ಧಾರವಾಡ ಶಿಕ್ಷಣ ಇಲಾಖೆ ಅಪರ ಆಯುಕ್ತರ ವ್ಯಾಪ್ತಿಯಲ್ಲಿ ಖಾಲಿಯಿರುವ ಬೋಧಕ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸಿಎಂ ಆದೇಶ- ಅರುಣ ಶಹಾಪುರ ಅಭಿನಂದನೆ

ವಿಜಯಪುರ: ಧಾರವಾಡ(Dharawad) ಸಾರ್ವಜನಿಕ ಶಿಕ್ಷಣ ಇಲಾಖೆ(Education Department) ಅಪರ ಧಾರವಾಡ ಆಯುಕ್ತರ(Commessioner)  ವ್ಯಾಪ್ತಿಯಲ್ಲಿ(Juridisction) ಬರುವ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ(Private Aided High Schools) ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ವಾಯುವ್ಯ ಶಿಕ್ಷಕರ ಕ್ಷೇತ್ರದ ಎಂ ಎಲ್ ಸಿ ಅರುಣ ಶಹಾಪುರ, 31.12.2015ಕ್ಕೂನಾನಾ ಕಾರಣಗಳಿಗಾಗಿ ಖಾಲಿ ಇರುವ ಬೋಧಕ ಹುದ್ದೆಗಳ ಪೈಕಿ 318 ಹುದ್ದೆಗಳ ಪೈಕಿ 114 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ.  ಈಗ 114 ಹುದ್ದೆಗಳನ್ನು ಹೊರತು ಪಡಿಸಿ ಬಾಕಿ ಉಳಿದ 204 ಬೋಧಕ ಹುದ್ದೆಗಳಿಗೆ ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ನಿಯಮಾನುಸಾರ ಆಯ್ಕೆ ಪ್ರಕ್ರಿಯೆಯ ಎಲ್ಲಾ ಹಂತಗಳನ್ನು ಪೂರ್ಣಗೊಳಿಸಿರುವುದನ್ನು ಖಚಿತ ಪಡಿಸಿಕೊಂಡು ಈ ಹುದ್ದೆಗಳಿಗೆ ನೇಮಕಾತಿ ಆದೇಶಗಳನ್ನು 2022-23ನೇ ಶೈಕ್ಷಣಿಕ ವರ್ಷ ಪ್ರಾರಂಭವಾದ ನಂತರ ನೀಡಲು ಸರಕಾರ ಆದೇಶ ಹೊರಡಿಸಿದೆ ಎಂದು ಅವರು ತಿಳಿಸಿದ್ದಾರೆ.
ಸರಕಾರದ ಆದೇಶ ಪತ್ರ

ಸಿಎಂ ಗೆ ಅರುಣ ಶಹಾಪುರ ಅಭಿನಂದನೆ

ಸರಕಾರದ ಈ ನಿರ್ಧಾರವನ್ನು ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ಸ್ವಾಗತಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

Leave a Reply

ಹೊಸ ಪೋಸ್ಟ್‌