ವಿಜಯಪುರ: ಬಸವ ನಾಡಿನ(Basava Nadu) ಬಹು ವರ್ಷಗಳ(Long Demand) ಬೇಡಿಕೆ ಈಗ ಈಡೇರುತ್ತಿದೆ. ಈ ಬಾರಿ ಬಸವ ಜಯಂತಿ(Basava Jayanti) ರಾಜ್ಯ ಮಟ್ಟದ ಕಾರ್ಯಕ್ರಮ(Stats Level Programme) ಬಸವಣ್ಣನ ತವರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ(Basavanadu Bagewadi) ನಡೆಯಲಿದೆ.
ಈ ಕುರಿತು ಮಾಹಿತಿ ನೀಡಿರುವ ಬಸವ ಸೈನ್ಯದ ಸಂಸ್ಥಾಪಕ ಶಂಕರಗೌಡ ಬಿರಾದಾರ, ಸರಕಾರ ಈ ವರ್ಷ ಬಸವಣ್ಣನ ಜನ್ಮಸ್ಥಳ ಬಸವನ ಬಾಗೇವಾಡಿ ಪಟ್ಟಣದಲ್ಲಿ ವಿಶ್ವಗುರು ಬಸವಣ್ಣನವರ ಜಯಂತೋತ್ಸವ ಕಾರ್ಯಕ್ರಮವನ್ನು ರಾಜ್ಯಮಟ್ಟದ ಕಾರ್ಯಕ್ರಮವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ತಿಳಿಸಿದ್ದಾರೆ ಎಂದು ಹೇಳಿದರು.
ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಸವ ಜಯಂತಿ ಅಚರಣೆ ಕುರಿತು ಪೂರ್ವಭಾವಿ ಸಭೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಬಸವ ನಾಡಿನ ಜನರ ಬಹು ವರ್ಷಗಳ ಬೇಡಿಕೆಯಾದ ಬಸವ ಜನ್ಮಸ್ಥಳದಲ್ಲಿ ರಾಜ್ಯಮಟ್ಟದ ಜಯಂತೋತ್ಸವ ಕಾರ್ಯಕ್ರಮ ಆಯೋಜನೆ ಈಗ ಈಡೇರಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರದ ಮೇಲೆ ರಾಷ್ಟ್ರೀಯ ಬಸವ ಸೈನ್ಯ ಸಂಘಟನೆ ಸೇರಿದಂತೆ ಅನೇಕ ಮಠಾಧೀಶರು ಒತ್ತಡ ತಂದಿದ್ದರು. ಈ ಬೇಡಿಕೆಗೆ ಸ್ಪಂದಿಸಿದ ಸರಕಾರ ಈ ವರ್ಷದಿಂದ ಬಸವ ಜಯಂತಿ ಕಾರ್ಯಕ್ರಮವನ್ನು ಬಸವನ ಬಾಗೇವಾಡಿ ಪಟ್ಟಣದಲ್ಲಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ತೀರ್ಮಾನಿಸಿದೆ. ಈ ಕಾರ್ಯಕ್ರಮದ ಯಶಸ್ವಿಗೆ ಜಿಲ್ಲೆಯ ಬಸವ ಭಕ್ತರು, ನಾನಾ ಸಂಘಟನೆಗಳ ಸಹಕಾರ ಅವಶ್ಯವಾಗಿದೆ. ಮೇ ಬಸವ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದು ಡಿಸಿ ತಿಳಿಸಿದ್ದಾರೆ ಎಂದು ಶಂಕರಗೌಡ ಬಿರಾದಾರ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ:
ರಾಷ್ಟ್ರೀಯ ಬಸವ ಸೈನ್ಯದಿಂದ ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ ಭೇಟಿ, ಕೃತಜ್ಞತೆ ಸಲ್ಲಿಕೆ
ಈ ಸಭೆಯಲ್ಲಿ ಬಸವನ ಬಾಗೇವಾಡಿ ತಹಸೀಲ್ದಾರ ವಿಜಯ ಕಡಕೋಳ, ವಿರಕ್ತಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಕಾಂಗ್ರೆಸ್ ಮುಖಂಡರಾದ ಈರಣ್ಣ ಪಟ್ಟಣಶೆಟ್ಟಿ, ರವಿ ರಾಠೋಡ, ಅಶೋಕ ಹಾರಿವಾಳ, ಜಟ್ಟಿಂಗರಾಯ ಮಾಲಗಾರ, ಅನಿಲ ಅಗರವಾಲ ಸೇರಿದಂತೆ ಕೂಡ ಲಸಂಗಮ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಹಾಗೂ ಜಿಲ್ಲೆಯ ನಾನಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿಗೆ ಕೃತಜ್ಞತೆ ಸಲ್ಲಿಕೆ
ಈ ಮಧ್ಯೆ, ವಿಶ್ವಗುರು ಬಸವಣ್ಣನವರ ಜಯಂತಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನಾಗಿ ಆಚರಿಸಲು ನಿರ್ಧರಿಸಿರುವ ರಾಜ್ಯ ಸರಕಾರದ ತೀರ್ಮಾನಕ್ಕೆ ಬಸವನ ಬಾಗೇವಾಡಿಯ ಬಸವ ಭಕ್ತರು ವಿಜಯಪುರ ಜಿಲ್ಲಾಧಿಕಾರಿಯಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಈರಣ್ಣ ಪಟ್ಟಣಶೆಟ್ಟಿ, ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಎಸ್. ಬಿರಾದಾರ, ನಿಂಗನಗೌಡ ಸೋಲಾಪುರ, ನಿಂಗಪ್ಪ ಅವಟಿ. ಜಟ್ಟಿಂಗರಾಯ ಮಾಲಗಾರ, ಪ್ರಶಾಂತ ಮುಂಜಾನೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.