Davos CM: ದಾವೋಸ್ ಶೃಂಗ ಸಭೆ ಫಲಪ್ರದ- ಹೂಡಿಕೆದಾರರಲ್ಲಿ ಕರ್ನಾಟಕ ವಿಶ್ವಾಸ ಮೂಡಿಸಿದೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿ(Karnataka) ಬಂಡವಾಳ ಹೂಡಿಕೆ(Invest) ಮಾಡಲು ಕಂಪನಿಗಳು ಮುಂದೆ ಬಂದಿದ್ದು, ಅಂದಾಜು ರೂ. 65 ಸಾವಿರ ಕೋ. ಬಂಡವಾಳ(Capital) ಹೂಡಿಕೆಗೆ ಕಂಪನಿಗಳು ಬದ್ಧತೆ ತೋರಿವೆ. ಕೈಗಾರಿಕೆ ಸ್ಥಾಪನೆಗೆ(Industry Start) ರಾಜ್ಯ ನೀಡುತ್ತಿರುವ ಪ್ರೋತ್ಸಾಹ ಹಾಗೂ ನೀತಿ ಕಾರಣ ಇದಕ್ಕೆ ಸಾಕ್ಷಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Chief Ministe Basavaraj Bommayi) ಹೇಳಿದ್ದಾರೆ.

ಬೆಂಗಳೂರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ -2022ಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ಸುಎಂ‌ಬಸವರಾಜ ಬೊಮ್ನಾಯಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು

ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿನ ಪೂರಕ ಪರಿಸರ, ನೀತಿ ನಿಯಮಗಳು, ತಂತ್ರಜ್ಞಾನ ಆಧಾರ, ಕೌಶಲ್ಯಯುತ ಮಾನವ ಸಂಪನ್ಮೂಲ, ಆರ್ ಎಂಡ್ ಡಿ ಕೇಂದ್ರಗಳು, ಉದ್ದಿಮೆಗಳಿಗೆ ನೀಡಲಾಗುವ ಪ್ರೋತ್ಸಾಹಕಗಳು, ಭೂಮಿಯ ಲಭ್ಯತೆಗಳಿಂದಾಗಿ ಬಂಡವಾಳ ಹೂಡಿಕೆ ಸಂಸ್ಥೆಗಳಿಗೆ ಕರ್ನಾಟಕದ ಮೇಲೆ ವಿಶ್ವಾಸವನ್ನು ಮೂಡಿಸಿದೆ ತಿಳಿಸಿದರು.

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಹಲವು ಜಾಗತಿಕ ಉದ್ದಿಮೆದಾರರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಕರ್ನಾಟಕ ಬಂಡವಾಳ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದೆ. ರಾಜ್ಯದಲ್ಲಿ ಒಟ್ಟು ರೂ. 65 ಸಾವಿರ ಕೋ. ಬಂಡವಾಳ ಹೂಡಿಕೆಗೆ ವಿಶ್ವ ಪ್ರಮುಖ ಸಂಸ್ಥೆಗಳು ಬದ್ಧತೆ ತೋರಿದ್ದು, ಸುಮಾರು 25 ಕಂಪನಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಭಾರತ ದೇಶವನ್ನು ಹೊಸ ಆರ್ಥಿಕ ಶಕ್ತಿಯಾಗಿ ವಿಶ್ವ ಎದುರು ನೋಡುತ್ತಿದೆ. ಕರ್ನಾಟಕ ರಾಜ್ಯದ ಎಲ್ಲ ರಂಗಗಳಲ್ಲಿ ಹೂಡಿಕೆದಾರರು ಆಸಕ್ತಿ ತೋರಿದ್ದಾರೆ. ಬಂಡವಾಳ ಹೂಡಿಕೆಯ ಜೊತೆಗೆ ವಿಸ್ತರಣಾ ಕಾರ್ಯಕ್ಕೂ ಉತ್ಸುಕತೆ ತೋರಿದ್ದಾರೆ. ಹೈಡ್ರೋ ಪವರ್, ಏರೋಸ್ಪೇಸ್, ನವೀಕರಿಸಬಹುದಾದ ಇಂಧನ ಸೇರಿದಂತೆ ಪ್ರಮುಖ ಕ್ಷೇತ್ರದ ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳು ಬಂಡವಾಳ ಹೂಡಿಕೆಯಲ್ಲಿ ಆಸಕ್ತಿ ತೋರಿವೆ. ಹವಾಮಾನ ಬದಲಾವಣೆ, ನವೀಕರಿಸಬಹುದಾದ ಇಂಧನಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು ಎಂದು ಅವರು ತಿಳಿಸಿದರು.

ಕೋವಿಡ್ ನಂತರ ದೇಶದ ಆರ್ಥಿಕತೆಯ ಬಲವರ್ಧನೆಯಲ್ಲಿ ಕರ್ನಾಟಕ ಮಹತ್ವದ ಪಾತ್ರ ವಹಿಸಿದೆ. ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿರುವ ಸಂಸ್ಥೆಗಳ ಉದ್ದಿಮೆಗಳ ಸ್ಥಾಪನೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯ, ಉದ್ದಿಮೆ ಸ್ಥಾಪನೆಗೆ ಸರಳೀಕೃತ ಪ್ರಕ್ರಿಯೆಗಳು, ಈಸ್ ಆಫ್ ಡೂಯಿಂಗ್ ಬಿಸನೆಸ್ ನೀತಿಯ ಮೂಲಕ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು ಸಿಎಂ ಸ್ಪಷ್ಟಪಡಿಸಿದರು.

ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು ರೂ. 50 ಸಾವಿರ ಕೋ. ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದು, ಮುಂದಿನ ಏಳು ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. 30 ಸಾವಿರಕ್ಕೂ ಹೆಚ್ಚು ಉದ್ಯೋಗವನ್ನು ನೀಡಲಿದೆ ಎಂದು ಬೊಮ್ಮಾಯಿ ತಿಳಿಸಿದರು.

ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ರೂ. 2000 ಕೋ. ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. 10000ಕ್ಕೂ ಹೆಚ್ಚು ಉದ್ಯೋಗವನ್ನು ನೀಡಲಿದೆ ಎಂದು ಸಿಎಂ ಮಾಹಿತಿ‌ ನೀಡಿದರು.

ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ ಎನರ್ಜಿ, ಸೀಮೆನ್ಸ್ , ಅಬ್ ಇನ್ಬೇವ್, ದಸ್ಸಾಲ್ಟ್ ಸಿಸ್ಟಂ , ನೆಸ್ಟ್ಲೆ, ಆರ್ಸೆಲಾರ್ ಮಿತ್ತಲ್ ಸಂಸ್ಥೆ, ಭಾರ್ತಿ ಎಂಟರ್ ಪ್ರೈಸಸ್, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡುವ ಭರವಸೆ ನೀಡಿವೆ ಎಂದು ಅವರು ತಿಳಿಸಿದರು.

ಅಲ್ಲದೆ ಅದಾನಿ ಗ್ರೂಪ್, ದಾಲ್ಮಿಯಾ ಸಿಮೆಂಟ್, ಜಾನ್ಸ್ ನ್ ಕಂಟ್ರೋಲ್ಸ್, ಹನಿವೆಲ್, ಐಬಿಎಂ, ಐಕಿಯ ಸ್ಟೋರ್ಸ್, ಪೇಪಾಲ್, ಆಕ್ಸಿಸ್ ಬ್ಯಾಂಕ್ ಸಂಸ್ಥೆಗಳು ರಾಜ್ಯದ ನಾನಾ ವಲಯಗಳಲ್ಲಿ ಹೂಡಿಕೆ ಅವಕಾಶದ ಬಗ್ಗೆ ಆಸಕ್ತಿ ತೋರಿರುವುದಾಗಿ ಅವರು ತಿಳಿಸಿದರು.

ಕರ್ನಾಟಕ ಸರಕಾರ ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಕೈಗೊಂಡಿರುವ ಯೋಜನೆಯಂತೆ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲ ಸೌಲಭ್ಯ ನೀಡಲು ಆಕ್ಸಿಸ್ ಬ್ಯಾಂಕ್ ಸಂಸ್ಥೆಗೆ ಆ್ಯಂಕರ್ ಬ್ಯಾಂಕ್ ಆಗಿ ಕಾರ್ಯ ನಿರ್ವಹಿಸುವಂತೆ ಕೋರಲಾಗಿದೆ. ನವೆಂಬರ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ ಹಾಗೂ ಬೆಂಗಳೂರು ಟೆಕ್ ಸಮಿಟ್ ನಲ್ಲಿ ಭಾಗವಹಿಸಲು ವಿಶ್ವದ ಎಲ್ಲ ಪ್ರಮುಖ ಸಂಸ್ಥೆಗಳಿಗೆ ಆಹ್ವಾನ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರುಮ

ನವೆಂಬರ್ ತಿಂಗಳೊಳಗೆ ನಗರದ ಮೂಲ ಸೌಕರ್ತಗಳನ್ನು ಸರಿಪಡಿಸಲಾಗುವುದು.. ಇದಕ್ಕಾಗಿ ಕಾರ್ಯಪಡೆಯನ್ನು ರಚಿಸಲಾಗಿದೆ. ನಗರೋತ್ಥಾನ ಯೋಜನೆಯಡಿಯಲ್ಲಿ ರೂ.‌6000 ಕೋ. ಅನುದಾನಕ್ಕೆ ಅನುಮೋದನೆ ನೀಡಲಾಗಿದ್ದು, ಮುಂದಿನ 18 ತಿಂಗಳಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Leave a Reply

ಹೊಸ ಪೋಸ್ಟ್‌