ವಿಜಯಪುರ: ರಾಜ್ಯೋತ್ಸವ ಪ್ರಶಸ್ತಿ(Rajyotsava Awardee) ಪುರಸ್ಕೃತ ಹಿರಿಯ ಸಾಹಿತಿ(Senior Literaute) ಡಾ ಕೃಷ್ಣ ಕೊಲ್ಹಾರಕುಲಕರ್ಣಿ(Dr Krishna Kolhar Kulkarni) ರಚಿಸಿರುವ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ(Karnataka Sahitya Academy Award Win) ಪಾತ್ರವಾಗಿರುವ ‘ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ ರಾಮಪ್ಪ ಬಾಲಪ್ಪ ಬಿದರಿ(Ramappa Balappa Bidari) ಪುಸ್ತಕ ಬಿಡುಗಡೆಗೆ ಸಜ್ಜಾಗಿದೆ.
ಮೇ 5 ರಂದು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿರುವ ನಂದಿ ಸಕ್ಕರೆ ಕಾರ್ಖಾನೆಯ ಕೆ. ಎಚ್. ಪಾಟೀಲ ಸಭಾ ಭವನದಲ್ಲಿ ಗ್ರಂಥ ಲೋಕಾರ್ಪಣೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಸಂ. 4ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಹೊನಗನಹಳ್ಳಿಯ ಬಿದರಿ ಪರಿವಾರ ಮತ್ತು ಬಳಗ ಆಯೋಜಿಸಿದ್ದು, ಈ ಕಾರ್ಯಕ್ರಮವನ್ನು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರು ಉದ್ಘಾಟಿಸಲಿದ್ದಾರೆ. ವಿಜಯಪುರ ಸಂಸದ ಮತ್ತು ಕೇಂದ್ರ ಮಾಜಿ ಸಚಿವ ರಮೇಶ ಜಿಗಜಿಣಗಿ ಅವರು, ರಾಮಪ್ಪ ಬಾಲಪ್ಪ ಬಿದರಿ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಲಿದ್ದಾರೆ. ಮಾಜಿ ಸಚಿವ ಮತ್ತು ಗದಗ ಶಾಸಕ ಎಚ್. ಕೆ. ಪಾಟೀಲ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಬಾಗಲಕೋಟೆ ಸಂಸದ ಪಿ. ಸಿ. ಗದ್ದಿಗೌಡರ ಮತ್ತು ವಿಧಾನ ಪರಿಷತ್ ಪ್ರತಿಪಕ್ಷದ ಮಾಜಿ ನಾಯಕ ಎಸ್. ಆರ್. ಪಾಟೀಲ ಅವರು ಕನ್ನಡ ಮತ್ತು ಇಂಗ್ಲಿಷ್ ಗ್ರಂಥಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಖ್ಯಾತ ನ್ಯಾಯವಾದಿ ಮೋಹನ ಕಾತರಕಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.
ಡಾ. ಕೃಷ್ಣ ಕೊಲ್ಹಾರಕುಲಕರ್ಣಿ ಗ್ರಂಥ ಪರಿಚಯವನ್ನು ಮಾಡಿಕೊಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಬಬಲೇಶ್ವರ ಶಾಸಕ ಎಂ. ಬಿ. ಪಾಟೀಲ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ(ಯತ್ನಾಳ), ಬಾಗಲಕೋಟೆ ಶಾಸಕ ವೀರಣ್ಷ ಚರಂತಿಮಠ, ದೇವರ ಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಹುನಗುಂದ ಶಾಸಕ ದೊಡ್ಡನಗೌಡ ಜಿ. ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಸುನೀಲಗೌಡ ಪಾಟೀಲ, ಪಿ. ಎಚ್. ಪೂಜಾರ, ಮಾಜಿ ಶಾಸಕ ಡಿ. ಆರ್. ಪಾಟೀಲ, ಬಾಗಲಕೋಟೆ ಡಿಸಿಸಿ.ಬ್ಯಾಂಕಿನ ಅಧ್ಯಕ್ಷ ಅಜಯಕುಮಾರ ಸರನಾಯಕ, ಮಾಜಿ ಶಾಸಕರಾದ ಜೆ. ಟಿ. ಪಾಟೀಲ, ಮಾಜಿ ಸಚಿವ ಸಿ. ಎಸ್. ನಾಡಗೌಡ, ಅಖಿಲ ಭಾರತ ಸಹಕಾರಿ ಸಕ್ಕರೆ ಕಾರ್ಖಾನೆ ಮಹಾಮಂಡಳದ ಮಾಜಿ ಅಧ್ಯಕ್ಷ ಎಂ. ಆರ್. ದೇಸಾಯಿ ಅವರು ಪಾಲ್ಗೋಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಪುಸ್ತಕದ ಲೇಖಕರಾದ ಡಾ. ಕೃಷ್ಣ ಕೊಲ್ಹಾರಕುಲಕರ್ಣಿ, ಅನುವಾದಕಿ ಡಾ ಸುಕನ್ಯಾ ರಾವ, ಪುಸ್ತಕ ವಿನ್ಯಾಸಗೊಳಿಸಿದ ಎಂ. ಕೆ. ಆನಂದರಾಜೇ ಅರಸ ಮತ್ತು ಗ್ರಂಥ ಪ್ರಕಟಿಸಿದ ವಚವಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನೆ ಕೇಂದ್ರದ ಕಾರ್ಯದರ್ಶಿ ಡಾ ಎಂ. ಎಸ್. ಮದಭಾವಿ ಅವರುಗಳನ್ನು ಸನ್ಮಾನಿಸಲಾಗುವುದು ಎಂದು ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.