Best University: ದೇಶದ ಅತ್ಯುತ್ತಮ ವೈದ್ಯಕೀಯ ವಿವಿಗಳಲ್ಲಿ ಬಿ ಎಲ್ ಡಿ ಇ ಡೀಮ್ಡ್ ವಿವಿಗೆ ಏಳನೇ ಸ್ಥಾನದ ಹೆಮ್ಮೆ

ವಿಜಯಪುರ: ದೆಹಲಿಯ(Delhi) ಎಜುಕೇಷನ್(Education) ವರ್ಲ್ಡ್(World) ಇಂಡಿಯಾ(India) ಪ್ರೈ. ಲಿ. ನಡೆಸಿದ ದೇಶದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಸಮೀಕ್ಷೆಯಲ್ಲಿ(Good Univesrities Survey) ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯ ಏಳನೇ ಸ್ಥಾನ ಪಡೆದುಕೊಂಡಿದೆ ಎಂದು ಉಪಕುಲಪತಿ ಡಾ. ಆರ್. ಎಸ್. ಮುಧೋಳ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ದೆಹಲಿಯ ಸಂಸ್ಥೆ ದೇಶದ ಪ್ರಮುಖ 300 ನಾನಾ ಸರಕಾರಿ, ಅನುದಾನಿತ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಇರುವ ಮೂಲಭೂತ ಸೌಕರ್ಯಗಳು, ಬೋಧನೆ ಪದ್ಧತಿ, ವಿಜ್ಞಾನ ಸಲಕರಣೆಗಳ, ಸಿಬ್ಬಂದಿ ವರ್ಗ, ಶಿಸ್ತು ಹೀಗೆ ಹತ್ತಾರು ವಿಷಯಗಳ ಕುರಿತು ಸಮೀಕ್ಷೆ ನಡೆಸಿತ್ತು.  ನಂತರ ತಯಾರಿಸಿದ ಅತ್ಯುತ್ತಮ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯಕ್ಕೆ ವೈದ್ಯಕೀಯ ಮತ್ತು ಜೀವ ವಿಜ್ಞಾನ ಕ್ಷೇತ್ರದಲ್ಲಿ 7ನೇ ಸ್ಥಾನ ಬಂದಿರುವುದು ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ.

ವಿಶ್ವವಿದ್ಯಾಲಯಕ್ಕೆ ರಾಷ್ಟ್ರ ಮಟ್ಟದಲ್ಲಿ ಗೌರವ ದೊರಕಿರುವುದಕ್ಕೆ ಬಿ ಎಲ್ ಡಿ ಇ ಸಂಸ್ಥೆಯ ಅಧ್ಯಕ್ಷ ಮತ್ತು ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಎಂ. ಬಿ. ಪಾಟೀಲ ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

ಹೊಸ ಪೋಸ್ಟ್‌