ವಿಜಯಪುರ: ಉದ್ಯೋಗ ಖಾತ್ರಿ(Job Guarantee)ಯಡಿ ಈ ವರ್ಷದಲ್ಲಿ(This Year) ಜಿಲ್ಲೆಯ ಬಬಲೇಶ್ವರ(Babaleshwar) ಮತ್ತು ತಿಕೋಟಾ(Tikota) ತಾಲೂಕುಗಳ ಪ್ರತಿ ಗ್ರಾ. ಪಂ. ಗಳಿಗೆ ಹೆಚ್ಚುವರಿಯಾಗಿ ರೂ. 25 ಲಕ್ಷ ಅನುದಾನ(Grant) ನೀಡುವಂತೆ ತಾವು ಮಾಡಿದ ಮನವಿಗೆ ಜಿ. ಪಂ ಅಧಿಕಾರಿಗಳು ಸ್ಪಂದಿಸಿದ್ದಾರೆ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ನೀಡಿರುವ ಅವರು, ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳಲ್ಲಿ ನೀರಾವರಿ ಪ್ರದೇಶ ಹೆಚ್ಚಾಗಿದೆ. ಅಲ್ಲದೆ ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಅಡಿ ಈ ತಾಲೂಕುಗಳ ಪ್ರತಿ ಗ್ರಾ. ಪಂ. ಗಳಿಗೆ ರೂ. 25 ಲಕ್ಷ ಅನುದಾನವನ್ನು ಹೆಚ್ಚುವರಿಯಾಗಿ ಕ್ರೀಯಾಯೋಜನೆಯಲ್ಲಿ ಸೇರಿಸಲು ತಾವು ಎರಡು ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿ(ಪಿಡಿಓ)ಗಳಿಗೆ ನಿರ್ದೇಶನ ನೀಡಬೇಕು. ಅಲ್ಲದೇ ಈ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಕುರಿತು ತಮಗೆ ಮಾಹಿತಿ ನೀಡುವಂತೆ ಈ ಹಿಂದೆ ವಿಜಯಪುರ ಜಿ. ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದೆ. ಈ ಪತ್ರಕ್ಕೆ ಜಿ. ಪಂ. ಅಧಿಕಾರಿಗಳು ಸ್ಪಂದಿಸಿದ್ದಾರೆ ಮತ್ತು ಕ್ರೀಯಾ ಯೋಜನೆಯಲ್ಲಿ ರೂ. 25 ಲಕ್ಷ ಹೆಚ್ಚುವರಿ ಅನುದಾನ ಸೇರಿಸುವಂತೆ ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿ. ಪಂ. ಉಪಕಾರ್ಯದರ್ಶಿ ನಿರ್ದೇಶನ ನೀಡಿದ್ದಾರೆ ಎಂದು ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.