ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ರಚಿಸಿರುವ ಭಾರತದ ಸಂವಿಧಾನ ವಿಶ್ವಕ್ಕೆ ಮಾದರಿಯಾಗಿದೆ- ಸಚಿವ ಉಮೇಶ ಕತ್ತಿ

ವಿಜಯಪುರ: ಸ್ವತಂತ್ರ ಭಾರತ(Independent Inida) ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ(Democracy System) ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ(Dr. B. R. Ambedkar) ಅವರು ರಚಿಸಿರುವ ಸಂವಿಧಾನ(Constitution) ಭದ್ರ ಬುನಾದಿಯಾಗಿದೆ ಎಂದು ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಖಾತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ(Minister Umesh Katti) ಹೇಳಿದ್ದಾರೆ. 

ವಿಜಯಪುರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಆಚರಿಸಲಾಯಿತು

ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ವಿಜಯಪುರ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಡಾ. ಬಿ. ಆರ್. ಅಂಬೇಡ್ಕರ್ ಅವರ 131ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡಾ. ಅಂಬೇಡ್ಕರ ಅವರು ಭಾರತ ಹಾಗೂ ವಿಶ್ವಕ್ಕೆ ಮಾದರಿಯಾದ ಸಂವಿಧಾನ ಬರೆದು ಭಾರತದ ಪ್ರಜಾಪ್ರಭುತ್ವ ವ್ವವಸ್ಥೆಗೆ ಭದ್ರ ಬುನಾದಿ ಹಾಕಿದ್ದಾರೆ.  130 ಕೋಟಿ ಭಾರತೀಯ ಜನರ ಬದುಕು ಸಂವಿಧಾನದ ಆಶಯದಂತೆ ನಡೆಯುತ್ತಿದೆ.  ನಾಗರಿಕರಿಗೆ ಸಂವಿಧಾನವು ದಾರಿದೀಪವಾಗಿದೆ ಎಂದು ಹೇಳಿದರು.

ಲಿಂಬೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪುರ ಮಾತನಾಡಿ, ಮಹಾನ್ ಮಾನವತಾವಾದಿ, ಮಹಿಳಾ ಮತ್ತು ಜಾತಿ ಸಮಾನತೆಗೆ ಹೋರಾಡಿದ ಡಾ. ಅಂಬೇಡ್ಕರ್ ಅವರು ವಿಶ್ವಕ್ಕೆ ಮಾದರಿಯಾಗಿದ್ದಾರೆ.  ದೇಶ ಕಂಡ ಶ್ರೇಷ್ಠ ಚಿಂತಕ ಡಾ. ಅಂಬೇಡ್ಕರ ರಚಿಸಿದ ಸಂವಿಧಾನದ ಅನ್ವಯ ಜೀವನ ನಡೆಸಿ ದೇಶದ ಕೀರ್ತಿ ಹೆಚ್ಚಿಸೋಣ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂ ಪೀರ ವಾಲಿಕಾರ ಮಾತನಾಡಿ, ಬಸವಾದಿ ಶರಣರು ದುರ್ಬಲರ ಶೋಷಿತ ವರ್ಗಗಳ, ಅಸಹಾಯಕರಿಗೆ ಶ್ರಮಿಸಿದ್ದರೆ ಡಾ. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಈ ದೇಶದ ವಿಧಿ ಬರೆದರು ಎಂದು ಹೇಳಿದರು.

ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಪ್ರತಿಯೊಬ್ಬರು ಡಾ. ಅಂಬೇಡ್ಕರ್ ಅವರ ಆದರ್ಶಗಳನ್ನು ಪಾಲಿಸಬೇಕು.  ಕಷ್ಟ, ಅಪಮಾನ, ನೋವುಗಳ ಮಧ್ಯೆ ಅಸ್ಪೃಶ್ಯತೆ ವಿರುದ್ದ, ಮಹಿಳಾ ಸಮಾನತೆಗೆ, ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಸಮಾನತೆಗೆ ಹೋರಾಡಿದರು. ಡಾ. ಅಂಬೇಡ್ಕರ ಅವರ ಜೀವನ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಹೇಳಿದರು.

ಪತ್ರಕರ್ತ ವಾಸುದೇವ ಹೆರಕಲ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ತೊರವಿ ಗ್ರಾಮದ ಸಾಮಾಜಿಕ ಸಾಮರಸ್ಯಕ್ಕೆ ಶ್ರಮಿಸಿದ ಹಿರಿಯ ನಾಗರಿಕ ಸಿದ್ದನಗೌಡ ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಜಿ. ಪಂ. ಸಿಇಓ ರಾಹುಲ್ ಶಿಂಧೆ, ಎಸ್ಪಿ ಎಚ್. ಡಿ. ಆನಂದ ಕುಮಾರ, ಎಡಿಸಿ ರಮೇಶ ಕಳಸದ, ಎಎಸ್ಪಿ ಡಾ. ರಾಮ ಲಕ್ಷ್ಮಣ ಅರಿಸಿದ್ದಿ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಲಕ್ಷ್ಮಣ ಜಾದವ, ವಿಕ್ರಮ ಗಾಯಕವಾಡ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ತಹಸೀಲ್ದಾರ ಸಿದ್ಧರಾಮ ಭೋಸಗಿ ಉಪಸ್ಥಿತರಿದ್ದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಮನಗೌಡ ಕನ್ನೊಳ್ಳಿ ಸ್ವಾಗತಿಸಿದರು.  ರಾಜಶೇಖರ ಕಾರ್ಯಕ್ರಮ ನಿರ್ವಹಿಸಿದರು.

Leave a Reply

ಹೊಸ ಪೋಸ್ಟ್‌