Horatti Joined BJP: ಬಿಜೆಪಿ ಸೇರಿದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನ(Legislative) ಪರಿಷತ(Council) ಮಾಜಿ ಸಭಾಪತಿ(Former Speaker) ಬಸವರಾಜ ಹೊರಟ್ಟಿ(Basavaraj Horatti) ಅವರು ಬಿಜೆಪಿ(BJP) ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಬಸವರಾಜ ಹೊರಟ್ಟಿ ಅವರಿಗೆ ಸಿಎಂ‌ಬಸವರಾಜ ಬೊಮ್ಮಾಯಿ, ಬಿಜೆಪಿ ಮುಖಂಡರು ಶುಭ ಕೋರಿದರು

ಈ ಸಂದರ್ಭದಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್, ಸಚಿವರಾದ ಗೋವಿಂದ ಕಾರಜೋಳ, ಸಿ. ಸಿ. ಪಾಟೀಲ, ಆರ್. ಅಶೋಕ್, ಅರಗ ಜ್ಞಾನೆಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಶಾಸಕರಾದ ಸಿದ್ದು ಸವದಿ, ಕಳಕಪ್ಪ ಬಂಡಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌