Governor Vachana Shila Mantap: ಬಸವ ನಾಡಿನಲ್ಲಿ ವಚನ ಶಿಲಾ ಮಂಟಪ ಲೋಕಾರ್ಪಣೆ ಮಾಡಿದ ರಾಜ್ಯಪಾಲ ಥಾವರ ಚಂದ ಗೆಲ್ಹೋಟ್
ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ನಿರ್ಮಿಸಲಾಗಿರುವ ವಚನ ಶಿಲಾ ಮಂಟಪವನ್ನು ರಾಜ್ಯಪಾಲ ಥಾವರ ಚಂದ ಗೆಹ್ಲೋಟ್ ಲೋಕಾರ್ಪಣೆ ಮಾಡಿದ್ದಾರೆ. ಇಂಗಳೇಶ್ವರ ಮಠದ ಹಿರಿಯ ಶ್ರೀಗಳಾದ, ಚನ್ನಬಸವ ಸ್ವಾಮೀಜಿ ಸೇರಿದಂತೆ ನಾನಾ ಮಠಾಧೀಶರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮಕ್ಕೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಬಳಿಕ ಮಾತನಾಡಿದ ಅವರು, ವಿಶ್ವಕ್ಕೆ ಸಮಾನತೆ ಸಾರಿದ, ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಅಣ್ಣ ಬಸವಣ್ಣನವರ ವಚನಗಳು ಈ ವಚನ […]
Hospital Yadiyurappa: ಬಸವ ನಾಡಿನಲ್ಲಿ ಆರ್ ಕೆ ಎಮ್ ಆಸ್ಪತ್ರೆಯಲ್ಲಿ ನಾನಾ ಘಟಗಳನ್ನು ಉದ್ಘಾಟಿಸಿದ ಬಿ. ಎಸ್. ಯಡಿಯೂರಪ್ಪ
ವಿಜಯಪುರ: ವಿಜಯಪುರ ನಗರದಲ್ಲಿ ಆರ್ ಕೆ ಎಮ್ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾಗಿರುವ ಸ್ರ್ತೀ ರೋಗ ಮತ್ತು ಪ್ರಸೂತಿ ವಿಭಾಗದ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ಚಿಕ್ಕ ಮಕ್ಕಳ ತೀವ್ರ ನಿಗಾ ಘಟಕವನ್ನು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ಆರ್ ಕೆ ಎಂ ಆಸ್ಪತ್ರೆ ಮಾಡುತ್ತಿರುವ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು. ಈ ಭಾಗದಲ್ಲಿ ವೈದ್ಯರ ಹಾಗೂ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳ ಕೊರತೆಯನ್ನು ನೀಗಿಸುವಲ್ಲಿ ಸಂಸ್ಥೆಯ ಉತ್ತಮವಾಗಿ ಕೆಲಸ ಮಾಡುತ್ತಿದೆ. ವಿಜಯಪುರದ […]
Rajyasabha Election: ಸಿದ್ಧರಾಮಯ್ಯ ಹಾಕಿರುವ ಮೂರನೇ ಕ್ಯಾಂಡಿಡೇಟ್ ರಾಜ್ಯ ಸಭೆ ಚುನಾವಣೆಯಲ್ಲಿ ಗೆಲ್ಲಲ್ಲ- ಎನ್. ರವಿಕುಮಾರ
ವಿಜಯಪುರ: ಸಿದ್ಧರಾಮಯ್ಯ ಅವರಿಗೆ ಡೌಟ್ ಇದೆ. ಅವರು ಹಾಕಿರುವ ಕ್ಯಾಂಡಿಡೇಟ್ ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಸದಸ್ಯ ಎಸ್. ರವಿಕುಮಾರ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಮೋಸ ಮಾಡುವುದಕ್ಕಾಗಿ ಮತ್ತು ಅಲ್ಪ ಸಂಖ್ಯಾತರಿಗೆ ಆಸೆ ತೋರಿಸುವ ಸಲುವಾಗಿ ಗೆಲ್ಲುವ ಸೀಟು ಕೊಡುವುದಿಲ್ಲ. ವಿಧಾನ ಸಭೆ ಪ್ರತಿಪಕ್ಷದ ನಾಯಕ ಎಸ್. ಸಿದ್ಧಾರಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಅಲ್ಪಸಂಖ್ಯಾತರಿಗೆ ಮೊದಲನೇ ಸೀಟು ಯಾಕೆ ಕೊಡಲಿಲ್ಲ […]
Congress Jigajinagi: ಕಾಂಗ್ರೆಸ್ಸಿನವರಿಗೆ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುವುದು ಚಟವಾಗಿದೆ- ಪ್ರಕಾಶ ಹುಕ್ಕೇರಿ ವಿದ್ಯಾವಂತರೂ ಅಲ್ಲ, ಶಿಕ್ಷಕರೂ ಅಲ್ಲ, ಪದವೀಧರರೂ ಅಲ್ಲ- ರಮೇಶ ಜಿಗಜಿಣಗಿ
ವಿಜಯಪುರ: ಹೇಳಿಕೆಗಳನ್ನು ತಿರುಚಿ ಅಪಪ್ರಚಾj ಮಾಡುವುದು ಕಾಂಗ್ರೆಸ್ಸಿಗರ ಚಟವಾಗಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ ವಾಯುವ್ಯ ಮತಕ್ಷೇತ್ರದ ಚುನಾವಣೆ ಪ್ರಚಾರ ಸಂದರ್ಭದಲ್ಲಿ ತಾವು ಚಿಕ್ಕೋಡಿಯಲ್ಲಿ ವಿಧಾನ ಪರಿಷತ ಬಿಜೆಪಿ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಅವರ ತೋಟದಲ್ಲಿ ಮಾಧ್ಯಮದವರ ಬಳಿ ಮಾತನಾಡಿದ್ದೆ. ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರ ಕಾರ್ಯವೈಖರಿಯನ್ನು ಟೀಕಿಸಿದ್ದೆ. ಆದರೆ, ಈಗ ಕಾಂಗ್ರೆಸ್ ತಮ್ಮ ಹೇಳಿಕೆಯನ್ನು ತಿರುಚಿ ಬಿಜೆಪಿ ಅಭ್ಯರ್ಥಿಗಳ ಪರ […]
Vijayendra Nirani: ಸಿಎಂ ಮಗ ಮುಖ್ಯಮಂತ್ರಿಯಾದರೆ ತಪ್ಪೇನು? ವಿಜಯೇಂದ್ರ ಪರ ಬ್ಯಾಟ್ ಬೀಸಿದ ಸಚಿವ ಮುರುಗೇಶ ನಿರಾಣಿ ಬ್ಯಾಟಿಂಗ್
ವಿಜಯಪುರ: ಸಿಎಂ ಮಗ ಮುಖ್ಯಮಂತ್ರಿಯಾದರೆ ತಪ್ಪೇನು ಎಂದು ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಪ್ರಶ್ನಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಪರ ಬ್ಯಾಂಟಿಂಗ್ ಮಾಡಿದ್ದಾರೆ. ವಿಜಯೇಂದ್ರ ಸಿಎಂ ಆಗಲಿ. ಸಿಎಂ ಮಗ ಸಿಎಂ ಆದರೆ ತಪ್ಪೇನು? ಎಂದು ಅವರು ಪ್ರಶ್ನಿಸಿದರು. ವಿಜಯೇಂದ್ರ ಅವರಿಗೆ ನಾಯಕನಾಗುವ ಎಲ್ಲ ಕ್ವಾಲಿಟಿ ಇವೆ. ಯಾರ ಹಣೆ ಬರಹದಲ್ಲಿ ಏನು ಬರೆದಿದೆಯೋ ಗೊತ್ತಿಲ್ಲ. ನಮ್ಮ ರಾಜ್ಯದಲ್ಲಿದ್ದವರು ಪ್ರಧಾನಿಯಾದರು ಎಂದು ಹೇಳಿದರು. […]
BSY Vijayendra: ಅಸೆಂಬ್ಲಿ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸ್ತಾರೆ- ಸಾಮೂಹಿಕ ನೇತೃತ್ವದಲ್ಲಿ ಚುನಾವಣೆ ಎದುರಿಸ್ತೇವೆ- ಯಡಿಯೂರಪ್ಪ
ವಿಜಯಪುರ: ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಸಾಮೂಹಿಕ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದೇನೆ. ವಾಯವ್ಯ ಶಿಕ್ಷಕರ ಮತ್ತು ಪದವೀಧರರ ಎರಡೂ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂದು ಹೇಳಿದರು. ರಾಜ್ಯಸಭೆ ಚುನಾವಣೆ ವಿಚಾರ ರಾಜ್ಯಸಭೆ ಚುನಾವಣೆಯಲ್ಲಿ ಮೂರು ಸ್ಥಾನಕ್ಕೆ ಸ್ಪರ್ದೆ ಮಾಡಿದ್ದೇವೆ. ಮೂರೂ ಸ್ಥಾನಗಳಲ್ಲಿ ಗೆಲ್ಲುತ್ತೇವೆ. ಲೆಹರಸಿಂಗ್ ಅವರೂ ದೊಡ್ಡ ಅಂತರದಿಂದ ಗೆಲ್ಲುತ್ತಾರೆ […]
Horticulture Nomination: ಖ್ಯಾತ ದ್ರಾಕ್ಷಿ ಬೆಳೆಗಾರ ಭೀಮಸೇನ ಎಂ. ಕೋಕರೆ ರಾಷ್ಟ್ರೀಯ ತೋಟಗಾರಿಕೆ ಮಂಡಳಿ ನಿರ್ದೇಶಕರಾಗಿ ನೇಮಕ
ವಿಜಯಪುರ: ಖ್ಯಾತ ದ್ರಾಕ್ಷಿ(Grapes) ಬೆಳೆಗಾರ(Grower) ಭೀಮಸೇನ ಎಂ. ಕೋಕರೆ(Bheemasen M Kokare) ಅವರನ್ನು ರಾಷ್ಟ್ರೀಯ ತೋಟಗಾರಿಕೆ ಮಂಡಳಿ(NHB) ನಿರ್ದೇಶಕರಾಗಿ(Director) ನೇಮಕವಾಗಿದ್ದಾರೆ. ಈಗಾಗಲೇ ಹಲವಾರು ಸಂಘ, ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪದಾಧಿಕಾರಿಯಾಗಿ ಭೀಮಸೇನ ಎಂ. ಕೋಕರೆ ಕೆಲಸ ಮಾಡಿದ್ದು, ಈಗಲೂ ನಾನಾ ಸಂಘ ಸಂಸ್ಥೆಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ನವದೆಹಲಿಯಲ್ಲಿರುವ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ಅತ್ಯುನ್ನತ ಮತ್ತು ಅಧಿಕಾರಯುಕ್ತ ಜನರಲ್ ಬಾಡಿ ಗೌರವಾನ್ವಿತ ಸದಸ್ಯರಾಗಿ, ಭಾರತೀಯ ಕಿಸಾನ್ ಸಂಘದ ಅಧ್ಯಕ್ಷರಾಗಿ, ಭಾರತೀಯ ದ್ರಾಕ್ಷಿ ಬೆಳೆಗಾರರ ಒಕ್ಕೂಟದ ಉಪಾಧ್ಯಕ್ಷರಾಗಿ ಕೆಲಸ […]