CM Moovie: 777 ಚಾರ್ಲಿ ಚಿತ್ರ ವೀಕ್ಷಿಸಿ ಭಾವುಕರಾದ ಸಿಎಂ ಬೀದಿ ನಾಯಿಗಳ ದತ್ತು ಪಡೆಯಲು ಕರೆ

ಬೆಂಗಳೂರು: ನಾಯಿ ಮತ್ತು ಮನುಷ್ಯ ಪ್ರೀತಿಯನ್ನು ಅನಾವರಣಗೊಳಿರುವ 777 ಚಾರ್ಲಿ ಕನ್ನಡ ಚಲನ ಚಿತ್ರವನ್ನು ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ತಮ್ಮ ಮನೆಯಲ್ಲಿದ್ದ ಪ್ರೀತಿಯ ನಾಯಿ ಸನ್ನಿ ಯನ್ನು ನೆನಪಿಸಿಕೊಂಡು ಭಾವುಕರಾದರು. ಅಲ್ಲದೇ, ದುಃಖ ತಡೆಯಲಾಗದೇ ಕಣ್ಣೀರು ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆಯಿತು.

ಈ ಚಿತ್ರ ಮನುಷ್ಯ ಮತ್ತು ನಾಯಿಯ ನಡುವಿನ ಪ್ರೀತಿ, ಯಾವುದೇ ಕಟ್ಟುಪಾಡಿಲ್ಲದ (unconditional) ಪ್ರೀತಿಗೆ ಉತ್ತಮ ಉದಾಹರಣೆ. ಇದು ಅತ್ಯಂತ ಪರಿಶುದ್ಧ ಪ್ರೀತಿ ಇದು ಎಂದು ಮುಖ್ಯಮಂತ್ರಿಗಳು ಗದ್ಗದಿತರಾಗಿ ನುಡಿದರು.

ಸುಎಂ‌ಬಸವರಾಜ ಬೊಮ್ನಾಯಿ ಸಚಿವರ ಜೊತೆ 777 ಚಾರ್ಲಿ ಸಿನೇಮಾ ವೀಕ್ಷಿಸಿದರು

ನಾಯಕನಟ ರಕ್ಷಿತ ಶೆಟ್ಟಿ ಮನೋಜ್ಞ ವಾಗಿ ನಟಿಸಿದ್ದಾರೆ. ಈಗ ನಾನು ಮನೆಯಲ್ಲಿ ಹೆಣ್ಣು ನಾಯಿ ಟಿಯಾ ಳನ್ನು ಸಾಕುತ್ತಿರುವುದಾಗಿ ಅವರು ತಿಳಿಸಿದರು.

ಈ ಸಿನಿಮಾ ವೀಕ್ಷಣೆಗೆ ಜನರ ದಟ್ಟಣೆ ನೋಡಿದಾಗ ಪ್ರಾಣಿ ಮತ್ತು ಮನುಷ್ಯನ ಸಂಬಂಧ ವಿರುವ ಚಿತ್ರ ನೋಡಬೇಕು ಎಂದೆನಿಸಿತ್ತು. ರಕ್ಷಿತ್ ಶೆಟ್ಟಿ ಅವರೂ ಚಿತ್ರ ವೀಕ್ಷಿಸಬೇಕೆಂದು ಕರೆದಿದ್ದರು. ಹೀಗಾಗಿ ಚಿತ್ರ ನೋಡಿದಂತಾಯಿತು ಎಂದು ಸಿಎಂ ತಿಳಿಸಿದರು.

ಮನುಷ್ಯ ಮತ್ತು ಪ್ರಾಣಿಗಳ ಸಂಬಂಧ ಅದರಲ್ಲಿಯೂ ನಾಯಿ , ಮನುಷ್ಯನನ್ನು ಅತ್ಯಂತ ಪ್ರೀತಿಸುವ ಪ್ರಾಣಿ. ಮನುಷ್ಯನೂ ನಾಯಿಯನ್ನು ಪ್ರೀತಿಸುತ್ತಾನೆ. ಚಿತ್ರದ ನಿರ್ದೇಶಕರು ಸಂಬಂಧಗಳನ್ನು ಮಾರ್ಮಿಕ ಮತ್ತು ಸೂಕ್ಷ್ಮವಾಗಿ ಭಾವನಾತ್ಮಕವಾಗಿ ತೆಗೆದಿದ್ದಾರೆ ಚಿತ್ರಿಸಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೀದಿ ನಾಯಿಗಳ ರಕ್ಷಣೆಗೆ ಕ್ರಮ, ದತ್ತು ಪಡೆಯಲು ಕರೆ

ಇದೇ ವೇಳೆ, ಬೀದಿನಾಯಿಗಳನ್ನು ಸೂಕ್ತ ರೀತಿಯಲ್ಲಿ ನೋಡಿಕೊಳ್ಳಲು ತಜ್ಞರೊಂದಿಗೆ ಚರ್ಚಿಸಿ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ನಾಯಿಗಳ ತರಬೇತಿ ನೀಡುವವರಿಗೆ ಪ್ರೋತ್ಸಾಹ ನೀಡುವ ವಿಶೇಷ ಕಾರ್ಯಕ್ರಮ ರೂಪಿಸುವ ಚಿಂತನೆ ಇದೆ. ಬೀದಿನಾಯಿಗಳನ್ನು ದತ್ತು ತೆಗೆದುಕೊಳ್ಳಬೇಕು. ಪ್ರಾಣಿಗಳನ್ನು ಹಿಂಸಿಸಬಾರರು.‌ ಬೀದಿ ನಾಯಿಗಳನ್ನು ಹಾಗೂ ಇತರೆ ಪ್ರಾಣಿಗಳನ್ನು ರಕ್ಷಿಸಬೇಕು ಹಾಗೂ ಸಾಧ್ಯವಾದರೆ ದತ್ತು ಪಡೆಯಬೇಕು. ಯಾರೂ ಇಲ್ಲದ ಪ್ರಾಣಿಗಳನ್ನು ದತ್ತು ಪಡೆದು ಸಾಕಿದರೆ ಉಪಕಾರವಾಗುತ್ತದೆ. ಅವುಗಳಿಂದ ಹೆಚ್ಚಿನ ಪ್ರೀತಿ, ಸಂತೋಷ ಹಾಗೂ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಮನೋಜ್ಞ ಕಥೆಯನ್ನು ನಿರ್ದೇಶಕ ಕಿರಣ ಚಿತ್ರಿಸಿದ್ದಾರೆ. ನಾಯಿ ಜೊತೆಗೆ ಪಾತ್ರ ಮಾಡುವುದು ಸುಲಭದ ಮಾತಲ್ಲ. ಅದರ ಭಾವನೆಯ ಮಟ್ಟಕ್ಕೆ ಹೋಗಿ ಪಾತ್ರ ನಿಭಾಯಿಸಬೇಕಾಗುತ್ತದೆ. ರಕ್ಷಿತ ಶೆಟ್ಟಿ ಅವರ ಪಾತ್ರವನ್ನು ಅದ್ಭುತವಾಗಿ ಅಭಿನಯಿಸಿದ್ದಾರೆ. ರಕ್ಷಿತ ಶೆಟ್ಟಿ ಹಾಗೂ ನಿರ್ದೇಶಕ ಕಿರಣ ಅದ್ಭುತ ಸಿನಿಮಾ ಮಾಡಿದ್ದಾರೆ ಎಂದು ಅವರು ಹೇಳಿದರು.

ಎಲ್ಲರೂ ಪ್ರಾಣಿಪ್ರೇಮಿಗಳಾಗಲು ಸಿಎಂ ಕರೆ

ಕನ್ನಡ ಚಿತ್ರರಂಗ ಅಂತಾರಾಷ್ಟ್ರೀಯ ಮಟ್ಟದ ಸಾಧನೆಯನ್ನು ಮಾಡುತ್ತಿದೆ. ಈ ಬಗ್ಗೆ ನಮಗೆ ಹೆಮ್ಮೆ ಇದೆ. ಕೆ.ಜಿ.ಎಫ್ 2 ಹಿನ್ನೆಲೆಯಲ್ಲಿ ಒಂದು ಅರ್ಥಪೂರ್ಣ, ಮನೋಜ್ಞವಾಗಿರುವ ಚಿತ್ರವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾಡಬಹುದು ಎಂದು ನಿರೂಪಿಸಿದ್ದಾರೆ. ಚಿತ್ರ ಅಂತಾರಾಷ್ಟ್ರೀಯ ಮನ್ನಣೆಯನ್ನು ಪಡೆದಿದೆ. ಚಿತ್ರವನ್ನು ಎಲ್ಲರೂ ವೀಕ್ಷಿಸಿ ಪ್ರಾಣಿಗಳ ಪ್ರೇಮಿಗಳಾಗಬೇಕು ಎಂದು ಸಿಎಂ ಕರೆ ನೀಡಿದರು.

ಕನ್ನಡಕ್ಕೆ ಚಿತ್ರರಂಗ ಅಂತಾರಾಷ್ಟ್ರೀಯ ಸ್ಥಾನವನ್ನು ಕಲ್ಪಿಸಿಕೊಟ್ಟಿದೆ.  ಕನ್ನಡ ಸಿನಿಮಾಗಳು. ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯುವಂಥ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಕನ್ನಡ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹಳ ದೊಡ್ಡ ಹೆಸರು ಮಾಡಲಿದೆ. ಕನ್ನಡಕ್ಕೆ ಚಿತ್ರರಂಗ ಅಂತರರಾಷ್ಟ್ರೀಯ ಸ್ಥಾನವನ್ನು ಕಲ್ಪಿಸಿಕೊಟ್ಟಿದೆ ಎಂದು ಅವರು ಹೇಳಿದರು.

ಚಿತ್ರನಗರ

ಮೈಸೂರಿನಲ್ಲಿ ಈಗಾಗಲೇ ಚಿತ್ರನಗರ ನಿರ್ಮಾಣಕ್ಕೆ ಸ್ಥಳ ಮೀಸಲಿರಿಸಿದೆ. ಇಂದಿನ ಹಾಗೂ ಭವಿಷ್ಯದ ತಂತ್ರಜ್ಞಾನವನ್ನು ಬಳಕೆ ಮಾಡಿ ಯಾವ ರೀತಿ ಸ್ಟುಡಿಯೋ ಮಾಡಬಹುದು ಎಂಬುದರ ಕುರಿತು ಆಸಕ್ತರೊಂದಿಗೆ ಮಾತನಾಡಿ ಅಂತಾರಾಷ್ಟ್ರೀಯ ಮಟ್ಟದ ಜಂಟಿ ಉದ್ಯಮವನ್ನು ಕೈಗೊಳ್ಳಲಾಗುವುದು ಎಂದು ಮುಖ್ತಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಸಂದರ್ಭದಲ್ಲಿ ಚಿತ್ರನಟ ರಕ್ಷಿತ ಶೆಟ್ಟಿ, ಸಚಿವರಾದ ಆರ್. ಅಶೋಕ, ಡಾ. ಕೆ. ಸುಧಾಕರ, ಬಿ. ಸಿ. ನಾಗೇಶ ಮುಂತಾದವರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌