ಬೆಂಗಳೂರು: ಬೆಲೆಯೇರಿಕೆಗೆ(Price Hike) ಸಂಬಂಧಿಸಿದಂತೆ ಕಾಂಗ್ರೆಸ್ಸಿಗೆ(Congress) ಪ್ರತಿಭಟನೆ(Protest) ಮಾಡುವ ನೈತಿಕ ಹಕ್ಕಿಲ್ಲ(Moral Right). ದೇಶದಲ್ಲಿ ಅತೀ ಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ಸಿನದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿChief Minister Basavaraj Bommayi) ಹೇಳಿದ್ದಾರೆ.
ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.
ಪಿಎಫ್ಐ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು, ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದರು.
ಮುಸ್ಕಾನ್ ಅವರಿಗೆ ಅಲ್ ಖೈದಾ ಮುಖ್ಯಸ್ಥರು ನೀಡಿರುವ ಬೆಂಬಲಕ್ಕೆ ಸಂಬಂಧಿಸಿದಂತೆ ಅನಂತಕುಮಾರ್ ಹೆಗಡೆ ಅವರು ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಏನಿದೆ ಎಂದು ಗೊತ್ತಿಲ್ಲ. ಅನಂತಕುಮಾರ್ ಹೆಗಡೆ ಅವರ ಬಳಿ ಚರ್ಚೆ ಮಾಡಿ ಅವರ ಬಳಿ ಇರುವ ಮಾಹಿತಿ ಬಗ್ಗೆ ತಿಳಿದುಕೊಳ್ಳಲಾಗುವುದು. ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುತ್ತಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸುಮಲತಾ ಅಂಬರೀಷ ಅವರ ಸಹೋದರಿಯ ಮಗಳ ಮದುವೆಗೆ ಆಹ್ವಾನಿಸಲು ಬಂದಿದ್ದರು. ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದು ಸಿಎಂ ತಿಳಿಸಿದರು.
ಉಡುಪಿ ಪ್ರವಾಸ
ಇಂದು ಉಡುಪಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದೇನೆ. ಬುಧವಾರ ಮಂಗಳೂರಿನಲ್ಲಿ ಪಕ್ಷದ ಸಂಘಟನಾತ್ಮಕ ಸಭೆಯಲ್ಲಿ ಭಾಗವಹಿಸುತ್ತೇದ್ದೇನೆ ಎಂದು ಅವರು ತಿಳಿಸಿದರು.