರಶೈವ ಮರಾಸಭೆ ಸಿಂದಗಿ ತಾಲೂಕಾಧ್ಯಕ್ಷ ಅಶೋಕ ವಾರದ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯರು, ನಾಡಿನ ನಾನಾ ಮಠಗಳ ಶಿವಾಚಾರ್ಯರು, ಸಿಂದಗಿ ಸಾರಂಗ ಮಠಾಧೀಶ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು, ಕೊಣ್ಣೂರಿನ ಡಾ. ವಿಶ್ವಪ್ರಭು ಶಿವಾಚಾರ್ಯರು, ಕನ್ನೊಳ್ಳಿಯ ಸಿದ್ಧಲಿಂಗ ಶಿವಾಚಾರ್ಯರು, ಡಾ. ವಿಜಯಕುಮಾರ ವಾರದ, ಎಸ್. ಎಂ. ಬಿರಾದಾರ, ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌