Water DC: ಹಳ್ಳಿ ಜನರ ಸಮಸ್ಯೆ ತಿಳಿಯಲು ಗ್ರಾಮ ಸಂಚಾರ ಆರಂಭಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ

ವಿಜಯಪುರ: ವಿಜಯಪುರVijayapura) ಜಿಲ್ಲಾಧಿಕಾರಿ(Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammanavar) ಗ್ರಾಮೀಣ ಪ್ರದೇಶದಲ್ಲಿ(Villages) ಪ್ರವಾಸ(Tour) ಕೈಗೊಂಡು ಕುಡಿಯುವ ನೀರು ಪೂರೈಕೆ ಪರಿಸ್ಥಿತಿ ಮತ್ತು ಕೆರೆಗಳ ವ್ಯವಸ್ಥೆ ಸೇರಿದಂತೆ ಇನ್ನೀತರ ಮೂಲಸೌಕರ್ಯಗಳ ಬಗ್ಗೆ ಖುದ್ದು ಅವಲೋಕನ ನಡೆಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರೊಂದಿಗೆ ಇಂಡಿ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಮೊದಲಿಗೆ ಬಸನಾಳ ಗ್ರಾಮದಲ್ಲಿ ನೀರಿಗಾಗಿ ಸಾಲುಗಟ್ಟಿ ನಿಂತಿದ್ದ ಜನರ ಅಹವಾಲು ಆಲಿಸಿದರು.  ಪದೇ ಪದೇ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದ್ದಲ್ಲಿ ಶಾಶ್ವತ ಪರಿಹಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಎಂದು ಜಿಲ್ಲಾಧಿಕಾರಿಗಳು ಪಿಡಿಓ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.  ಇದಕ್ಕೆ ಸ್ಥಳೀಯ ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಸಹಕಾರ ನೀಡಲು ಮನವಿ ಮಾಡಿದರು.

ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಗ್ರಾಮ ಸಂಚಾರ ನಡೆಸಿದರು

ಬಳಿಕ ಜಿಲ್ಲಾಧಿಕಾರಿಗಳು, ಹಳಗುಣಕಿ ಗ್ರಾಮದ ಪರಿಶಿಷ್ಟ ಜಾತಿ  ಸಮುದಾಯದ ಕಾಲನಿಗೆ ಭೇಟಿ ನೀಡಿದರು.  ಅಲ್ಲಿನ ಕುಂದು- ಕೊರತೆಗಳ ಬಗ್ಗೆ ಪರಿಶೀಲನೆ ನಡೆಸಿದರು.  ಅಲ್ಲದೇ, ಕಾಲನಿಗೆ ಅಗತ್ಯವಿರುವ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನು ಓದಿ:

Drinking Water: ಕುಡಿವ ನೀರಿಗೆ ತೊಂದರೆಯಾಗದಂತೆ ಕ್ರಮ: ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ಬಳಿಕ ಡಿಸಿ ಬಬಲಾದ್ ಗ್ರಾಮ ಒನ್ ಕೇಂದ್ರಕ್ಕೆ ಭೇಟಿ ನೀಡಿದರು.  ಗ್ರಾಮ ಒನ್ ಸೇವೆಗಳು ಗ್ರಾಮೀಣ ಜನರಿಗೆ ಸರಿಯಾಗಿ ತಲುಪುವ ನಿಟ್ಟಿನಲ್ಲಿ ಕೇಂದ್ರವು ಜನತೆಗೆ ಹತ್ತಿರವಾಗಬೇಕು ಎಂದು ಸಲಹೆ ಮಾಡಿದರು.  ಅಲ್ಲಿಂದ ಜಿಲ್ಲಾಧಿಕಾರಿಗಳು ಜಿನುಗು ಕೆರೆ ವೀಕ್ಷಣೆ ನಡೆಸಿದರು. ಇದೆ ವೇಳೆ ಹಲಸಂಗಿ ಕೆರೆಯಿಂದ ನೀರು ಲಿಫ್ಟ್ ಆಗುವುದರ ಬಗ್ಗೆ ಕೂಡ‌ ಪರಿವೀಕ್ಷಣೆ ನಡೆಸಿದರು.

ವಿಶೇಷ ಸಭೆ

ಈ ಭೇಟಿ ಬಳಿಕ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಇಂಡಿ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.  ಜಿಲ್ಲೆಯಲ್ಲಿ ವಿಶೇಷವಾಗಿ ಇಂಡಿ ತಾಲೂಕಿನ ಕೆಲ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆ ಎಂದು ವರದಿಯಾಗಿದ್ದು,‌ ಇದಕ್ಕೆ ವಿಶೇಷ‌ ಗಮನ ಹರಿಸಬೇಕು ಎಂದು ತಹಸೀಲ್ದಾರ, ತಾ. ಪಂ. ಇಓ ಮತ್ತು ಪಿಡಿಓ ಸೇರಿದಂತೆ ತಾಲೂಕು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಿಇಓ ನಿರ್ದೇಶನ

ಇದೇ ವೇಳೆ, ಜಿಲ್ಲಾ ಪಂಚಾಯಿತಿ ಸಿಇಓ ರಾಹುಲ ಶಿಂಧೆ ಅವರು ಮಾತನಾಡಿ, ನಗರ ಸೇರಿದಂತೆ ಗ್ರಾಮೀಣ ಜನರಿಗೆ ನೀರು ಪೂರೈಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಇದನ್ನರಿತು ಅಧಿಕಾರಿಗಳು ಯಾವುದೇ ಸಬೂಬು ಹೇಳದೇ ಕಾರ್ಯಪ್ರವೃತ್ತರಾಗಿ ನೀರು ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಇಂಡಿ ತಾಲೂಕು ತಹಸೀಲ್ದಾರ ಸಿ. ಎಸ್ .ಕುಲಕರ್ಣಿ ಸೇರಿದಂತೆ ಇತರ ಅಧಿಕಾರಿಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌