ಎಸ್ ಎಸ್ ಎಲ್ ಸಿ ಪರೀಕ್ಷೆ: ಮೇ 2ನೇ ವಾರ ಫಲಿತಾಂಶ- ಜೂನ ಕೊನೆಯ ವಾರ ಪೂರಕ ಪರೀಕ್ಷೆ- ಬಿ. ಸಿ. ನಾಗೇಶ.

ವಿಜಯಪುರ: ಈಗ ಮುಕ್ತಾಯವಾಗಿರುವ ಎಸ್‌ ಎಸ್ ಎಲ್‌ ಸಿ(SSLC) ಪರೀಕ್ಷೆ(Exam) ಫಲಿತಾಂಶ(Result) ಮೇ 2ನೇ ವಾರದಲ್ಲಿ(2ನೇ ವಾರ) ಪ್ರಕಟವಾಗಲಿದೆ.  ಅಲ್ಲದೇ, ಜೂನ್ ಕೊನೆಯ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ. ಸಿ. ನಾಗೇಶ(Education Minister B C Nagesh) ತಿಳಿಸಿದ್ದಾರೆ.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಮಾತನಾಡಿದ ಅವರು, ಸುಸೂತ್ರವಾಗಿ ಮುಗಿದಿದ್ದು, ಮೇ 2ನೇ ವಾರ ಫಲಿತಾಂಶ ಪ್ರಕಟವಾಗಲಿದೆ.  ಜೂನ್ ಕೊನೆಯ ವಾರ ಪೂರಕ ಪರೀಕ್ಷೆ ನಡೆಯಲಿವೆ

ರಾಜ್ಯಾದ್ಯಂತ ಮಾ. 28 ರಂದು ಆರಂಭವಾದ ಎಸ್‌ಎಸ್‌ಎಲ್‌ಸಿ  ಪರೀಕ್ಷೆ ಸುಸೂತ್ರವಾಗಿ  ಮುಕ್ತಾಯಗೊಂಡಿವೆ.  ಒಂದು ಪರೀಕ್ಷಾ ಕೇಂದ್ರದಲ್ಲಿ ಮಾತ್ರ ಪರೀಕ್ಷೆ ಅಕ್ರಮ ವರದಿಯಾಗಿದೆ. ಈ ಸಂಬಂಧ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ ಎಂದು ತಿಳಿಸಿದರು.

ಮೊದಲ ಬಾರಿ ಪರೀಕ್ಷೆ ಬರೆಯುತ್ತಿರುವವರಲ್ಲಿ ಹಾಜರಾತಿ ಪ್ರಮಾಣ ಶೇ.98ಕ್ಕಿಂತ ಹೆಚ್ಚು ಇದೆ.  ಆದರೆ, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಸಂಖ್ಯೆಯಲ್ಲಿ ಗೈರು ಹಾಜರಾತಿ ಪ್ರಮಾಣ ಎಂದಿನಂತೆ ಮುಂದುವರೆದಿದೆ.  ಇದಕ್ಕೆ ಎರಡು ಕಾರಣ ಇರಬಹುದು.  ಒಂದು ಸಲದಂತೆ ಈ ಬಾರಿಯೂ ಪಾಸ್ ಆಗಬಹುದು ಎಂದುಕೊಂಡಿರಬಹುದು.  ತಯಾರಿ ಮಾಡಿಕೊಂಡಿರಲಿಕ್ಕಿಲ್ಲ ಎಂದು ಅವರು ತಿಳಿಸಿದರು.

ಶಿಕ್ಷಣ ಸಚಿವ ಬಿ. ಸಿ. ನಾಗೇಶ ಆಲಮಟ್ಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು

ಮೇ ಎರಡನೇ ವಾರದಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ.  ಏ. 12 ಬುಧವಾರ ಕೀ ಉತ್ತರಗಳು, ಉತ್ತರಗಳಿಗೆ ಆಕ್ಷೇಪಣೆ ಕರೆಯುವುದು ಸೇರಿದಂತೆ ಇನ್ನಿತರ ಪ್ರಕ್ರಿಯೆಗಳು ಆರಂಭವಾಗುತ್ತವೆ.  ಏಪ್ರಿಲ್ ಕೊನೆಯ ವಾರದಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗುತ್ತದೆ.  ಮೇ 2ನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ.  ಜೂನ್ ಕೊನೆಯ ವಾರದಲ್ಲಿ ಪೂರಕ ಪರೀಕ್ಷೆ ನಡೆಯಲಿವೆ.  ಇದರಿಂದ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಕೋರ್ಸುಗಳಿಗೆ ಸೇರಲು ಅನುಕಾಲವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಈ ಬಾರಿ ಮಕ್ಕಳನ್ನು ಪರೀಕ್ಷೆಗೆ ತಯಾರಿ ಮಾಡುವುದು ಸವಾಲಾಗಿತ್ತು.  ನಮ್ಮ ಶಿಕ್ಷಕರು ಮತ್ತು ಪರೀಕ್ಷೆಗೆ ಸಂಬಂಧಿಿಸದ ಸಿಬ್ಬಂದಿ ಮಾದರಿ ಪ್ರಶ್ನೆ ಪತ್ರಿಕೆ ತಯಾರಿಸಿ ಸಾಕಷ್ಟು ಪೂರ್ವ ತಯಾರಿ ಮಾಡಿದ್ದರಿಂದ ವಿದ್ಯಾರ್ಥಿಗಳಿಗೆ ಸಾಕಷ್ಟು ಅನುಕೂಲವಾಗಿದೆ.  ಎರಡು ವರ್ಷ ಪರೀಕ್ಷೆ ಏನೆಂದು ಗೊತ್ತಿಲ್ಲದವರಿಗೆ ಪರೀಕ್ಷೆಗೆ ಸಿದ್ಧಪಡಿಸುವ ಮೂಲಕ ಶಿಕ್ಷಕರು, ಪೋಷಕರು, ಶಿಕ್ಷಣ ಇಲಾಖೆ ಸಿಬ್ಬಂದಿ ಉತ್ತಮ ಕೆಲಸ ಮಾಡಿದ್ದಾರೆ.  ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ.

ಸಮವಸ್ತ್ರ ವಿಚಾರ

ಸಮವಸ್ತ್ರ ವಿಚಾರವಾಗಿ ಶಾಲೆಗಳಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ..  ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.  ಅನಾರೋಗ್ಯ ಲಕ್ಷಣಗಳು ಕಂಡು ಬಂದರೆ ಅಂಥ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಕೊಠಡಿ ವ್ಯವಸ್ಥೆ ಮಾಡಲಾಗಿತ್ತು.   ಪರೀಕ್ಷೆಯ ಅವಧಿಯಲ್ಲಿ ಯಾವೊಬ್ಬ ವಿದ್ಯಾರ್ಥಿಗೂ ಕೋವಿಡ್ ಪಾಸಿಟಿವ್ ಬಂದಿಲ್ಲ ಎಂದು ಶಿಕ್ಷಣ ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌