ವಿಜಯಪುರ: ಮಕ್ಕಳಲ್ಲಿ(Children) ಶಿಸ್ತು(Discipline) ಮತ್ತು ದೇಶಪ್ರೇಮ(Patriotism) ಮೂಡಿಸಲು ಸ್ಕೌಟ್ಸ್ ಆ್ಯಂಡ್ ಗೈಡ್ಸ್(Scouts And Guides) ಅವಶ್ಯಕವಾಗಿದೆ ಎಂದು ಜಿಲ್ಲಾ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕೋಶಾಧ್ಯಕ್ಷ ಸಹಜಾನಂದ ದಂದರಗಿ (Sahajanand Dandharagi) ಹೇಳಿದರು.
ನಗರದ ಬಿ ಎಲ್ ಡಿ ಈ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಾಲೇಜು ಯುವ ರೆಡ್ ಕ್ರಾಸ್ ಘಟಕ ಹಾಗೂ ಏನ್ ಎಸ್ ಎಸ್ ಘಟಕದ ಅಡಿಯಲ್ಲಿ ಆಯೋಜಿಸಲಾಗಿದ್ದ ಸ್ಕೌಟ್ ಆ್ಯಂಡ್ ಗೈಡ್ಸ್ ತರಬೇತಿ ಶಿಬಿರದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು.
ವರ್ಗಕೋಣೆಯು ನಮ್ಮ ಬದುಕಿನ ಒಂದು ಭಾಗವಾಗಬೇಕು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಇಂದಿನ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸುವುದು ನಮ್ಮೆಲ್ಲರ ಗುರುತರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಭಾರತಿ. ವೈ. ಖಾಸನೀಸ ಮಾತನಾಡಿ, ಶಿಕ್ಷಕರನ್ನು ಮಾನಸಿಕವಾಗಿ ಬಲಿಷ್ಟಗೊಳಿಸುವ ತರಬೇತಿ ಇದಾಗಿದೆ. ಮಕ್ಕಳಿಗೆ ಹಲವಾರು ಚಟುವಟಿಕೆಗಳ ಕುರಿತು ತರಬೇತಿ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಮಕ್ಕಳನ್ನು ತರುವುದು ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಗುರಿಯಾಗಿದೆ ಎಂದು ಹೇಳಿದರು.
ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಪರಶುರಾಮ ಎಸ್. ಕುಂಬಾರ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಶಿಕ್ಷಣಾರ್ಥಿಗಳಿಗೆ ತರಬೇತಿ ನೀಡಿದರು.
ಯುವ ರೆಡ್ ಕ್ರಾಸ್ ಘಟಕದ ಸಂಯೋಜಕ ಡಾ. ಮಂಜುನಾಥ್ ಕೋರಿ ಸ್ವಾಗತಿಸಿ ಪರಿಚಯಿಸಿದರು. ಶ್ರೀಧರ ಜಂಡೆ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮಿ ನಾಯಕ ಪ್ರಾರ್ಥಿಸಿದರು. ಆನಂದ್ ಪತ್ತಾರ ವಂದಿಸಿದರು.
ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕರ ಹೊರತಾದ ಹಾರತಾದ ಸಿಬ್ಬಂದಿ ಉಪಸ್ಥಿತರಿದ್ದರು