Panchamasali Demand: ಜೂ. 27 ರೊಳಗೆ ಮೀಸಲಾತಿ ಕುರಿತು ಅಂತಿಮ ನಿರ್ಧಾರ ಕೈಗೊಳ್ಳದಿದ್ದರೆ ಉಗ್ರ ಹೋರಾಟ- ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಗೆ

ಬೆಂಗಳೂರು: ಲಿಂಗಾಯಿತ(Lingayat) ಪಂಚಮಸಾಲಿ(Panchamasali) ಸಮುದಾಯಕ್ಕೆ(Community) 2ಎ ಮೀಸಲಾತಿ(2A Reservation) ನೀಡುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ(Shree Basavajaya Mrutyunjaya Swamiji) ನೇತೃತ್ವದಲ್ಲಿ ಸಮುದಾಯದ ಮುಖಂಡರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿ ಸ್ವಾಮೀಜಿಗಳ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಿದ ಸಮಾಜದ ಮುಖಂಡರು, ಜೂ. 27ರೊಳಗೆ ಪ್ರಮುಖ ಹೋರಾಟಗಾರರೊಂದಿಗೆ ಅಂತಿಮ ಸುತ್ತಿನ ಮಾತುಕತೆಗೆ ಸಮಯ ನಿಗದಿ ಮಾಡಬೇಕು.  ಅಲ್ಲದೇ, 2ಎ ಮೀಸಲಾತಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು.  ಈ ಮೂಲಕ ಸರಕಾರ ತನ್ನ ಸ್ಪಷ್ಟ ನಿಲುವನ್ನು ತಿಳಿಸಬೇಕು ಎಂದು ಅವರು ಆಗ್ರಹಿಸಿದರು.

ಅಲ್ಲದೇ, ಪಂಚಮಸಾಲಿ ಸಮುದಾಯ ಮತ್ತು ಮೀಸಲಾತಿಗೆ ಹೋರಾಟ ನಡೆಸುತ್ತಿರುವ ಹಾಲುಮತ, ವಾಲ್ಮಿಕಿ ಮತ್ತು ಲಿಂಗಾಯಿತ ಉಪಪಂಗಡಗಳ ಮುಖಂಡರೊಂದಿಗೂ ಸಭೆ ನಡೆಸಬೇಕು.  ಇಲ್ಲದಿದ್ದರೆ ಬೆಂಗಳೂರಿನಲ್ಲಿ 25 ಲಕ್ಷ ಜನರನ್ನು ಸೇರಿಸಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ. ವಿಜಯಾನಂದ ಕಾಶಪ್ಪನವರ, ಮಾಜಿ ಸಚಿವ ವಿನಯ್ ಕುಲಕರ್ಣಿ, ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ.ಎಸ್.ಬಿರಾದಾರ, ಮುಖಂಡರಾದ ಪ್ರಭಾಕರಗೌಡ ದರೆಪ್ಪ ಟಕ್ಕಣ್ಣವರ, ದೀಪಕ ಜುಂಜರವಾಡ, ಸಂಜು ಬಿರಾದಾರ, ಶಿವಪುತ್ರ ಮಲ್ಲಿವಾಡ ಪುಟ್ಟರಾಜ, ಶಿವಾನಂದ ಬೀಳಗಿ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌