ವಿಜಯಪುರ: ಮಳೆಯಿಂದ ಹಾನಿಗೀಡಾಗುವ(Rain Loss) ಪ್ರದೇಶಗಳಲ್ಲಿ ಪರಿಹಾರ(Compensation) ಕ್ರಮಗಳನ್ನು(Actions) ಅಚ್ಚುಕಟ್ಟಾಗಿ ಕೈಗೊಳ್ಳಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ(Vijayapura In charge Secretary) ಕಾರ್ಯದರ್ಶಿ ಡಿ. ರಂದೀಪ(D Randeep) ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಆಸ್ತಿಪಾಸ್ತಿ ಹಾಗೂ ಜನ-ಜಾನುವಾರು ಹಾನಿ ಪ್ರಕರಣಗಳಿಗೆ ಕಾಲಮಿತಿಯೊಳಗೆ ಪರಿಹಾರ ಒದಗಿಸಲು ಮೊದಲ ಆದ್ಯತೆ ನೀಡಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ಅವರು ನೀಡಿದರು.
ಮಳೆ ಮತ್ತು ಪ್ರವಾಹದಂತಹ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಸಂಖ್ಯೆಗಳನ್ನು ಹೆಚ್ಚಿನ ರೀತಿಯಲ್ಲಿ ಪ್ರಚಾರ ಮಾಡಬೇಕು ಎಂದು ತಹಸೀಲ್ದಾರಗಳಿಗೆ ಅವರು ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ಬಿ. ದಾನಮ್ಮನವರ ಮಾತನಾಡಿ, ಜಿಲ್ಲೆಯಲ್ಲಿ ಸಿಡಿಲಿನಿಂದಾದ ಹಾನಿಯ ಏಳು ಪ್ರಕರಣಗಳಿಗೆ ಈಗಾಗಲೇ ರೂ. 5 ಲಕ್ಷ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲನಿಂದ ಈವರೆಗೆ ಒಟ್ಟು 82 ಜಾನುವಾರು ಹಾನಿ ಪ್ರಕರಣಗಳಿಗೆ ಪರಿಹಾರ ಕಲ್ಪಿಸಲು ಮತ್ತು ಒಟ್ಟು 57 ಮನೆಹಾನಿ ಪ್ರಕರಣಗಳ ಪೈಕಿ
52 ಪ್ರಕರಣಗಳಿಗೆ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಒಟ್ಟು 279 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿ ಪೈಕಿ ಇದುವರೆಗೆ ರೂ. 32.82 ಲಕ್ಷ ರೂ. ನಷ್ಟು ಪರಿಹಾರ ಕಲ್ಪಿಸಲಾಗಿದೆ. ತಿಕೋಟಾ, ಬಬಲೇಶ್ವರ, ಚಡಚಣ, ಕೋಲ್ಹಾರ ಮತ್ತು ನಿಡಗುಂದಿ ಸೇರಿದಂತೆ ನಾನಾ ಕಡೆ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆ. ಇತ್ತೀಚೆಗೆ ಜಿಲ್ಲಾ ಮಟ್ಟದ ವಿಪತ್ತು
ನಿರ್ವಹಣಡ ಸಮಿತಿ ಸಭೆ ನಡೆಸಿ, ಮಳೆ ಹಿನ್ನೆಲೆಯಲ್ಲಿ ಕೇಂದ್ರ ಸ್ಥಾನದಲ್ಲಿರಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಈವರ್ಷವೂ 17000 ಕ್ವಿಂಟಲ್ ಬೀಜ ದಾಸ್ತಾನಿಗೆ ಕ್ರಮ ಕೈಗೊಳ್ಳಲಾಗಿದೆ. ಈ ಬಾರಿ ಸೂರ್ಯಕಾಂತಿ ಬೀಜಕ್ಕೆ ಹೆಚ್ಚಿನ ಬೇಡಿಕೆ ಇದೆ. ನಮ್ಮಲ್ಲಿ ಈಗಾಗಲೇ 25399 ಮೆಟ್ರಿಕ್ ಟನ್ ನಷ್ಟು ಗೊಬ್ಬರ ದಾಸ್ತಾನು ಇದೆ ಎಂದು ಜಂಟಿ ಕೃಷಿ ನಿರ್ದೇಶಕ ಡಾ. ರಾಜಶೇಖರ ವಿಲಿಯಮ್ಸ್ ಸಭೆಗೆ ಮಾಹಿತಿ ನೀಡಿದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಎಎಸ್ಪಿ ಡಾ. ರಾಮ ಲಕ್ಷ್ನಣ ಅರಸಿದ್ದಿ, ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ರಾಮಚಂದ್ರ ಗಡಾದೆ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ, ತಹಸೀಲ್ದಾರರು, ತಾಪಂ ಇಓಗಳು, ನಾನಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.