New DC: ಗೋಲ್ಡ್ ಮೆಡಲಿಸ್ಟ್, ಸೈನಿಕ್ ಸ್ಲೂಲ್ ಸ್ಟೂಡೆಂಟ್, ಕನ್ನಡಿಗ- ಇದು ವಿಜಯಪುರ ನೂತನ ಡಿಸಿ ವಿಜಯಮಹಾಂತೇಶ ಬಿ. ದಾನಮ್ಮನವರ ವಿಶೇಷತೆ

ಮಹೇಶ ವಿ. ಶಟಗಾರ

ವಿಜಯಪುರ: ಹೊಸದಾಗಿ ಜಿಲ್ಲಾಧಿಕಾರಿಗಳು(New Deputy Commissioner) ಬಂದರೆ ಅವರು ಎಲ್ಲಿಯವರು, ಅವರ ಶೈಕ್ಷಣಿಕ ಹಿನ್ನೆಲೆ(Educational Background) ಏನು, ಎಲ್ಲೆಲ್ಲಿ ಕೆಲಸ(Previous Work) ಮಾಡಿದ್ದಾರೆ? ನಮ್ಮವರಾ ಆಂದರೆ ಕರ್ನಾಟಕದವರಾ(Kannadiga), ಅಕ್ಕಪಕ್ಕದ ರಾಜ್ಯದವರಾ ಅಥವಾ ಉತ್ತರ ಭಾರತದವರಾ(North Indian) ಎಂಬ ಕುತೂಹಲ ಆಯಾ ಜಿಲ್ಲೆಗಳ ಜನಸಾಮಾನ್ಯರಲ್ಲಿರುತ್ತದೆ.  ಅಷ್ಟೇ ಅಲ್ಲ, ಬಹುತೇಕ ಕುತೂಹಲಕ್ಕೆ ತಡಕಾಡಿದರೂ ಅವರಿಗೆ ಸಂಪೂರ್ಣ ಮಾಹಿತಿಯೂ ಸಿಗುವುದಿಲ್ಲ.

ಆದರೆ, ವಿಜಯಪುರ ನೂತನ ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ತಮ್ಮ ಬಗ್ಗೆ ಎಲ್ಲ ಮಾಹಿತಿಯನ್ನು ಬಿಚ್ಚಿಡುವ ಮೂಲಕ ಜನರಿಗೆ ಹತ್ತಿರವಾಗುವ ಸುಳಿವು ನೀಡಿದ್ದಾರೆ.  ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಚರ್ಚಿಸಿದ ಅವರು, ತಾವು ದಿನದ 24 ಗಂಟೆಯೂ ಜಿಲ್ಲೆಯ ಅಭಿವೃದ್ಧಿಗೆ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧರಿರುವುದಾಗಿ ಹೇಳುವ ಮೂಲಕ ಗಮನ ಸೆಳೆದಿದ್ದಾರೆ.

ವಿಜಯಪುರ ನೂತನ ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ರಣತೂರ ನನ್ನ ಸ್ವಗ್ರಾಮವಾಗಿದೆ.  ಹಾವೇರಿ ಜಿಲ್ಲೆಯ ಕಿತ್ತೂರ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ 5ನೇ ತರಗತಿಯವರೆಗೆ ಓದಿದ್ದೇನೆ.  ಮುಂದೆ ಪಶು ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ ಪದವಿ ಓದಿರುವುದಾಗಿ ಹೇಳಿದರು.  ಅಲ್ಲದೇ, ತಾವು ಪದವಿಯಲ್ಲಿ ಚಿನ್ನದ ಪದಕ ಪಡೆದಿರುವುದಾಗಿಯೂ ತಿಳಿಸಿದರು.  ಇದೆಲ್ಲಕ್ಕಿಂತಲೂ ಮಿಗಿಲಾಗಿ ತಾವು ವಿಜಯಪುರದ ಪ್ರತಿಷ್ಠಿತ ಸೈನಿಕ ಶಾಲೆಯಲ್ಲಿ 6 ರಿಂದ 12ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿರುವುದಾಗಿ ತಿಳಿಸಿದ ಅವರು, ತಾವು ವಿದ್ಯಾಭ್ಯಾಸ ಮಾಡಿದ ಜಿಲ್ಲೆಯಲ್ಲಿಯೇ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವುದು ಅವರಲ್ಲಿ ಹೆಮ್ಮೆಯಿದೆ ಎಂದು ಹೇಳಿದರು.

ಇದನ್ನು ಓದಿ:

ವಿಜಯಪುರ ಹೊಸ ಡಿಸಿ ವಿಜಯಮಹಾಂತೇಶ ಬಿ.‌ದಾನಮ್ಮನವರ ಅಧಿಕಾರ ಸ್ವೀಕಾರ- ಶುಭ ಕೋರಿದ ನಿರ್ಗಮಿತ ಡಿಸಿ ಪಿ. ಸುನೀಲ ಕುಮಾರ

ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಯಾಗಿ, ರಾಜ್ಯ ಶಿಷ್ಟಾಚಾರ ಇಲಾಖೆಯ ಉಪ ಕಾರ್ಯದರ್ಶಿಯಾಗಿ, ದಾವಣಗೆರೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ, ಹೆಸ್ಕಾಂ ಜನರಲ್ ಮ್ಯಾನೇಜರ್ ಆಗಿ, ಸಹಾಯಕ ಆಯುಕ್ತರಾಗಿ, ಅಪರ ಜಿಲ್ಲಾಧಿಕಾರಿಗಳಾಗಿ ಬೆಂಗಳೂರು, ಧಾರವಾಡ, ದಾವಣಗೆರೆ, ಉತ್ತರ ಕನ್ನಡ, ಬಾಗಲಕೋಟ, ಬೆಳಗಾವಿ, ಕಾರವಾರ ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿರುವುದಾಗಿ ತಿಳಿಸಿದರು.  ತಾವು ಉತ್ತರ ಕರ್ನಾಟಕದವರಾಗಿದ್ದರಿಂದ ಈ ಭಾಗದಲ್ಲಿ ಯಾವುದಾದರೊಂದು ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಬೇಕೆಂಬ ಬಯಕೆಯಿತ್ತು.  ಈಗ ವಿಜಯಪುರ ಜಿಲ್ಲಾಧಿಕಾರಿಯಾಗಿ ಸರಕಾರ ತಮ್ಮನ್ನು ವರ್ಗಾವಣೆ ಮಾಡಿದ್ದು, ಸರಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದರು.

ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು: ನೀಡಿ ಶಕ್ತಿ ಮೀರಿ ಪ್ರಯತ್ನಿಸುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು, ವಿಜಯಪುರ ಜಿಲ್ಲೆಯು ಐತಿಹಾಸಿಕ ಸ್ಮಾರಕಗಳಿಗೆ ಹೆಸರಾದ ನಗರವಾಗಿದೆ. ಹೀಗಾಗಿ ಇಲ್ಲಿನ ಸ್ಮಾರಕಗಳ ರಕ್ಷಣೆಗೆ ಆದ್ಯತೆ ನೀಡುವುದಾಗಿ ತಿಳಿಸಿದರು.  ವಿಶೇಷವಾಗಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು.  ಸರಕಾರದ ಪ್ರತಿಯೊಂದು ಯೋಜನೆಗಳ ಲಾಭವು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ನಿಟ್ಟಿನಲ್ಲಿ ಆಡಳಿತದಲ್ಲಿ ಬಿಗಿಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಹಿಂದಿನ ಜಿಲ್ಲಾಧಿಕಾರಿಗಳಾದ ಪಿ. ಸುನೀಲ ಕುಮಾರ ಅವರು ಕೈಗೊಂಡ ಉತ್ತಮ ಕಾರ್ಯಗಳನ್ನು ತಾವು ಕೂಡ ಮುಂದುವರೆಸುವುದಾಗಿ ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾಡಳಿತದಿಂದ ಕೈಗೊಳ್ಳವ ಯಾವುದೇ ಸಭೆ ಸಮಾರಂಭ ಮತ್ತು ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಸಕಾಲದಲ್ಲಿ ಮಾಧ್ಯಮದವರಿಗೆ ತಲುಪಿಸುವ ವ್ಯವಸ್ಥೆಯನ್ನು ಕೂಡ ಮಾಡುವುದಾಗಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಏ. 26ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಜಯಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.  ಈ ಸಂಬAಧ ಈಗಾಗಲೇ ಪೂರ್ವಭಾವಿ ಸಿದ್ಧತಾ ಸಭೆಗಳನ್ನು ನಡೆಸಲಾಗಿದೆ. ಸಿಎಂ ಪ್ರವಾಸ ಕುರಿತು ಈಗಾಗಲೇ ಅಧಿಕೃತ ಮಾಹಿತಿ ಬಂದಿದೆ. ತಾಳಿಕೋಟೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲಿದ್ದಾರೆ.  ಈ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯುವಂತೆ ನೋಡಿಕೊಳ್ಳಲಾಗುವುದು ಎಂದು ವಿಜಯಪುರ ನೂತನ ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದರು.

ಈ ಸಂದರ್ಭದಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಮತ್ತು ಇತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌